ರಾಜ್ಯದ ಬಡಜನರ ಶ್ರೇಯೋಭಿವೃದ್ಧಿ ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಉದ್ದೇಶದಿಂದ ಸರ್ಕಾರ ಪ್ರಜಾಸೇವಾ ಆಂದೋಲನ ಹಮ್ಮಿಕೊಂಡಿದೆ.
ಕಲಘಟಗಿ:
ರಾಜ್ಯದ ಬಡಜನರ ಶ್ರೇಯೋಭಿವೃದ್ಧಿ ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಉದ್ದೇಶದಿಂದ ಸರ್ಕಾರ ಪ್ರಜಾಸೇವಾ ಆಂದೋಲನ ಹಮ್ಮಿಕೊಂಡಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಪರಿಹಾರ ಒದಗಿಸಲು ಸರ್ಕಾರವೇ ಮನೆ ಬಾಗಿಲಿಗೆ ಬಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.ತಾಲೂಕಿನ ದೇವಿಕೊಪ್ಪ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಒಟ್ಟು 291 ಅರ್ಜಿಗಳು ಸ್ವೀಕೃತಗೊಂಡಿವೆ. ಇವುಗಳಲ್ಲಿ ಮನೆ ನಿರ್ಮಾಣಕ್ಕೆ ಸಂಬಂಧಿಸಿದ ಅರ್ಜಿಗಳೇ ಹೆಚ್ಚಿನ ಸಂಖ್ಯೆಯಲ್ಲಿವೆ. ಸರ್ಕಾರದ ಮಾರ್ಗಸೂಚಿಯಂತೆ ಅರ್ಜಿಗಳನ್ನು ಪರಿಶೀಲಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯ ಕಲ್ಪಿಸಲು ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಸೂಚಿಸಿದರು.ಈ ವೇಳೆ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ, ತಹಸೀಲ್ದಾರ್ ಬಸವರಾಜ ಹೊಂಕಣ್ಣವರ, ತಾಪಂ ಇಒ ಪರಶುರಾಮ ಸಾವಂತ, ಮಂಜುನಾಥ ಮುರಳ್ಳಿ, ಬಾಬಣ್ಣ ಅಂಚಟಗೇರಿ, ಬಾಳು ಖಾನಾಪೂರ, ಹರಿಶಂಕರ ಮಠದ, ಎಸ್.ವಿ. ತಡಸಮಠ, ಬಸವರಾಜ ಬಾವಕಾರ, ಸಿಪಿಐ ಶ್ರೀಶೈಲ ಕೌಜಲಗಿ, ಆರ್ಎಫ್ಒ ಅರುಣಕುಮಾರ ಅಷ್ಟಗಿ, ಪಪಂ ಮುಖ್ಯಾಧಿಕಾರಿ ಚಂದ್ರಶೇಖರ ಬಿ, ಸಿಡಿಪಿಒ ವಿದ್ಯಾ ಬಡಿಗೇರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರಿದ್ದರು.