ಸಾರಾಂಶ
ದಾವಣಗೆರೆ: ರಾಜ್ಯದ ಮೂರೂ ಕ್ಷೇತ್ರಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಅಭೂತಪೂರ್ವ ಸಾಧನೆ ಮಾಡಿದೆ ಎಂದು ಶಿಗ್ಗಾಂವಿ-ಸವಣೂರು ಉಪ ಚುನಾವಣೆ ಉಸ್ತುವಾರಿ, ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಹರ್ಷ ವ್ಯಕ್ತಪಡಿಸಿದ್ದಾರೆ. ನಗರದ ತಮ್ಮ ಗೃಹ ಕಚೇರಿ ಶಿವ ಪಾರ್ವತಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಪಕ್ಷದ ಕೈಗಳನ್ನು ಮತ್ತಷ್ಟು ಬಲಪಡಿಸಿವೆ. ಮೂರು ಕ್ಷೇತ್ರಗಳಲ್ಲಿ ಗೆದ್ದ ಅಭ್ಯರ್ಥಿಗಳು ಹಾಗೂ ಈ ಫಲಿತಾಂಶವನ್ನು ತಂದುಕೊಟ್ಟ ಮೂರೂ ಕ್ಷೇತ್ರಗಳ ಮತದಾರರಿಗೆ ಅಭಿನಂದಿಸುತ್ತೇವೆ ಎಂದರು.
ನುಡಿದಂತೆ ನಡೆದ ಕಾಂಗ್ರೆಸ್ ಪಕ್ಷವು ಗ್ಯಾರಂಟಿ ಯೋಜನೆಗಳ ಮೂಲಕ ಎಲ್ಲಾ ವರ್ಗದ ಜನರಿಗೂ ಸ್ಪಂದಿಸಿದೆ. ಕೊಟ್ಟ ಮಾತಿನಂತೆ ಕಾಂಗ್ರೆಸ್ ಪಕ್ಷವೂ ನಡೆದುಕೊಳ್ಳುತ್ತಿದೆ. ಐದೂ ಗ್ಯಾರಂಟಿ ಯೋಜನೆಗಳೂ ಜನಪರ ಕಾರ್ಯಕ್ರಮಗಳಾಗಿವೆ ಎಂಬುದಕ್ಕೆ ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಕ್ಷೇತ್ರಗಳ ಮತದಾರರೆ ನಿರೂಪಿಸಿದ್ದಾರೆ ಎಂದು ಹೇಳಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸೇರಿದಂತೆ ಪಕ್ಷದ ಪ್ರತಿಯೊಬ್ಬ ನಾಯಕರೂ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಿರಂತರ ಪ್ರಚಾರ ಮಾಡಿದ್ದೆವು. ಪ್ರಚಾರ ವೇದಿಕೆಗಳು, ಸಭೆಗಳಲ್ಲೇ ಮತದಾರರು ಗ್ಯಾರೆಂಟಿ ಯೋಜನೆಗಳ ಉಪಯೋಗ, ಅನುಕೂಲಗಳ ಬಗ್ಗೆ ಅಭಿಮಾನದಿಂದ ತಿಳಿಸಿದ್ದರು ಎಂದು ವಿವರಿಸಿದರು. ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಲ್ಲಿ ಕೆಲ ಮಹಿಳೆಯರು ಗೃಹೋಪಯೋಗಿ ವಸ್ತು ಖರೀದಿಸಿದ್ದಾಗಿ ತಿಳಿಸಿದ್ದರು. ಶಕ್ತಿ ಯೋಜನೆಯಿಂದ ಪುಣ್ಯ ಕ್ಷೇತ್ರಗಳ ದರ್ಶನ ಉಚಿತವಾಗಿ ಪಡೆರುವುದಾಗಿ ಹೇಳಿದ್ದರು. ಯುವನಿಧಿಯಿಂದ ವಿದ್ಯಾರ್ಥಿಗಳಿಗೆ ಉಪಯೋಗ, ಗೃಹ ಜೋತಿಯಿಂದ ತಿಂಗಳ ಉಳಿತಾಯ, ಅನ್ನಭಾಗ್ಯ ಗ್ಯಾರೆಂಟಿಯಿಂದ ಉಪಯೋಗಗಳನ್ನು ಮತದಾರರು ಸ್ಮರಿಸಿದ್ದು ಶಿಗ್ಗಾವಿ-ಸವಣೂರು ಉಪ ಚುನಾವಣೆಯನ್ನು ನನಗೆ ಉಸ್ತುವಾರಿ ವಹಿಸಿದ್ದು, ಅದಕ್ಕೆ ಅಲ್ಲಿನ ಮತದಾರರೂ ಸ್ಪಂದಿಸಿದ್ದಾರೆ ಎಂದರು.
ದಾವಣಗೆರೆ ಜಿಲ್ಲೆಯ ಎಲ್ಲಾ ನಾಯಕರು ಪಕ್ಷದ ಅಭ್ಯರ್ಥಿ ಪರ ಹಾಗೂ ಸಂಡೂರು ಕ್ಷೇತ್ರದಲ್ಲಿ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಮತಯಾಚಿಸಿದ್ದರು. ನಮ್ಮ ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದಿದ್ದು, ಮತದಾರರು ಮೂರು ಉಪ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ನ್ನು ಬೆಂಬಲಿಸದೇ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದ ಕಾಂಗ್ರೆಸ್ ಪಕ್ಷದ ಕೈಹಿಡಿದಿದ್ದಾರೆ. ಮತದಾರರರಿಗೆ ನಮ್ಮ ಕಾಂಗ್ರೆಸ್ ಪಕ್ಷವು ಸದಾ ಚಿರಋಣಿ ಎಂದು ಅವರು ತಿಳಿಸಿದರು.ಶಾಮನೂರು, ಡಾ.ಪ್ರಭಾ ಹರ್ಷ:ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಅಭೂತಪೂರ್ವ ಗೆಲುವಿಗೆ ಹಿರಿಯ ರಾಜಕೀಯ ಮುತ್ಸದ್ಧಿ, ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹರ್ಷ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ಗೆ ಮತ ನೀಡಿ, ಅಭ್ಯರ್ಥಿಗಳನ್ನು ಗೆಲ್ಲಿಸಿದ ಮತದಾರರಿಗೆ ಹಾಗೂ ಪಕ್ಷಕ್ಕೆ ಗೆಲುವು ತಂದ ಅಭ್ಯರ್ಥಿಗಳಿಗೆ ಅವರು ಶುಭಾರೈಸಿದ್ದಾರೆ.