4 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ

| Published : Oct 25 2025, 01:02 AM IST

4 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ
Share this Article
  • FB
  • TW
  • Linkdin
  • Email

ಸಾರಾಂಶ

ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆ ಪ್ರಸಕ್ತ ಹಂಗಾಮಿನಲ್ಲಿ 4 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಇಟ್ಟುಕೊಳ್ಳಲಾಗಿದ್ದು, ಕಬ್ಬು ಬೆಳೆಗಾರರು ಹೆಚ್ಚಿನ ಪ್ರಮಾಣದಲ್ಲಿ ಗುಣಮಟ್ಟದ ಕಬ್ಬು ಪೂರೈಕೆ ಮಾಡಿ ಕಾರ್ಖಾನೆ ಪ್ರಗತಿಗೆ ಕೈಜೋಡಿಸಬೇಕು ಎಂದು ಕಾರ್ಖಾನೆ ಅಧ್ಯಕ್ಷ ಬಸವರಾಜ ಬಾಳೇಕುಂದರಗಿ ಹೇಳಿದರು.

ಕನ್ನಡಪ್ರಭ ವಾರ್ತೆ ಬೈಲಹೊಂಗಲ

ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆ ಪ್ರಸಕ್ತ ಹಂಗಾಮಿನಲ್ಲಿ 4 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಇಟ್ಟುಕೊಳ್ಳಲಾಗಿದ್ದು, ಕಬ್ಬು ಬೆಳೆಗಾರರು ಹೆಚ್ಚಿನ ಪ್ರಮಾಣದಲ್ಲಿ ಗುಣಮಟ್ಟದ ಕಬ್ಬು ಪೂರೈಕೆ ಮಾಡಿ ಕಾರ್ಖಾನೆ ಪ್ರಗತಿಗೆ ಕೈಜೋಡಿಸಬೇಕು ಎಂದು ಕಾರ್ಖಾನೆ ಅಧ್ಯಕ್ಷ ಬಸವರಾಜ ಬಾಳೇಕುಂದರಗಿ ಹೇಳಿದರು.

