ಸರ್ಕಾರಿ ಶಾಲೆಗಳ ಅಳಿವು ಉಳಿವು ಪೋಷಕರ ಕೈಯಲ್ಲಿದೆ: ಪ್ರವೀಣ ಪೂಜಾರಿ

| Published : Jan 07 2025, 12:15 AM IST

ಸರ್ಕಾರಿ ಶಾಲೆಗಳ ಅಳಿವು ಉಳಿವು ಪೋಷಕರ ಕೈಯಲ್ಲಿದೆ: ಪ್ರವೀಣ ಪೂಜಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಶೃಂಗೇರಿಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜೊತೆ ಉತ್ತಮ ಮೂಲ ಸೌಕರ್ಯಗಳಿವೆ. ಆದರೂ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿರುವುದು ಆತಂಕಕಾರಿ ವಿಷಯವಾಗಿದೆ. ಸರ್ಕಾರಿ ಶಾಲೆಗಳ ಅಳಿವು ಉಳಿವು ಪೋಷಕರ ಕೈಯಲ್ಲಿದೆ ಎಂದು ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣ ಪೂಜಾರಿ ಹೇಳಿದರು.

ವಿದ್ಯಾನಗರ ಸರ್ಕಾರಿ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವ

ಕನ್ನಡಪ್ರಭ ವಾರ್ತೆ, ಶೃಂಗೇರಿ

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜೊತೆ ಉತ್ತಮ ಮೂಲ ಸೌಕರ್ಯಗಳಿವೆ. ಆದರೂ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿರುವುದು ಆತಂಕಕಾರಿ ವಿಷಯವಾಗಿದೆ. ಸರ್ಕಾರಿ ಶಾಲೆಗಳ ಅಳಿವು ಉಳಿವು ಪೋಷಕರ ಕೈಯಲ್ಲಿದೆ ಎಂದು ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣ ಪೂಜಾರಿ ಹೇಳಿದರು.

ವಿದ್ಯಾನಗರ ಸರ್ಕಾರಿ ಪ್ರಾಥಮಿಕ ಶಾಲಾವರಣದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯಾರ್ಥಿಗಳ ಕೊರತೆಯಿಂದ ಬಹುತೇಕ ಶಾಲೆಗಳು ಮುಚ್ಚಲ್ಪಟ್ಟಿದೆ. ಇನ್ನುಳಿದ ಶಾಲೆಗಳು ಇಂದೋ ನಾಳೆಯೋ ಮುಚ್ಚುವ ಹಂತ ತಲುಪಿವೆ. ಸರ್ಕಾರಿ ಶಾಲೆಗಳು ಮೂಲ ಸೌಕರ್ಯ ಹೊಂದಿದ್ದು ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ಆದರೆ ವಿದ್ಯಾರ್ಥಿಗಳ ಕೊರತೆಯೇ ಮೂಲ ಸಮಸ್ಯೆಯಾಗಿದೆ ಎಂದರು.

ಸರ್ಕಾರಿ ಶಾಲೆಗಳಲ್ಲಿ ಓದಿದವರು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡಿದ್ದಾರೆ. ಸರ್ಕಾರಿ ಶಾಲೆಗಳೆಂಬ ನಿರ್ಲಕ್ಷ್ಯ ಕಡೆಗಣನೆ ಮಾಡುವುದು ಸರಿಯಲ್ಲ. ಪೋಷಕರು ಈ ನಿಟ್ಟಿನಲ್ಲಿ ಗಂಭೀರವಾಗಿ ಪರಿಗಣಿಸಬೇಕು. ಸರ್ಕಾರಿ ಶಾಲೆ ಗಳಲ್ಲಿ ಶಿಕ್ಷಕರು, ಗುಣಮಟ್ಟದ ಶಿಕ್ಷಣ, ಕ್ರೀಡಾ ಪರಿಕರಗಳು, ಆಟದ ಮೈದಾನ ಸಹಿತ ಉತ್ತಮ ಮೂಲಭೂತ ಸೌಕರ್ಯಗಳಿವೆ. ಉತ್ತಮ ಫಲಿತಾಂಶವೂ ಬರುತ್ತಿವೆ. ಸರ್ಕಾರಿ ಶಾಲೆಗಳನ್ನು ಉಳಿಸುವ ಕೆಲಸ ನಡೆಯಬೇಕಿದೆ ಎಂದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸತೀಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜೆಸಿಬಿಎಂ ಕಾಲೇಜಿನ ಪ್ರಾಚಾರ್ಯ ಸ್ವಾಮಿ, ಕ್ಷೇತ್ರ ಸಮನ್ವಯಾಧಿಕಾರಿ ಡಾ.ಬಿ.ಆರ್.ಗಂಗಾಧರಪ್ಪ, ಶಾಲಾ ಶಿಕ್ಷಕಿ ಮೈತ್ರಿ ಮತ್ತಿತರರು ಇದ್ದರು. ವಿವಿಧ ಸಾಂಸ್ಕೃತಿಕ ಚಟುವಟಿಕೆ, ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

6 ಶ್ರೀ ಚಿತ್ರ 2-

ಶೃಂಗೇರಿ ವಿದ್ಯಾನಗರ ಸರ್ಕಾರಿ ಪ್ರಾಥಮಿಕ ಶಾಲಾವರಣದಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮವನ್ನು ಪ್ರವೀಣ ಪೂಜಾರಿ ಉದ್ಘಾಟಿಸಿದರು.ಸ್ವಾಮಿ,ಗಂಗಾಧರಪ್ಪ ಮತ್ತಿತರರು ಇದ್ದರು.