ಸಹ ಬಾಳ್ವೆಯಿಂದ ದೇಶದ ಐಕ್ಯತೆ ಎತ್ತಿ ಹಿಡಿಯಬೇಕು

| Published : Aug 16 2024, 12:56 AM IST

ಸಾರಾಂಶ

ತ್ಯಾಗ ಬಲಿದಾನದಿಂದ ಸ್ವಾತಂತ್ರಗೊಂಡ ಭಾರತದಲ್ಲಿ ಪ್ರತಿಯೊಬ್ಬರೂ ಸಾಮರಸ್ಯ, ಸಹಬಾಳ್ವೆಯಿಂದ ಬಾಳುತ್ತಾ ದೇಶದ ಐಕ್ಯತೆಯನ್ನು ಎತ್ತಿ ಹಿಡಿಯಬೇಕೆಂದು ಶಾಸಕ ಎನ್ ವೈ ಗೋಪಾಲಕೃಷ್ಣ ಹೇಳಿದರು.

ಕನ್ನಡಪ್ರಭ ವಾರ್ತೆ ಮೊಳಕಾಲ್ಮುರು

ತ್ಯಾಗ ಬಲಿದಾನದಿಂದ ಸ್ವಾತಂತ್ರಗೊಂಡ ಭಾರತದಲ್ಲಿ ಪ್ರತಿಯೊಬ್ಬರೂ ಸಾಮರಸ್ಯ, ಸಹಬಾಳ್ವೆಯಿಂದ ಬಾಳುತ್ತಾ ದೇಶದ ಐಕ್ಯತೆಯನ್ನು ಎತ್ತಿ ಹಿಡಿಯಬೇಕೆಂದು ಶಾಸಕ ಎನ್ ವೈ ಗೋಪಾಲಕೃಷ್ಣ ಹೇಳಿದರು.

ಪಟ್ಟಣದ ತಾಲೂಕು ಆಡಳಿತ ಸೌಧದ ಆವರಣದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಲಾಗಿದ್ದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದರು.

ಅನೇಕರ ತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ಯ ದಿನವನ್ನು ಆಚರಿಸುವ ಜತೆಗೆ ಮಹನೀಯರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಗಸ್ಟ್ 15, 1947 ರಂದು ಸ್ವಾತಂತ್ರ್ಯವನ್ನು ಗಳಿಸಿರುವ ಭಾರತ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಸ್ವಾತಂತ್ರ್ಯ ಬಂದ ಏಳು ದಶಕದ ನಂತರ ಭಾರತವು ಅಭಿವೃದ್ಧಿಯಲ್ಲಿ ಬಹಳ ದೂರ ಸಾಗಿದೆ ಎಂದರು.

