ಸಾರಾಂಶ
ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ತನ್ನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತ ಯುವಕ ಚೇತನ್ ಶನಿವಾರ ಹೊಳೆನರಸೀಪುರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ದೂರು । ತೋಟದ ಮನೆಯಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಆರೋಪ
ಕನ್ನಡಪ್ರಭ ವಾರ್ತೆ ಹೊಳೆನರಸೀಪುರವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ತನ್ನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತ ಯುವಕ ಚೇತನ್ ಶನಿವಾರ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸಂತ್ರಸ್ತ ಯುವಕ ಚೇತನ್ ತನಗಾದ ದೌರ್ಜನ್ಯಕ್ಕೆ ನ್ಯಾಯ ಕೋರಿ ಐಜಿ ಹಾಗೂ ಡಿಐಜಿ ಅವರಿಗೆ ಇ-ಮೇಲ್ ಮೂಲಕ ದೂರು ನೀಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ನಂತರ ಶನಿವಾರ ಕೃತ್ಯ ನಡೆದ ವ್ಯಾಪ್ತಿಯ ಠಾಣೆಗೆ ಆಗಮಿಸಿ ಅಧಿಕೃತವಾಗಿ ದೂರು ನೀಡಿದ್ದಾರೆ. ಜೆಡಿಎಸ್ ಕಾರ್ಯಕರ್ತನಾಗಿದ್ದ ಚೇತನ್ ಅರಕಲಗೂಡು ಮೂಲದವನಾಗಿದ್ದು, ಡಾ.ಸೂರಜ್ ರೇವಣ್ಣಗೆ ಪರಿಚಿತನಾಗಿದ್ದ. ನೌಕರಿ ಕೊಡಿಸುವಂತೆ ಕೋರಿ ಜೂ.೧೬ ರಂದು ಸೂರಜ್ ರೇವಣ್ಣ ಅವರ ಗನ್ನಿಕಡ ಫಾರಂ ಹೌಸ್‌ಗೆ ತೆರಳಿದ್ದ ತನ್ನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂಬುದು ಸಂತ್ರಸ್ತನ ಆರೋಪವಾಗಿದೆ.ಆದರೆ ಎಂಎಲ್‌ಸಿ ಡಾ.ಸೂರಜ್ ರೇವಣ್ಣ ಸ್ನೇಹಿತ ಹನುಮನಹಳ್ಳಿಯ ಶಿವಕುಮಾರ್ ತನ್ನ ಮೂಲಕ ಚೇತನ್ ತನ್ನ ನಾಯಕರಲ್ಲಿ ಹಣ ಕೇಳಿದ್ದ. ಕೊಡಿಸದಿದ್ದಲ್ಲಿ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪಟ್ಟಣದ ನಗರ ಪೊಲೀಸ್ ಠಾಣೆಯಲ್ಲಿ ಚೇತನ್ ವಿರುದ್ಧ ಶಿವಕುಮಾರ್ ಶುಕ್ರವಾರ ದೂರು ದಾಖಲಿಸಿದ್ದರು.
ಚೇತನ್ ಬಿಳಿ ಇನ್ನೋವಾ ಕಾರ್‌ನಲ್ಲಿ ಬಂದಿದ್ದು, ಮುಖಕ್ಕೆ ಮಾಸ್ಕ್ ಹಾಕಿಕೊಂಡಿದ್ದರು. ಎಎಸ್‌ಪಿ ವೆಂಕಟೇಶ್ ನಾಯ್ಡು ಸೇರಿದಂತೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ಇದ್ದರು. ಭದ್ರತೆಗಾಗಿ ಕೆಎಸ್‌ಆರ್‌ಪಿ ತುಕಡಿ ನಿಯೋಜಿಸಲಾಗಿತ್ತು.