ಸಾರಾಂಶ
ವಿಜ್ಞಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ತರವಾದ ಬೆಳವಣಿಗೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಮನುಷ್ಯನಿಗೆ ಅಗತ್ಯವಿರುವ ಕಣ್ಣು, ಕಿವಿ, ಕೈ ಕಾಲುಗಳನ್ನು ಉತ್ಪಾದಿಸುವ ಮತ್ತು ಬೆಳೆಸುವ ತಂತ್ರಜ್ಞಾನ ಬರಲಿದೆ ಎಂದು ಶಾಸಕ ಡಾ. ರಂಗನಾಥ್ ತಿಳಿಸಿದ್ದಾರೆ.
ಕುಣಿಗಲ್ : ವಿಜ್ಞಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ತರವಾದ ಬೆಳವಣಿಗೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಮನುಷ್ಯನಿಗೆ ಅಗತ್ಯವಿರುವ ಕಣ್ಣು, ಕಿವಿ, ಕೈ ಕಾಲುಗಳನ್ನು ಉತ್ಪಾದಿಸುವ ಮತ್ತು ಬೆಳೆಸುವ ತಂತ್ರಜ್ಞಾನ ಬರಲಿದೆ ಎಂದು ಶಾಸಕ ಡಾ. ರಂಗನಾಥ್ ತಿಳಿಸಿದ್ದಾರೆ.
ಪಟ್ಟಣದಲ್ಲಿ ನಡೆದ ಡಾ. ಸರ್ವಪಲ್ಲಿ ರಾಧಾಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರ್ಕಾರಿ ಶಾಲೆಗಳು ಅಳಿವಿನ ಹಂಚಿನಲ್ಲಿದ್ದು, ಅವುಗಳ ಅಭಿವೃದ್ಧಿಗಾಗಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಎಂಬ ಯೋಜನೆಯನ್ನು ಪ್ರಾರಂಭ ಮಾಡುತ್ತಿದ್ದೇವೆ. ಪ್ರಾಯೋಗಿಕವಾಗಿ ಹಲವಾರು ಶಾಲೆಗಳನ್ನು ಪ್ರಾರಂಭ ಮಾಡುತ್ತಿದ್ದು ಮುಂದಿನ ದಿನಗಳಲ್ಲಿ ಶಿಕ್ಷಕರು ಜಾಗೃತರಾಗಬೇಕಿದೆ. ಮಕ್ಕಳ ಕೈನಲ್ಲಿ ಮೊಬೈಲ್ ಬಳಕೆಯಿಂದ ಕೃತಕ ಬುದ್ಧಿಮತ್ತೆ ಅಧಿಕಗೊಳ್ಳುತ್ತಿದೆ ಎಂದರು.ಇದು ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಮತ್ತು ಶಿಕ್ಷಕರಿಗೆ ಬಹುದೊಡ್ಡ ಸಮಸ್ಯೆಯಾಗಿ ಕಾಡುತ್ತದೆ ಅಂತಹ ವಿಚಾರಗಳಿಗೆ ಸಂಬಂಧಿಸಿದಂತೆ ತಂತ್ರಜ್ಞಾನ ಬಾಹ್ಯಾಕಾಶ ನೌಕೆ ಹೀಗೆ ಎಲ್ಲಾ ಕ್ಷೇತ್ರದಲ್ಲೂ ಕೂಡ ಮಕ್ಕಳಿಗೆ ಮಾಹಿತಿ ನೀಡುವ ಮಾರ್ಗದರ್ಶನ ನೀಡುವ ಸಮತೆಯನ್ನು ಶಿಕ್ಷಕರು ಹೊಂದಬೇಕಾಗಿದೆ. ಅದಕ್ಕಾಗಿ ನಾನು ಎಲ್ಲಾ ರೀತಿಯ ಉತ್ತಮ ಸಹಕಾರ ಮತ್ತು ಸೌಲಭ್ಯಗಳನ್ನು ನೀಡಲು ಸಿದ್ದನಿದ್ದೇನೆ ಎಂದರು.ನಿಡಸಾಲೆ ಪ್ರಸಾದ್ ಮಾತನಾಡಿ, ಹಳೆ ಪಿಂಚಣಿ ವ್ಯವಸ್ಥೆಯನ್ನು ಮರು ಸ್ಥಾಪಿಸುವಂತೆ ಶಾಸಕರಲ್ಲಿ ಮನವಿ ಮಾಡಿದರು,
ಹಲವಾರು ನಿವೃತ್ತ ಶಿಕ್ಷಕರನ್ನು ಅಭಿನಂದಿಸಲಾಯಿತು. ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ತಹಸೀಲ್ದಾರ್ ರಶ್ಮಿ, ಶಿವಪ್ರಸಾದ್, ಬೋರೇಗೌಡ ಇಪ್ಪಡಿ, ವಿಶ್ವನಾಥ್, ಸಿಸಿ ಶಿವಣ್ಣ, ವೆಂಕಟೇಶ್ ಭಾಗವಹಿಸಿದ್ದರು.