ರಸ್ತೆಗಳ ಅಭಿವೃದ್ಧಿಯಿಂದ ಜಮೀನು, ನಿವೇಶನಗಳ ಮೌಲ್ಯ ದ್ವಿಗುಣ: ಶಾಸಕ ಉದಯ್

| Published : Mar 15 2025, 01:01 AM IST

ರಸ್ತೆಗಳ ಅಭಿವೃದ್ಧಿಯಿಂದ ಜಮೀನು, ನಿವೇಶನಗಳ ಮೌಲ್ಯ ದ್ವಿಗುಣ: ಶಾಸಕ ಉದಯ್
Share this Article
  • FB
  • TW
  • Linkdin
  • Email

ಸಾರಾಂಶ

ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ಅಭಿವೃದ್ಧಿ ಹೊಂದಿದ್ದರೆ ಗ್ರಾಮಗಳಲ್ಲಿ ಅಭಿವೃದ್ಧಿ ಕಾಣಲು ಸಾಧ್ಯ. ರಸ್ತೆ, ಚರಂಡಿಗಳು ಅಭಿವೃದ್ಧಿ ಹೊಂದುವುದರ ಜತೆಗೆ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಸದ್ಬಳಕೆ ಮಾಡಲು ಸಾಧ್ಯ

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ರಸ್ತೆಗಳು ಅಭಿವೃದ್ಧಿ ಹೊಂದಿದ್ದರೆ ಗ್ರಾಮಗಳಲ್ಲಿ ಜಮೀನು ಹಾಗೂ ನಿವೇಶನಗಳ ಮೌಲ್ಯ ದ್ವಿಗುಣಗೊಳ್ಳುತ್ತವೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ಬೊಪ್ಪಸಮುದ್ರ ಗ್ರಾಮದ ಪರಿಶಿಷ್ಟ ಸಮುದಾಯದ ಕಾಲೋನಿಯಲ್ಲಿ ಸುಮಾರು 25 ಲಕ್ಷ ರು. ವೆಚ್ಚದಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಹಾಗೂ ಎಸ್.ಐ ಹಾಗಲಹಳ್ಳಿ ಪರಿಶಿಷ್ಟ ಸಮುದಾಯದ ಕಾಲೋನಿಯಲ್ಲಿ ಸುಮಾರು 20 ಲಕ್ಷ ರು. ವೆಚ್ಚದಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ಅಭಿವೃದ್ಧಿ ಹೊಂದಿದ್ದರೆ ಗ್ರಾಮಗಳಲ್ಲಿ ಅಭಿವೃದ್ಧಿ ಕಾಣಲು ಸಾಧ್ಯ. ರಸ್ತೆ, ಚರಂಡಿಗಳು ಅಭಿವೃದ್ಧಿ ಹೊಂದುವುದರ ಜತೆಗೆ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಸದ್ಬಳಕೆ ಮಾಡಲು ಸಾಧ್ಯ ಎಂದರು.

ಮದ್ದೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಸರಕಾರದಿಂದ ವಿಶೇಷ ಅನುದಾನ ತಂದು ಗ್ರಾಮೀಣ ಪ್ರದೇಶಗಳಲ್ಲಿನ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ವಿಶೇಷವಾಗಿ ತಾಲೂಕಿನ ಪರಿಶಿಷ್ಟ ಸಮುದಾಯಗಳ ಕಾಲೋನಿಗಳ ಅಭಿವೃದ್ಧಿಗೆ ಸರಕಾರದಿಂದ 250 ಕೋಟಿಗೂ ಹೆಚ್ಚಿನ ಅನುದಾನವನ್ನು ತಂದು ಅಭಿವೃದ್ಧಿ ಪಡಿಸಲಾಗಿದೆ ಎಂದು ಹೇಳಿದರು.

ರಸ್ತೆ, ಚರಂಡಿ ಕಾಮಗಾರಿ ನಡೆಸುವಾಗ ನಿಗದಿತ ವೇಳೆಯಲ್ಲಿ ಉತ್ತಮ ಗುಣಮಟ್ಟದಲ್ಲಿ ಕಾಮಗಾರಿ ಪೂರ್ಣಗೊಳ್ಳಬೇಕು ಎಂದು ಗುತ್ತಿಗೆದಾರರಿಗೆ ಖಡಕ್ ಆಗಿ ಸೂಚಿಸಿದ್ದೇನೆ ಎಂದು ತಿಳಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯೆ ಮಲ್ಲಾಜಮ್ಮ, ಮನ್ಮುಲ್ ನಿರ್ದೇಶಕ ಹರೀಶ್ ಬಾಬು, ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್. ರಾಜೀವ್, ಯುವ ಮುಖಂಡ ಚಂದೂಪುರ ಹರೀಶ್ ಪಾಪಣ್ಣ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಜಾಪ್ರಿಯ ವೆಂಕಟೇಶ್, ಎಸ್ಸಿ ಬ್ಲಾಕ್ ಅಧ್ಯಕ್ಷ ಮುಡಿನಹಳ್ಳಿ ತಿಮ್ಮಯ್ಯ, ಹಾಗಲಹಳ್ಳಿ ಬಸವರಾಜು ಸೇರಿ ಹಲವರು ಉಪಸ್ಥಿತರಿದ್ದರು.