ನೂರಕ್ಕೆ ನೂರರಷ್ಟು ಮತದಾನಕ್ಕೆ ಸ್ವೀಪ್ ಸಮಿತಿ ಪಣ

| Published : Mar 02 2024, 01:50 AM IST

ನೂರಕ್ಕೆ ನೂರರಷ್ಟು ಮತದಾನಕ್ಕೆ ಸ್ವೀಪ್ ಸಮಿತಿ ಪಣ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಸ್ತುತ ವರ್ಷ ಲೋಕಸಭಾ ಚುನಾವಣೆ-2024 ಗೆ ವಿಶೇಷವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಗೊಳಿಸಲು ಉದ್ದೇಶಿಸಲಾಗಿದೆ. ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿ ಶೇ.ನೂರರಷ್ಟು ಮತದಾನಕ್ಕೆ ನಾವೆಲ್ಲರು ಶ್ರಮಿಸೋಣ ಎಂದು ವಿಜಯಪುರ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ನಗರದ ಡಾ.ಬಿ.ಆರ್.ಅಂಬೇಡ್ಕರ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕಗಳ ಸಹಯೋಗದಲ್ಲಿ ವಿಜಯಪುರ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅವರು ಮತದಾನದ ಮಹತ್ವ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಎಲ್ಲ ಕ್ರೀಡಾಪಟುಗಳೊಂದಿಗೆ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಕೆ.ಹೊಂಗಯ್ಯ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುರೇಶ ಶೆಡಶ್ಯಾಳ, ಜಿಲ್ಲಾ ಕಾರ್ಯದರ್ಶಿ ರಾಜಶೇಖರ ಧೈವಾಡಿ, ಕ್ರೀಡಾ ಕಾರ್ಯದರ್ಶಿ ಎಸ್.ಎಸ್.ಕೆರೂರ, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ವಿಜಯಕುಮಾರ ಹತ್ತಿ, ಗೌರವಾಧ್ಯಕ್ಷ ವಿಶ್ವನಾಥ ಬೆಳೆನ್ನವರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷ ಗಂಗಾಧರ ಜೇವೂರ, ಕ್ರೀಡಾ ಕಾರ್ಯದರ್ಶಿ ನಿಜು ಮೇಲಿನಕೇರಿ, ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತ ಜಾವೀದ ಜಮಾದಾರ, ನ್ಯಾಯವಾದಿ ನಾಗರಾಜ ಲಂಬು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಎಲ್ಲ ಜಿಲ್ಲಾ ಪದಾಧಿಕಾರಿಗಳು, ತಾಲೂಕು ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಪ್ರತಿನಿಧಿಗಳು ಹಾಗೂ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರು ಭಾಗವಹಿಸಿದ್ದರು.