ಸಾರಾಂಶ
ಬೇರೆ ರಾಜ್ಯಗಳಿಂದ ಬಂದು ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಕನ್ನಡ ಕಲಿತುಕೊಳ್ಳಬೇಕು.
ಕನ್ನಡಪ್ರಭ ವಾರ್ತೆ ಮೈಸೂರುಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಶುಕ್ರವಾರ ನಗರದ ಅಶೋಕಪುರಂ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ರೈಲ್ವೆ ನಿಲ್ದಾಣದಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಅದಷ್ಟು ಬೇಗ ಪೂರ್ಣಗೊಳಿಸಿ, ನ. 15ಕ್ಕೆ ಉದ್ಘಾಟಿಸಲು ಸಿದ್ಧಪಡಿಸಬೇಕು. ಬೇರೆ ರಾಜ್ಯಗಳಿಂದ ಬಂದು ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಕನ್ನಡ ಕಲಿತುಕೊಳ್ಳಬೇಕು. ಇದರಿಂದ ಸಾರ್ವಜನಿಕರೊಂದಿಗೆ ಉತ್ತಮ ಸಂವಹನ ನಡೆಸಿ, ಉತ್ತಮ ಸೇವೆ ನೀಡಲು ಸಹಕಾರಿ ಆಗುತ್ತದೆ ಎಂದರು.ಬಳಿಕ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಚೇರಿಗೆ ಆಗಮಿಸಿ ಅಧಿಕಾರಿಗಳ ಸಭೆ ನಡೆಸಿದರು.ನಂತರ ಮೈಸೂರು ಕೇಂದ್ರ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಆಲಿಸಿದರು. ಮಹಿಳೆಯರ ವಿಶ್ರಾಂತಿ ಕೊಠಡಿಗೆ ತೆರಳಿ ಅಲ್ಲಿನ ವೃದ್ಧರ ಕುಶಲೋಪಹರಿ ವಿಚಾರಿಸಿದರು.ಈ ವೇಳೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಟಿ.ಎಸ್. ಶ್ರೀವತ್ಸ, ರೈಲ್ವೆ ಇಲಾಖೆ ಅಧಿಕಾರಿಗಳು ಇದ್ದರು.