ವೈದ್ಯಕೀಯ ಸಹಾಯಕ ಸಿಬ್ಬಂದಿಯ ಕಾರ್ಯ ಶ್ಲಾಘನೀಯ: ಯೋಗೇಂದ್ರಕುಮಾರ್

| Published : Oct 07 2025, 01:02 AM IST

ವೈದ್ಯಕೀಯ ಸಹಾಯಕ ಸಿಬ್ಬಂದಿಯ ಕಾರ್ಯ ಶ್ಲಾಘನೀಯ: ಯೋಗೇಂದ್ರಕುಮಾರ್
Share this Article
  • FB
  • TW
  • Linkdin
  • Email

ಸಾರಾಂಶ

ಪ್ಯಾರಾ ಮೆಡಿಕಲ್ ಶಿಕ್ಷಣಕ್ಕೆ ಸೀಮಿತಗೊಳಿಸದೇ ಶೈಕ್ಷಣಿ, ಸಾಂಸ್ಕೃತಿಕ ಹಾಗೂ ಸಮಾಜಮುಖಿಯಾಗಿ ಸರ್ವತೋಮುಖವಾಗಿ ವಿದ್ಯಾರ್ಥಿಗಳನ್ನು ತಯಾರು ಮಾಡುತ್ತಿರುವ ವಿದ್ಯಾ ಪ್ಯಾರಾ ಮೆಡಿಕಲ್ ಆಡಳಿತ ಮಂಡಳಿ ಕಾರ್ಯ ಶ್ಲಾಘನೀಯ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ವೈದ್ಯಕೀಯ ಕ್ಷೇತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸುವ ವೈದ್ಯಕೀಯ ಸಹಾಯಕ ಸಿಬ್ಬಂದಿಯ ಕಾರ್ಯ ಶ್ಲಾಘನೀಯ ಎಂದು ರಾಜ್ಯ ಪೊಲೀಸ್ ಇಲಾಖೆ ಪ್ರಧಾನ ಕಚೇರಿ ಡಿವೈಎಸ್ಪಿ ಪಿ.ಎಂ.ಯೋಗೇಂದ್ರಕುಮಾರ್ ಹೇಳಿದರು.

ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಭಾನುವಾರ ನಡೆದ ವಿದ್ಯಾ ಪ್ಯಾರಾ ಮೆಡಿಕಲ್ ಕಾಲೇಜಿನ 15 ವರ್ಷದ ವಿದ್ಯೋತ್ಸವ ಉದ್ಘಾಟಿಸಿ ಮಾತನಾಡಿ, ವೈದ್ಯಕೀಯ ಲೋಕದಲ್ಲಿ ವೈದ್ಯರೊಂದಿಗೆ ತಮ್ಮದೇ ಆದ ಸೇವೆ ಸಲ್ಲಿಸುತ್ತಾ ರೋಗಿಗಳ ಆರೈಕೆಯಲ್ಲಿ ತೊಡಗಿಸಿಕೊಳ್ಳುವ ವೈದ್ಯಕೀಯ ಸಹಾಯಕ ಸಿಬ್ಬಂದಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಾರೆ ಎಂದರು.

ಪ್ಯಾರಾ ಮೆಡಿಕಲ್ ಶಿಕ್ಷಣಕ್ಕೆ ಸೀಮಿತಗೊಳಿಸದೇ ಶೈಕ್ಷಣಿ, ಸಾಂಸ್ಕೃತಿಕ ಹಾಗೂ ಸಮಾಜಮುಖಿಯಾಗಿ ಸರ್ವತೋಮುಖವಾಗಿ ವಿದ್ಯಾರ್ಥಿಗಳನ್ನು ತಯಾರು ಮಾಡುತ್ತಿರುವ ವಿದ್ಯಾ ಪ್ಯಾರಾ ಮೆಡಿಕಲ್ ಆಡಳಿತ ಮಂಡಳಿ ಕಾರ್ಯ ಶ್ಲಾಘನೀಯ ಎಂದು ಬಣ್ಣಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಬಿ.ಚಂದ್ರಮೋಹನ್ ಮಾತನಾಡಿ, ನಮ್ಮ ಸಂಸ್ಥೆಯು ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬುವ ಜೊತೆಗೆ ಕಲಿಕೆಗೆ ಉತ್ತಮ ವಾತಾವರಣ ನಿರ್ಮಿಸಿಕೊಡಲಾಗಿದೆ. ಕಾಲೇಜಿನ ಒಂದು ದಿನದ ವಿದ್ಯೋತ್ಸವ ಆಗಿರದೆ ಕಲಿಕೆಯ ವರ್ಷವಿಡೀ ನಡೆಯುವ ನಿತ್ಯೋತ್ಸವ ಎಂದು ಬಣ್ಣಿಸಿದರು.

ಕಳೆದ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ನಮ್ಮ ಕಾಲೇಜಿನ ಹಲವಾರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಹಲವು ರ್ಯಾಂಕ್ ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಮಂಡ್ಯ ಮಿಮ್ಸ್ ಆಸ್ಪತ್ರೆ ಸಹಾಯಕ ಪ್ರಾಧ್ಯಾಪಕ ಡಾ.ಆರ್.ಜಿ ಸೋಮಸುಂದರ್, ಹಿರಿಯ ಪ್ರಯೋಗ ಶಾಲಾ ತಂತ್ರಜ್ಞ ಬಿ.ವಿ.ನಂದಿನಿ, ವಿದ್ಯಾ ಚಂದ್ರಮೋಹನ್ಪಾಲ್ಗೊಂಡಿದ್ದರು.