ವಿಜಯಪುರ: ಸುತ್ತೂರು ಮಠದ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳಿಗಾಗಿ ಅಕ್ಷರ ಹಾಗೂ ಅನ್ನ ದಾಸೋಹ ನೀಡಿ ಲಕ್ಷಾಂತರ ಜನರ ಬಾಳಿನ ಬೆಳಕಾಗಿದ್ದಾರೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಎಚ್.ಎಸ್.ರುದ್ರೇಶಮೂರ್ತಿ ಹೇಳಿದರು
ವಿಜಯಪುರ: ಸುತ್ತೂರು ಮಠದ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳಿಗಾಗಿ ಅಕ್ಷರ ಹಾಗೂ ಅನ್ನ ದಾಸೋಹ ನೀಡಿ ಲಕ್ಷಾಂತರ ಜನರ ಬಾಳಿನ ಬೆಳಕಾಗಿದ್ದಾರೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಎಚ್.ಎಸ್.ರುದ್ರೇಶಮೂರ್ತಿ ಹೇಳಿದರು.
ಶರಣ ಸಾಹಿತ್ಯ ಪರಿಷತ್ತು ಹಾಗೂ ಸಾಕ್ಷಿ ಮುರುಘ ಸೇವಾ ಟ್ರಸ್ಟ್ ಸಹಯೋಗದಲ್ಲಿ ಶರಣ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ, ಮೈಸೂರಿನ ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಜನ್ಮದಿನೋತ್ಸವ, ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಜೆಎಸ್‌ಎಸ್ ವಿದ್ಯಾಪೀಠ ಬೃಹತ್ ಮರದಂತೆ ಬೆಳೆದು ಜಗತ್ತಿನಾದ್ಯಂತ ಸಂಸ್ಥೆಗಳನ್ನು ಸ್ಥಾಪಿಸಿ ವಸತಿ ಶಿಕ್ಷಣ ನೀಡುತ್ತಿದೆ. ಅವರ ತ್ಯಾಗ ಮತ್ತು ಕರುಣೆಯ ಹಾದಿ ನಮ್ಮೆಲ್ಲರಿಗೂ ಸಾರ್ವಕಾಲಿಕ ಅನುಕರಣೀಯ ಎಂದರು.ಜಿಲ್ಲಾ ಕದಳಿ ವೇದಿಕೆ ಅಧ್ಯಕ್ಷೆ ಬಿ.ಸ್ವರ್ಣಗೌರಿ ಮಾತನಾಡಿ, ಸಮಾಜದ ಶೋಷಿತ, ಬಡ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಏಳಿಗೆಗೆ ರಾಜೇಂದ್ರ ಸ್ವಾಮೀಜಿಯ ಕೊಡುಗೆ ಅಪಾರ. ಸಂಘ ಸಂಸ್ಥೆಗಳು ಮಕ್ಕಳ ಶೈಕ್ಷಣಿಕ ಉನ್ನತಿಗೆ ಪೂರಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಮಾದರಿ ಎಂದರು.
ಶಸಾಪ ಜಿಲ್ಲಾಧ್ಯಕ್ಷ ಚಂದ್ರಶೇಖರ ಹಡಪದ್, ತಾಲೂಕು ಅಧ್ಯಕ್ಷ ಮ.ಸುರೇಶ್‌ಬಾಬು ವಿದ್ಯಾರ್ಥಿಗಳಿಗೆ ಸಾಕ್ಷಿಮುರುಘ ಸೇವಾ ಟ್ರಸ್ಟ್ ಉಚಿತ ನೋಟ್‌ನುಕ್ ಹಾಗೂ ಲೇಖನ ಸಾಮಗ್ರಿ ವಿತರಿಸಿದರು. ಕದಳಿ ವೇದಿಕೆ ಕಾರ್ಯದರ್ಶಿ ದೀಪಾ, ವಿಜಯಪುರ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಪವನ್, ಮಹಾತ್ಮ ಪ್ರೌಢಶಾಲೆ ಮುಖ್ಯಶಿಕ್ಷಕಿ ಶಶಿಕಲಾ, ಶಿಕ್ಷಕ ರವಿ, ದೇವಪ್ಪ ಮತ್ತಿತರರಿದ್ದರು.(ಫೋಟೊ ಕ್ಯಾಪ್ಷನ್)
ವಿಜಯಪುರದಲ್ಲಿ ದೇವನಹಳ್ಳಿ ತಾಲೂಕು ಶರಣ ಸಾಹಿತ್ಯ ಪರಿಷತ್ ಸಂಸ್ಥಾಪನಾ ದಿನಾಚರಣೆ, ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಎಚ್.ಎಸ್.ರುದ್ರೇಶಮೂರ್ತಿ, ಚಂದ್ರಶೇಖರ ಹಡಪದ್, ಮ.ಸುರೇಶ್‌ಬಾಬು, ಸ್ವರ್ಣಗೌರಿ, ಮತ್ತಿತರರು ಪಾಲ್ಗೊಂಡಿದ್ದರು.