28 ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವು ನಿಶ್ಚಿತ

| Published : Apr 27 2024, 01:00 AM IST

28 ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವು ನಿಶ್ಚಿತ
Share this Article
  • FB
  • TW
  • Linkdin
  • Email

ಸಾರಾಂಶ

ಮತದಾರರು ನರೇಂದ್ರ ಮೋದಿಯನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವ ದಿಟ್ಟ ನಿರ್ಧಾರ ಕೈಗೊಂಡಿದ್ದು, ರಾಜ್ಯದಲ್ಲಿ 28 ಕ್ಷೇತ್ರಗಳಲ್ಲೂ ಎನ್‌ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಚಿತ್ರದುರ್ಗ ಲೋಕಸಭಾ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.

ಕನ್ನಡಪ್ರಭ ವಾರ್ತೆ ಶಿರಾ

ಮತದಾರರು ನರೇಂದ್ರ ಮೋದಿಯನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವ ದಿಟ್ಟ ನಿರ್ಧಾರ ಕೈಗೊಂಡಿದ್ದು, ರಾಜ್ಯದಲ್ಲಿ 28 ಕ್ಷೇತ್ರಗಳಲ್ಲೂ ಎನ್‌ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಚಿತ್ರದುರ್ಗ ಲೋಕಸಭಾ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.

ತಾಲೂಕಿನ ಕಡವಿಗೆರೆ, ಕಳ್ಳಂಬೆಳ್ಳ, ಶಿರಾ ನಗರದ ಹಲವು ಮತದಾನ ಕೇಂದ್ರಗಳಿಗೆ ಭೇಟಿ ನೀಡಿ ಶುಕ್ರವಾರ ಅವರು ಮಾತನಾಡಿದರು. ದೇಶದ ಸುಭದ್ರತೆ ಹಾಗೂ ಆರ್ಥಿಕ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಅವಶ್ಯಕತೆಯಿದೆ. ಈ ಬಾರಿ ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟ ಹೆಚ್ಚು ಸ್ಥಾನ ಗೆಲ್ಲಲಿದೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ. ಪ್ರಜ್ಞಾವಂತ ಮತದಾರರು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗೆ ಮತ ನೀಡಿದ್ದಾರೆ ಎಂದರು.

ರೇಷ್ಮೆ ನಿಗಮದ ಮಾಜಿ ಅಧ್ಯಕ್ಷ ಎಸ್.ಆರ್.ಗೌಡ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಒಂದಾಗಿದ್ದು, ಎದುರಾಳಿಗಳು ಧೂಳಿಪಟವಾಗಲಿದ್ದಾರೆ. ಎನ್‌ಡಿಎ. ಮೈತ್ರಿಕೂಟದ ಎಲ್ಲ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು. ತಾಪಂ ಮಾಜಿ ಸದಸ್ಯ ಮಂಜುನಾಥ್, ಗ್ರಾಪಂ ಸದಸ್ಯ ಉಮೇಶ್, ಪ್ರಮುಖರಾದ ಸಂತೋಷ್, ಸೋಮಶೇಖರ್, ದಾಸೇಗೌಡ, ಜಗನ್ನಾಥ್, ಕುಮಾರ್, ಶ್ರೀನಿವಾಸ್, ಯಲಿಯೂರು ಜಗನ್ನಾಥ್, ಭೂವನಹಳ್ಳಿ ಲಿಂಗರಾಜು, ಬೊಪ್ಪಣ್ಣ, ರಂಗನಾಥ್, ಗಿರಿಯಪ್ಪ, ದೊಡ್ಡತಿಮ್ಮಯ್ಯ, ಸಿದ್ದಣ್ಣ ಹಾಜರಿದ್ದರು.