ಸಾರಾಂಶ
ಕಳೆದ ವಾರ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಹೇರೂರು ಸಮೀಪದ ರವಿನಗರದ ವಿದ್ಯಾರ್ಥಿ ದಿವಿತ್ (8) ಶನಿವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾನೆ.
ಬಾಳೆಹೊನ್ನೂರು: ಕಳೆದ ವಾರ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಹೇರೂರು ಸಮೀಪದ ರವಿನಗರದ ವಿದ್ಯಾರ್ಥಿ ದಿವಿತ್ (8) ಶನಿವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾನೆ.
ಪಟ್ಟಣದ ಬಿಜಿಎಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಮೂರನೇ ತರಗತಿ ವ್ಯಾಸಂಗ ಮಾಡುತ್ತಿದ್ದ ರವಿನಗರದ ದಿವಿತ್ ಮಾ.30ರಂದು ಕುಪ್ಪಳ್ಳಿಯ ಕವಿಶೈಲಕ್ಕೆ ಶಾಲಾ ವಿದ್ಯಾರ್ಥಿಗಳೊಂದಿಗೆ ಶಾಲಾ ಬಸ್‌ನಲ್ಲಿ ಪ್ರವಾಸಕ್ಕೆ ತೆರಳಿ ವಾಪಾಸ್ ಬಂದು ಹೇರೂರು ಸಮೀಪದ ಬಸರೀಕಟ್ಟೆ ಹ್ಯಾಂಡ್ ಪೋಸ್ಟ್ ಬಳಿ ಬಸ್ಸಿನಿಂದ ಇಳಿದು ರಸ್ತೆ ದಾಟುವಾಗ ಕಾರು ಗುದ್ದಿ ಗಂಭೀರವಾಗಿ ಗಾಯಗೊಂಡಿದ್ದ.
ಬಾಲಕನನ್ನು ತಕ್ಷಣ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತಿತ್ತು. ಶನಿವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ದಿವಿತ್ ಮೃತಪಟ್ಟಿದ್ದಾನೆ. ಈ ಕುರಿತು ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ೦೭ಬಿಹೆಚ್‌ಆರ್ ೩: ದಿವಿತ್