ತಾಲೂಕಿನ ಸಿದ್ದಸಮುದ್ರ ಬಳಿವಿರುವ ಶ್ರೀ ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆಯ 2024-25ನೇ ಸಾಲಿನ ಬಾಯ್ಲರ್ ಪ್ರದೀಪನ ಹಾಗೂ ಕಬ್ಬು ನುರಿಸುವ ಹಂಗಾಮ ಪ್ರಾರಂಭೋತ್ಸವದ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಈಗಾಗಲೇ ರೈತರಿಗೆ ಯಾವುದೇ ರೀತಿ ತೊಂದರೆ ಆಗದಂತೆ ಹೆಚ್ಚಿನ ಪ್ರಮಾಣದಲ್ಲಿ 250 ಕ್ಕಿಂತ ಹೆಚ್ಚು ಕಬ್ಬು ಕಟಾವು ಗ್ಯಾಂಗ ವ್ಯವಸ್ಥೆ ಮಾಡಲಾಗಿದ್ದು, ಈಗಾಗಲೇ ಎಚ್‌ಎಂಟಿ ಅವರಿಗೆ ₹15 ಕೋಟಿ ಮುಂಗಡವಾಗಿ ಸಂದಾಯ ಮಾಡಲಾಗಿದೆ. ರೈತರು ಇದಕ್ಕೆ ಸಂಪೂರ್ಣ ಸಹಕಾರ ನೀಡಬೇಕು ಎಂದರು.ದಕ್ಷಿಣ ಭಾರತದಲ್ಲಿಯೇ ನಮ್ಮ ಕಾರ್ಖಾನೆಗೆ ಎರಡು ಬಾರಿ ಪ್ರಶಸ್ತಿ ದೊರಕಿರುವುದು ನಮ್ಮ ನಿಮ್ಮೆಲ್ಲರಿಗೆ ಹೆಮ್ಮೆಯ ವಿಷಯ. ಕಾರ್ಖಾನೆಯ ಆಡಳಿತ ಮಂಡಳಿ ಸದಸ್ಯರು, ಕಾರ್ಮಿಕರು ಸಿಬ್ಬಂದಿ ವರ್ಗ ರೈತರು ಹೆಚ್ಚು ಪ್ರಮಾಣದಲ್ಲಿ ಕಬ್ಬು ಪೂರೈಸಲು ಶ್ರಮಿಸಬೇಕು ಎಂದರು.ಜಾಲಿಕೊಪ್ಪ ತಪೋವನದ ಶಿವಾನಂದ ಗುರೂಜಿ, ರುದ್ರಾಕ್ಷಿಮಠದ ಬಸವಲಿಂಗ ಸ್ವಾಮೀಜಿ, ಹೊಸೂರ ಗುರು ಮಡಿವಾಳೇಶ್ವರ ಮಠದ ಗಂಗಾಧರ ಸ್ವಾಮೀಜಿ, ಶಾಖಾ ಮೂರುಸಾವಿಮಠದ ಪ್ರಭು ನೀಲಕಂಠ ಸ್ವಾಮೀಜಿ, ನಯಾನಗರದ ಅಭಿನವ ಸಿದ್ದಲಿಂಗ ಸ್ವಾಮೀಜಿ, ಮಹಾಂತಯ್ಯ ಶಾಸ್ತ್ರಿ ಆರಾದ್ರಿಮಠ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ದಿ.ರಮೇಶ ಬಾಳೇಕುಂದರಗಿ ಅವರು ಈ ಭಾಗದ ಕಬ್ಬು ಬೆಳೆಗಾರರ ಸಮಸ್ಯೆಯನ್ನು ಅರಿತು ಕಾರ್ಖಾನೆಯನ್ನು ಹುಟ್ಟು ಹಾಕಿದ್ದು, ಈಗ ಅದು ಹೆಮ್ಮರವಾಗಿ ಬೆಳೆದು ಕಬ್ಬು ಬೆಳೆಗಾರರಿಗೆ ಅನ್ನದಾತನಾಗಿ ಕೆಲಸ ನಿರ್ವಹಿಸುತ್ತಿದ್ದು ಗುಣಮಟ್ಟದ ಕಬ್ಬು ಪೂರೈಕೆ ಮಾಡಿ ಕಾರ್ಖಾನೆ ಪ್ರಗತಿಗೆ ಕೈ ಜೋಡಿಸಬೇಕು ಎಂದು ತಿಳಿಸಿದರು.ಕಾರ್ಖಾನೆ ನಿರ್ದೇಶಕ ಮಹಾಂತೇಶ ಮತ್ತಿಕೊಪ್ಪ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಖಾನೆಯ ಆಧಾರ ಸ್ಥಂಭವಾಗಿದ್ದ ದಿ.ಆರ್.ಸಿ.ಬಾಳೇಕುಂದರಗಿ ಅವರ ಸೇವೆ ಅಪಾರವಾಗಿದ್ದು, ಅವರ ಸ್ಮರಣೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ. ಸಹಕಾರಿ ಕ್ಷೇತ್ರದಲ್ಲಿ ಒಂದು ಸಂಸ್ಥೆಯನ್ನು ಹುಟ್ಟು ಹಾಕುವುದು ಅಷ್ಟು ಸುಲಭದ ಕೆಲಸವಲ್ಲ. ಖಾಸಗಿ ಕಾರ್ಖಾನೆಯ ಪೈಪೋಟಿಯ ಮಧ್ಯೇಯು ಸಹ ಈ ಸಕ್ಕರೆ ಕಾರ್ಖಾನೆ ರೈತರಿಗೆ ಒಳ್ಳೆಯ ಸೇವೆ ನೀಡುತ್ತಿದೆ. ತಮ್ಮೆಲ್ಲರ ಸಹಕಾರ ಸದಾ ಇರಬೇಕು ಎಂದು ಮನವಿ ಮಾಡಿದರು.ಉಪಾಧ್ಯಕ್ಷ ರಾಜು ಕುಡಸೋಮಣ್ಣವರ, ಉಮೇಶ ಬಾಳಿ, ಕಾರ್ತಿಕ ಮಲ್ಲೂರ, ಅನಿತಾ ಮೆಟಗುಡ್ಡ, ಕಸ್ತೂರಿ ಸೋಮನಟ್ಟಿ, ರಾಮಚಂದ್ರ ಕಕ್ಕಯ್ಯನವರ, ಶ್ರೀಶೈಲ ಶರಣಪ್ಪನವರ, ಅದೃಶ್ಯಪ್ಪ ಕೋಟಬಾಗಿ, ಅಶೋಕ ಬಾಳೇಕುಂದರಗಿ, ಅಶೋಕ ಯರಗೊಪ್ಪ, ಮಲ್ಲಪ್ಪ ಅಷ್ಟಗಿ, ರಾಜಶೇಖರ ಎತ್ತಿನಮನಿ, ಶ್ರೀಶೈಲ ಮೂಗಬಸವ, ಸಿದ್ದನಗೌಡ ಪಾಟೀಲ, ಸಣ್ಣಭೀಮಶೆಪ್ಪ ಅಂಬಡಗಟ್ಟಿ, ಬಸವರಾಜ ಬೋಳಗೌಡರ ಹಾಗೂ ಕಾರ್ಮಿಕರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.ಕಾರ್ಖಾನೆ ಸಂಸ್ಥಾಪಕ ದಿ.ರಮೇಶ ಬಾಳೇಕುಂದರಗಿ ಅವರ ಸವಿನೆನಪಿಗಾಗಿ ಎಸ್ಸೆಸ್ಸೆಲ್ಸಿ, ಪಿಯಸಿ ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದ ಕಾರ್ಖಾನೆಯ ಶೇರುದಾರ, ಸಿಬ್ಬಂದಿಯ ಮಕ್ಕಳಿಗೆ ಧನಸಹಾಯ ಮತ್ತು ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು.

ಕಚೇರಿ ಅಧಿಕ್ಷಕ ಅಶೋಕ ಬೊಮ್ಮಣ್ಣವರ ಸ್ವಾಗತಿಸಿದರು. ಬಾಬು ಖಂಡೋಜಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಕಾರ್ಮಿಕರು, ಸಿಬ್ಬಂದಿ ವರ್ಗ ನೂರಾರು ರೈತರು ಇದ್ದರು. ತುರಮರಿಯ ವಿಧ್ವಾನ ಮಹಾಂತೇಶ ಶಾಸ್ತ್ರಿಗಳು ಹಾಗೂ ಸಂಗಡಿಗರಿಂದ ಹೋಮ ಹವನ ಪೂಜೆ ನೆರವೇರಿತು.