ಕಳೆದ ಒಂದೂವರೆ ವರ್ಷದಲ್ಲಿ ಶಾಲಾ ಕಟ್ಟಡ ಮತ್ತು ಗ್ರಾಮೀಣ ರಸ್ತೆ ಅಭಿವೃದ್ದಿಗೆ ಕ್ರಮ ವಹಿಸಲಾಗಿದೆ. ಜತೆಗೆ ತುಂಗಾ ಭದ್ರಾ ಹಿನ್ನೀರಿನ ಯೋಜನೆ ಪೂರ್ಣಗೊಳ್ಳುವ ಹಂತದಲ್ಲಿದ್ದು, ಈಗಾಗಲೇ ಟೆಸ್ಟಿಂಗ್ ಕಾರ್ಯ ಕೂಡ ನಡೆದಿದೆ. ಮುಂದಿನ ಕೆಲ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಲಿದೆ. ಪಟ್ಟಣದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಈಗಾಗಲೇ ಜಮೀನು ಗುರುತಿಸಲಾಗಿದ್ದು ₹3 ಕೋಟಿ ವೆಚ್ಚದ ಭವನ ನಿರ್ಮಾಣಕ್ಕೆ ಕ್ರಮ ವಹಿಸಲಾಗಿದೆ. ಮಕ್ಕಳು ಶಿಕ್ಷಣವಂತರಾಗಬೇಕು. ಸರ್ಕಾರದ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಂಡು ಸತ್ಪ್ರಜೆಗಳಾಗಬೇಕು ಎಂದರು.ಈ ಸಂದರ್ಭದಲ್ಲಿ ತಹಶೀಲ್ದಾರ್ ಜಗದೀಶ್ ಮಾತನಾಡಿ, ಬ್ರಿಟಿಷರ ಕೈಯಿಂದ ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟ ಮಹನೀಯರ ಪೈಕಿ ಮಹಾತ್ಮಾ ಗಾಂಧಿ ಪ್ರಮುಖರು. ಅಹಿಂಸಾ ಸತ್ಯಾಗ್ರಹದ ಹೋರಾಟದ ಮೂಲಕ ಬ್ರಿಟಿಷರ ಸಂಕೋಲೆಯಿಂದ ಭಾರತವನ್ನು ಮುಕ್ತಗೊಳಿಸಿದರು. ಈ ಹೋರಾಟದಲ್ಲಿ ಅನೇಕರು ತ್ಯಾಗ ಬಲಿದಾನ ಮಾಡಿದ್ದಾರೆ. ಯುವಕರು ಸ್ವಾತಂತ್ರ್ಯ ಹೋರಾಟಗಾರರ ಇತಿಹಾಸವನ್ನು ಅರಿತು ಅವರ ಆದರ್ಶಗಳನ್ನು ಪಾಲಿಸಿಕೊಂಡು ಬಾಳಬೇಕು ಎಂದರು.

ಇದೇ ವೇಳೆ ವಿವಿಧ ಶಾಲಾ ಮಕ್ಕಳು ನಡೆಸಿಕೊಟ್ಟ ದೇಶ ಭಕ್ತಿ ಪ್ರತಿಬಿಂಬಿಸುವಂತ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಗಮನ ಸೆಳೆದವು. ಜತೆಗೆ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು.

ಈ ವೇಳೆ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಎಚ್. ಹನುಮಂತಪ್ಪ, ಆರಕ್ಷಕ ವೃತ್ತ ನಿರೀಕ್ಷಕ ವಸಂತ್ ವಿ ಅಸೋದೆ, ಶಿಕ್ಷಣಾಧಿಕಾರಿ ನಿರ್ಮಲಾದೇವಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಾಲಯ್ಯ, ಜೂನಿಯರ್ ಕಾಲೇಜು ಪ್ರಾಂಶುಪಾಲ ಗೋವಿಂದಪ್ಪ, ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಸೂರಯ್ಯ, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಈರಣ್ಣ, ನೀರು ಸರಬರಾಜು ಇಲಾಖೆಯ ಹರ್ಷ, ಕೃಷಿ ಇಲಾಖೆಯ ಅಧಿಕಾರಿ ಪ್ರಕಾಶ್, ಪಶು ಸಂಗೋಪನೆ ಇಲಾಖೆಯ ಅಧಿಕಾರಿ ಡಾ.ರಂಗಪ್ಪ, ಪಟ್ಟಣ ಪಂಚಾಯಿತಿ ಸದಸ್ಯರಾದ ಖಾದರ್, ಅಬ್ದುಲ್ಲಾ, ಮಾಜಿ ಅಧ್ಯಕ್ಷ ಜಿ ಪ್ರಕಾಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಮ್ ಉಲ್ಲಾ ಮಾಜಿ ಅಧ್ಯಕ್ಷರಾದ ಸುಬಾನ್ ಸಾಬ್, ಪಟೇಲ್ ಪಾಪ ನಾಯಕ, ಎಮ್ ಸಿ ದೇವದಾಸ್, ಬಿ ಟಿ ನಾಗಭೂಷಣ ಇದ್ದರು.