ಪಕ್ಷದ ಕಾರ್ಯಕರ್ತರು, ಮುಖಂಡರ ಒಗ್ಗಟ್ಟೇ ನಮ್ಮ ಬಲವಾಗಿದ್ದು, ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ವಿರೋಧ ಪಕ್ಷದವರಿಗೆ ಒಂದು ಸ್ಥಾನ ನೀಡದಂತೆ ಚುನಾವಣೆಗಳನ್ನು ಎದುರಿಸಲು ಸಿದ್ಧವಾಗಿದ್ದೇವೆ
ಕನ್ನಡಪ್ರಭ ವಾರ್ತೆ, ಮಾಲೂರು
ಪಕ್ಷದ ಕಾರ್ಯಕರ್ತರು, ಮುಖಂಡರ ಒಗ್ಗಟ್ಟೇ ನಮ್ಮ ಬಲವಾಗಿದ್ದು, ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ವಿರೋಧ ಪಕ್ಷದವರಿಗೆ ಒಂದು ಸ್ಥಾನ ನೀಡದಂತೆ ಚುನಾವಣೆಗಳನ್ನು ಎದುರಿಸಲು ಸಿದ್ಧವಾಗಿದ್ದೇವೆ ಎಂದು ಶಾಸಕ ಕೆ.ವೈ. ನಂಜೇಗೌಡ ಘೋಷಿಸಿದರು.ಅವರು ನಗರದ ಶ್ರೀರಂಗಂ ಕಲ್ಯಾಣ ಮಂಟಪದಲ್ಲಿ ಮಾಲೂರು, ಮಾಸ್ತಿ ಬ್ಲಾಕ್ ಕಾಂಗ್ರೆಸ್ ಸಮಿತಿಗಳು ಏರ್ಪಡಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ ೮ ರಂದು ತಾಲೂಕಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮುಂಬರುವ ಜಿ.ಪಂ,ತಾಪಂ, ಚುನಾವಣೆಗಳಿಗೆ ಪೂರ್ವಭಾವಿ ಸಭೆ, ಕರ್ನಾಟಕ ತಿಗಳ ಅಭಿವೃದ್ಧಿ ನಿಗಮ ಮಂಡಳಿಯ ನೂತನ ಅಧ್ಯಕ್ಷ ಎಲ್.ಎ. ಮಂಜುನಾಥ್ ಅವರಿಗೆ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತ ಮುಂಬರುವ ಎಲ್ಲಾ ಚುನಾವಣೆಗಳು ಕಾರ್ಯಕರ್ತರನ್ನು ಮುಖಂಡರಾಗಿಸುವ ಚುನಾವಣೆಗಳಾಗಿದ್ದು, ಪಕ್ಷಕ್ಕೆ ಶ್ರಮಿಸುವ ಪ್ರತಿ ಕಾರ‍್ಯಕರ್ತರಿಗೂ ಅವಕಾಶ ಕಲ್ಪಿಸಲಾಗುವುದು ಎಂದರು.ತಿಗಳ ಜನಾಂಗದ ಮೊದಲ ನಿಗಮ ಮಂಡಳಿ ಅಧ್ಯಕ್ಷರಾಗಿ ಎಲ್.ಎ.ಮಂಜುನಾಥ್ ಅವರನ್ನು ಮಾಡಲು ಅನೇಕ ಅಡೆತಡೆ ಬಂದರೂ ಪಟ್ಟು ಬಿಡದೆ ಉಸ್ತುವಾರಿ ಸಚಿವ ಮುಖ್ಯಮಂತ್ರಿ ಅವರ ಬಳಿ ಚರ್ಚಿಸಿ ಜಿಲ್ಲೆಯ ಎಲ್ಲಾ ಶಾಸಕರ ಒಪ್ಪಿಸಿ ನಿಷ್ಠಾವಂತ ಕುಟುಂಬದವರಿಗೆ ಪಕ್ಷದಲ್ಲಿ ಅವಕಾಶ ಕಲ್ಪಿಸಲಾಗಿದೆ. ನಿಗಮ ಮಂಡಳಿ ಅಧ್ಯಕ್ಷರು ಸಮುದಾಯದ ಅಭಿವೃದ್ಧಿಗೆ ನಿಗಮ ಮಂಡಳಿಯಿಂದ ಸಿಗುವ ಎಲ್ಲಾ ರೀತಿಯ ಸವಲತ್ತು ಒದಗಿಸುವ ಮೂಲಕ ಪಕ್ಷವನ್ನು ಸಹ ಸಂಘಟಿಸಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠ ಪಡಿಸುವಂತೆ ಹೇಳಿದರು.
ವಿಧಾನಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಈಗಾಗಲೇ ಕಾಂಗ್ರೆಸ್ ಪಕ್ಷದಲ್ಲಿ ತುಮಕೂರಿನ ಶಶಿಹುಲಿಕುಂಟೆ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದು, ಅವರು ಈಗಾಗಲೇ ಪ್ರಚಾರವನ್ನು ಆರಂಭಿಸಿದ್ದಾರೆ, ಜಿಲ್ಲೆಯಲ್ಲಿಯೇ ಅತ್ಯಧಿಕ ಮತಗಳನ್ನು ಅವರಿಗೆ ಕೊಡಿಸಲು ಪ್ರಾಮಾಣಿಕ ಯತ್ನ ಮಾಡಲಾಗುವುದು ಎಂದರು.ಮುಖ್ಯಮಂತ್ರಿ ತಾಲೂಕಿಗೆ ಆಗಮಿಸುವ ಹಿನ್ನೆಲೆಯಲ್ಲಿ ಹಲವಾರು ಸಭೆಗಳನ್ನು ನಡೆಸಿದ್ದು, ಕಾರ್ಯಕ್ರಮಕ್ಕೆ ೪೦ ಸಾವಿರ ಮಂದಿ ಸೇರುವ ನಿರೀಕ್ಷೆ ಇದ್ದು, ಕಾರ್ಯಕರ್ತರು ಮುಖಂಡರು ಅದರ ಜವಾಬ್ದಾರಿ ವಹಿಸಬೇಕು, ಕಾರ್ಯಕ್ರಮದಲ್ಲಿ ೧೫೦೦೦ ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಸವಲತ್ತುಗಳನ್ನು ನೀಡಲಾಗುವುದು. ನನ್ನ ರಾಜಕೀಯ ಗುರುಗಳಾದ ಮಾಜಿ ಶಾಸಕ ಎ. ನಾಗರಾಜು ಅವರ ಶಿಷ್ಯನಾಗಿ ಅವರ ಅವಧಿಯಲ್ಲಿ ನಿವೇಶನ ನೀಡಲು ಪುರಸಭೆಯಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಅದರಂತೆ ಸಿದ್ದರಾಮಯ್ಯ ಅವರು ವೇದಿಕೆಯಲ್ಲಿ ೧೨೦೦ ಮಂದಿಗೆ ನಿವೇಶನದ ಹಕ್ಕು ಪತ್ರ ಹಾಗೂ ಮನೆ ಮಂಜೂರಾತಿ ಪತ್ರ ವಿತರಿಸಲಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಎ. ನಾಗರಾಜ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ. ಲಕ್ಷ್ಮಿನಾರಾಯಣ್, ಗೌತಮ್, ಯೋಜನಾ ಪ್ರಾಧಿಕಾರ ಅಧ್ಯಕ್ಷ ವಿಜಯನರಸಿಂಹ, ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ನಂಜೇಗೌಡ, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಮುರುಳಿ, ಮಹಿಳಾ ಅಧ್ಯಕ್ಷ ಹೇಮಮಾಲಿನಿ, ಕೆಪಿಸಿಸಿ ಸದಸ್ಯ ಸೋಮಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ. ಕೃಷ್ಣಪ್ಪ, ರಾಮಮೂರ್ತಿ, ಆಂಜಿನಪ್ಪ, ಹನುಮಂತಪ್ಪ, ಎಸ್.ಸಿ.ನಾರಾಯಣಸ್ವಾಮಿ, ಗೋವರ್ಧನ್ ರೆಡ್ಡಿ, ನಗರಸಭೆ ಮಾಜಿ ಸದಸ್ಯರಾದ ರಾಜಪ್ಪ, ಆರ್. ವೆಂಕಟೇಶ್, ವಿಜಯಲಕ್ಷ್ಮಿ, ಭಾರತಮ್ಮ, ಇಂತಿಯಾಜ್, ಮುರುಳಿಧರ್, ಹನುಮಂತರೆಡ್ಡಿ, ಪಿ.ವೆಂಕಟೇಶ್, ಮುಖಂಡರಾದ ಸಂದೇಗೌಡ, ಆರ್.ಸಿ.ಅಪ್ಪಾಜಿಗೌಡ ಮತ್ತಿತರರು ಇದ್ದರು.--------
ಫೋಟೋ....ಕರ್ನಾಟಕ ತಿಗಳ ಅಭಿವೃದ್ಧಿ ನಿಗಮ ಮಂಡಳಿಯ ನೂತನ ಅಧ್ಯಕ್ಷ ಎಲ್.ಎ. ಮಂಜುನಾಥ್ ಅವರಿಗೆ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಶಾಸಕ ಕೆ.ವೈ. ನಂಜೇಗೌಡ ಅಭಿನಂದಿಸಿದರು.