ಸಾರಾಂಶ
ಕನ್ನಡಪ್ರಭ ವಾರ್ತೆ ರಾಣಿಬೆನ್ನೂರು
ವೀರಶೈವ ಪರಂಪರೆಯ ಆಚಾರ-ವಿಚಾರಗಳು ವೈಜ್ಞಾನಿಕ ಹಿನ್ನೆಲೆ ಹೊಂದಿದ್ದು ಒಳ್ಳೆಯದನ್ನ ಹೇಳಿ ಕೇಳಿ ಮಾತನಾಡಿದರೆ ಆಚಾರ ವಿಚಾರ ಶುದ್ಧವಾಗುತ್ತದೆ. ವೀರಶೈವ ಪರಂಪರೆಯ ಬೆಳವಣಿಗೆಗೆ ಶ್ರೀ ಹಾನಗಲ್ಲ ಕುಮಾರ ಸ್ವಾಮಿಗಳ ಕೊಡುಗೆ ಅಪಾರವಾಗಿದೆ ಎಂದು ಹೊನ್ನಾಳಿ ಹಿರೇಕಲ್ಮಠದ ಡಾ. ಒಡೆಯರ ಚೆನಮಲ್ಲಿಕಾರ್ಜುನ ಶಿವಾಚಾರ್ಯರು ನುಡಿದರು.ಇಲ್ಲಿನ ಮೃತ್ಯುಂಜಯ ನಗರದ ಶ್ರೀ ವಾಗೀಶ ಪಂಡಿತಾರಾಧ್ಯ ಸಮುದಾಯ ಭವನದಲ್ಲಿ ಶನಿವಾರ ಸಂಜೆ ಸ್ಥಳೀಯ ಹೊನ್ನಾಳಿ ಶ್ರೀ ಚೆನ್ನಮಲ್ಲಿಕಾರ್ಜುನ ಸಂಸ್ಕೃತಿ ಪ್ರಸಾರ ಪರಿಷತ್ ವತಿಯಿಂದ ಏರ್ಪಡಿಸಲಾಗಿದ್ದ ಜ್ಞಾನವಾಹಿನಿ ಮಾಸಿಕ ಧರ್ಮಸಭೆ ಹಾಗೂ ಶ್ರೀಮದ್ವೀರಶೈವ ಶಿವಯೋಗ ಮಂದಿರದ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾ ಸಂಸ್ಥಾಪಕ ಹಾನಗಲ್ಲ ಕುಮಾರ ಶಿವಯೋಗಿಗಳ 157ನೇ ಜಯಂತ್ಯುತ್ಸವದ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಬಟಕುರ್ಕಿ ವಿರಕ್ತ ಮಠದ ಬಸವಲಿಂಗ ಮಹಾಸ್ವಾಮಿಗಳು ಮಾತನಾಡಿ, ಹಿಂದಿನ ನಮ್ಮ ಹಿರಿಯರು ಅನುಭವಿಸಿದ ಕಷ್ಟಗಳ ಒಂದಂಶವು ಕೂಡ ಇಂದು ನಾವು ಅನುಭವಿಸುತ್ತಿಲ್ಲ. ಬಹಳ ಸುಖದ ಸಮಯದಲ್ಲಿ ನಾವಿದ್ದೇವೆ. ಹಾನಗಲ್ಲ ಕುಮಾರ ಸ್ವಾಮಿಗಳು ಹಾಕಿಕೊಟ್ಟಿರುವ ಮಾರ್ಗದಲ್ಲಿ ನಾವೆಲ್ಲರೂ ನಡೆಯೋಣ ಎಂದರು.ಚಡಚಣ ವಿರಕ್ತಮಠದ ಷಡಕ್ಷರಿ ಮಹಾಸ್ವಾಮಿಗಳು ಹಾಗೂ ಬೆಳಗಾವಿ ಕಾರಂಜಿ ಮಠದ ಶಿವಯೋಗಿ ಸ್ವಾಮಿಗಳು ನೇತೃತ್ವ ವಹಿಸಿದ್ದರು.
ಸಮಾರಂಭದಲ್ಲಿ ವಿಶೇಷ ಆಹ್ವಾನಿತರಾಗಿದ್ದ ಹಾವೇರಿ ಜಿಲ್ಲಾ 13ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಜೆ.ಎಂ. ಮಠದ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದ ಅಧ್ಯಕ್ಷ ಕೆ.ಎನ್. ಕೋರಧಾನ್ಯಮಠ ಅವರನ್ನು ಸನ್ಮಾನಿಸಲಾಯಿತು.ಶ್ರೀಮಠದ ಉಪಾಧ್ಯಕ್ಷ ಬಸವರಾಜಪ್ಪ ಪಟ್ಟಣಶೆಟ್ಟಿ, ಬಿದ್ದಾಡೆಪ್ಪ ಚಕ್ರಸಾಲಿ, ಕಾರ್ಯದರ್ಶಿ ಅಮೃತಗೌಡ ಹಿರೇಮಠ, ಜಗದೀಶ ಮಳಿಮಠ, ವಿಜಯಾ, ಬಸವಾನಂದ ಬಿಶೆಟ್ಟರ್, ಪಿ.ಸಿ. ತಿಳವಳ್ಳಿ, ರಾಜೇಂದ್ರಕುಮಾರ ತಿಳವಳ್ಳಿ, ಭಾರತಿ, ಎಂ.ಆರ್. ಮುರುಗೇಶ್, ಕವಿತಾ ಸೋಮಶೇಖರಯ್ಯ, ಪ್ರೇಮಾ, ಮಹೇಶ್ವರಪ್ಪ ಸೂರಣಗಿ, ಕಸ್ತೂರಮ್ಮ ಪಾಟೀಲ, ಬಸಯ್ಯನವರು ಹಾದರಗೇರಿ, ಶಂಕ್ರಪ್ಪ ಬ್ಯಾಡಗಿ, ಗುರುಶಾಂತಯ್ಯ ಮಳಿಮಠ, ಗುಡ್ಡಪ್ಪ ಹಿಂದಲಮನಿ, ನಿವೃತ್ತ ಶಿಕ್ಷಕ ವಿ.ವಿ. ಹರಪನಹಳ್ಳಿ, ವಿ.ಎಂ. ಕರ್ಜಗಿ, ಜ್ಯೋತಿ ಬಣ್ಣದ ಹಾಗೂ ತಾಲೂಕಾ ಶ್ರೀ ವೀರಶೈವ ಜಂಗಮ ಪುರೋಹಿತ ಮತ್ತು ಅರ್ಚಕರ ಸಂಘ, ಶ್ರೀ ದಾನೇಶ್ವರಿ ಜಾಗೃತಿ ಅಕ್ಕನ ಬಳಗ ಹಾಗೂ ಕದಳಿ ವೇದಿಕೆಯ ಸರ್ವ ಪದಾಧಿಕಾರಿಗಳು ಉಪಸ್ಥಿತರಿದ್ದರು.