ಯೂರಿಯಾ ವಿಷಯದಲ್ಲಿ ಕೇಂದ್ರ ಮೇಲೆ ಗೂಬೆ ಕೂರಿಸುವ ಕೆಲಸ: ಮುನೇನಕೊಪ್ಪ

| Published : Jul 29 2025, 01:02 AM IST

ಯೂರಿಯಾ ವಿಷಯದಲ್ಲಿ ಕೇಂದ್ರ ಮೇಲೆ ಗೂಬೆ ಕೂರಿಸುವ ಕೆಲಸ: ಮುನೇನಕೊಪ್ಪ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದಲ್ಲಿ ರೈತರಿಗೆ ಎಷ್ಟು ಪ್ರಮಾಣದ ಗೊಬ್ಬರ ಬೇಕು ಎಂಬುದನ್ನು ರಾಜ್ಯ ಸರ್ಕಾರ ಕೇಂದ್ರಕ್ಕೆ ತಿಳಿಸಬೇಕು. ಆದರೆ, ರಾಜ್ಯ ಅದನ್ನು ಮಾಡದೇ, ಕೇಂದ್ರದ ಮೇಲೆ ಗೂಬೆ ಕೂರಿಸುವ ಯತ್ನ ಮಾಡುತ್ತಿದೆ.

ನವಲಗುಂದ: ರೈತರಿಗೆ ಯೂರಿಯಾ ಗೊಬ್ಬರ ಸಿಗದೇ ಇರುವುದಕ್ಕೆ ಕೇಂದ್ರದತ್ತ ಬೊಟ್ಟು ಮಾಡುತ್ತಿರುವುದು ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರಕ್ಕೆ ಶೋಭೆ ತರುವುದಿಲ್ಲ. ರೈತರ ಬೇಡಿಕೆ ಈಡೇರಿಸುವ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಉದ್ದೇಶದಿಂದ "ಬೆಂಕಿ ಹತ್ತಿದಾಗ ಬಾವಿ ತೋಡುವ " ಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಆರೋಪಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ರೈತರಿಗೆ ಎಷ್ಟು ಪ್ರಮಾಣದ ಗೊಬ್ಬರ ಬೇಕು ಎಂಬುದನ್ನು ರಾಜ್ಯ ಸರ್ಕಾರ ಕೇಂದ್ರಕ್ಕೆ ತಿಳಿಸಬೇಕು. ಆದರೆ, ರಾಜ್ಯ ಅದನ್ನು ಮಾಡದೇ, ಕೇಂದ್ರದ ಮೇಲೆ ಗೂಬೆ ಕೂರಿಸುವ ಯತ್ನ ಮಾಡುತ್ತಿದೆ ಎಂದಿದ್ದಾರೆ.

ರಾಜ್ಯದಲ್ಲಿ ರೈತರ ಮೇಲೆ ಗೋಲಿಬಾರ್, ಲಾಠಿಚಾರ್ಜ್ ಸೇರಿದಂತೆ ರೈತರ ಮೇಲೆ ನೂರಾರು ಪ್ರಕರಣ ದಾಖಲಿಸಿದ್ದು ಯಾವ ಪಕ್ಷದವರು ಎಂಬುದು ರೈತರಿಗೆ ಗೊತ್ತಿರುವ ವಿಷಯ. ರಾಜ್ಯದ ಕಾಂಗ್ರೆಸ್ ಸರ್ಕಾರ ಕೇಂದ್ರದ ಮೇಲೆ ಬೊಟ್ಟು ಮಾಡುವುದನ್ನು ಬಿಟ್ಟು ರೈತರಿಗೆ ಬೇಕಾದ ಗೊಬ್ಬರದ ಬೇಡಿಕೆಯನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

ರೈತರ ಬೇಡಿಕೆಗೆ ಅನುಗುಣವಾಗಿ ಗೊಬ್ಬರ ಸಿಗದೇ ಹೋದರೆ ರೈತರ ಜತೆ ತಾವೂ ಹೋರಾಟದ ಹಾದಿ ಹಿಡಿಯಬೇಕಾಗತ್ತದೆ ಎಂದು ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಎಚ್ಚರಿಸಿದ್ದಾರೆ.

ಕಳೆದ ಎರಡೂವರೆ ವರ್ಷದಿಂದ ರಾಜ್ಯ ಸರ್ಕಾರಕ್ಕೆ ಬೆಳೆಹಾನಿ, ಬೆಳೆ ಪರಿಹಾರ ಮತ್ತು ಬಿದ್ದ ಮನೆಗಳಿಗೆ ಪರಿಹಾರ ಕೊಡಲು ಆಗುತ್ತಿಲ್ಲ. ಎಲ್ಲವಕ್ಕೂ ''''''''ಗ್ಯಾರಂಟಿ'''''''' ಎನ್ನುತ್ತ ನಡೆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ "ಗ್ಯಾರಂಟಿ " ಅಳಿದು ಹೋಗುತ್ತದೆ ಎಂದು ಮಾಜಿ ಸಚಿವರು ಹೇಳಿದ್ದಾರೆ.