ಜಿಲ್ಲೆಗೆ ಎತ್ತಿನಹೊಳೆ ನೀರು ಬಂದೇ ಬರುತ್ತದೆ

| Published : Oct 24 2024, 12:44 AM IST

ಜಿಲ್ಲೆಗೆ ಎತ್ತಿನಹೊಳೆ ನೀರು ಬಂದೇ ಬರುತ್ತದೆ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಎತ್ತಿನ ಹೊಳೆಯ ಸುಮಾರು 16 ಟಿಎಂಸಿ ನೀರನ್ನು ಬಿಡುಗಡೆ ಮಾಡಲಿದ್ದೇವೆ. ನಮ್ಮ ಬಳಿ 22 ಟಿಎಂಸಿ ನೀರು ಶೇಖರಣೆ ಆಗಲಿದೆ. ಈ ಮೂರು ಜಿಲ್ಲೆಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಈ ನೀರನ್ನು ಮೊದಲು ಕುಡಿಯುವ ನೀರಿಗೆ ಹೆಚ್ಚು ಆದ್ಯತೆ ನೀಡುತ್ತೇವೆ.

ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ

ಸುಪ್ರೀಂಕೋರ್ಟ್ ಆದೇಶದಂತೆ ಪರಿಶಿಷ್ಟರಿಗೆ ಒಳಮೀಸಲಾತಿ ಶೀಘ್ರದಲ್ಲೇ ಜಾರಿ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಳ ಮೀಸಲಾಯನ್ನು ಶೀಘ್ರವೇ ಜಾರಿ ಮಾಡುವ ವಿಶ್ವಾಸವಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.ತಾಲೂಕಿನ ಮೇಲೂರು ಗ್ರಾಮದ ಶ್ರೀ ಗಂಗಮ್ಮ ದೇವಾಲಯ ಮತ್ತು ಶ್ರೀ ಉಮಾ ಮಹೇಶ್ವರ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಒಳ ಮೀಸಲಾತಿ ಸಂಬಂಧ ಈಗಾಗಲೇ ಗೃಹ ಸಚಿವ ಪರಮೇಶ್ವರ್ ಅವರ ಜೊತೆ ಹಾಗೂ ಸಮುದಾಯದ ಶಾಸಕರೊಂದಿಗೆ ಸುದೀರ್ಘ ಚರ್ಚೆ ಮಾಡಲಾಗಿದೆ ಎಂದರು.

ಎತ್ತಿನಹೊಳೆ ನೀರು ಖಚಿತ ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಎತ್ತಿನ ಹೊಳೆಯ ಸುಮಾರು 16 ಟಿಎಂಸಿ ನೀರನ್ನು ಬಿಡುಗಡೆ ಮಾಡಲಿದ್ದೇವೆ. ನಮ್ಮ ಬಳಿ 22 ಟಿಎಂಸಿ ನೀರು ಶೇಖರಣೆ ಆಗಲಿದೆ. ಈ ಮೂರು ಜಿಲ್ಲೆಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ಯೋಜನೆ ರೂಪಿಸಲಾಗಿತ್ತು. ಈ ನೀರನ್ನು ಮೊದಲು ಕುಡಿಯುವ ನೀರಿಗೆ ಹೆಚ್ಚು ಆದ್ಯತೆ ನೀಡುತ್ತೇವೆ. ನಂತರ ಕೆರೆಗಳಿಗೆ ನೀರು ಬಿಡಲು ಯೋಜನೆ ತಯಾರಿದೆ. ಒಟ್ಟಾರೆಯಾಗಿ ಎತ್ತಿನ ಹೊಳೆ ನೀರು ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಬಂದೇ ಬರುತ್ತದೆ ಎಂದರು. ಶಾಸಕ ಬಿ.ಎನ್.ರವಿಕುಮಾರ್ ಮಾತನಾಡಿ, ತಾಲೂಕಿನಲ್ಲಿ 100 ಹಾಸಿಗೆಗಳ ಆಸ್ಪತ್ರೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಭವನ ಮತ್ತು ಹದಗಟ್ಟಿರುವ ರಸ್ತೆಗಳ ಅಭಿವೃದ್ಧಿ ಮತ್ತು ನಾವು ವಿದ್ಯಾಭ್ಯಾಸ ಮಾಡಿದ ಇದೇ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡುವಂತೆ ಸಚಿವರಿಗೆ ಮನವಿ ಮಾಡಿದರು.

ಶಾಲಾ ಅಭಿವೃದ್ಧಿಗೆ ಅನುದಾನ

ಶಾಲಾ ಅಭಿವೃದ್ಧಿಗೆ ಸುಮಾರು 56 ಲಕ್ಷ ಅಂದಾಜು ವೆಚ್ಚ ಆಗಬಹುದೆಂದು ಎಂದು ಲೋಕೋಪಯೋಗಿ ಇಲಾಖೆ ತಿಳಿಸಿದೆ. ಇದಕ್ಕೆ ತಾವು ಸಿ.ಎಸ್.ಆರ್ ಪಿ ನಿಧಿಯಿಂದ ಅನುದಾನ ಕೊಡಿಸಬೇಕು ಎಂದು ಸಚಿವ ಮುನಿಯಪ್ಪಗೆ ಕೋರಿದರು. ಈ ಸಂದರ್ಭದಲ್ಲಿ ಮೇಲೂರು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಆರ್.ಎ.ಉಮೇಶ್, ಜೆ.ವಿ ಸದಾಶಿವ, ಆರ್.ಕೆ.ರಾಮಕೃಷ್ಣಪ್ಪ, ಕೆ.ಎಂ. ಜಗದೀಶ್, ಸತೀಶ್ , ಕಂಬದ ಹಳ್ಳಿ ಕೆ.ಎಂ.ರವಿಕುಮಾರ್, ಅಶ್ವಥಪ್ಪ, ನರಸಿಂಹ (ಎನ್ ಟಿ ಆರ್), ಐಎನ್ ಟಿಯುಸಿ ರಾಜ್ಯ ಸಂಘಟನಾ ಕಾರ್ಯದರ್ಶಿ ಕುಂದಲಗುರ್ಕಿ ಮುನೀಂದ್ರ, ಭಕ್ತರಹಳ್ಳಿ ಬಿ.ಇ.ವಿಶ್ವನಾಥ್ ಸೇರಿದಂತೆ ಮುಂತಾದವರು ಹಾಜರಿದ್ದರು.