ಸಾರಾಂಶ
ಬಾಗಲಕೋಟೆ: ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ರಾಜ್ಯದ ಪ್ರಮುಖ ಮಠಾಧೀಶರು ಭಾಗಿಯಾಗಿದ್ದರು. ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಶ್ರೀ ಜಗದ್ಗುರು ನಿರ್ಮಲಾನಂದನಾಥ ಸ್ವಾಮೀಜಿ, ಕಾಗಿನೆಲೆ ಮಹಾ ಸಂಸ್ಥಾನ ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದ ಮಹಾಸ್ವಾಮೀಜಿ, ಚಿತ್ರದುರ್ಗ ಮಾದರ ಚನ್ನಯ್ಯ ಗುರುಪೀಠದ ಜಗದ್ಗುರು ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಮಹಾಸ್ವಾಮೀಜಿ ಸೇರಿದಂತೆ ರಾಜ್ಯದ ವಿವಿಧ ಮಠಾಧೀಶರು ಭಾಗಿಯಾಗಿದ್ದರು.
ಬಾಗಲಕೋಟೆ: ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ರಾಜ್ಯದ ಪ್ರಮುಖ ಮಠಾಧೀಶರು ಭಾಗಿಯಾಗಿದ್ದರು.
ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಶ್ರೀ ಜಗದ್ಗುರು ನಿರ್ಮಲಾನಂದನಾಥ ಸ್ವಾಮೀಜಿ, ಕಾಗಿನೆಲೆ ಮಹಾ ಸಂಸ್ಥಾನ ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದ ಮಹಾಸ್ವಾಮೀಜಿ, ಚಿತ್ರದುರ್ಗ ಮಾದರ ಚನ್ನಯ್ಯ ಗುರುಪೀಠದ ಜಗದ್ಗುರು ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಮಹಾಸ್ವಾಮೀಜಿ, ಹೊಸದುರ್ಗ ಕುಂಚಗಿರಿ ಕುಂಚಿಟಿಗ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಶಾಂತವೀರ ಮಹಾಸ್ವಾಮೀಜಿ, ಚಿತ್ರದುರ್ಗ ಮಹಾ ಸಂಸ್ಥಾನ ಭೋವಿ ಸಿದ್ದರಾಮೇಶ್ವರ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮಯ್ಯ ಮಹಾಸ್ವಾಮೀಜಿ, ಹರಿಹರ ರಾಜನಳ್ಳಿ ಶ್ರೀ ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮೀಜಿ, ಹರಿಹರ ಪಂಚಮಸಾಲಿ ಗುರುಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮೀಜಿ, ಮಧುರೆ ಭಗೀರಥ ಪೀಠದ ಶ್ರೀ ಪುರುಷೋತ್ತಮಾನಂದ ಪುರಿ ಮಹಾಸ್ವಾಮೀಜಿ, ಕೂಡಲಸಂಗಮದ ಪಂಚಮಸಾಲಿ ಪೀಠದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಇತರರು ಇದ್ದರು.