ವಿಶ್ವಶಾಂತಿ ಇಂದಿನ ತುರ್ತು ಅಗತ್ಯವಾಗಿದ್ದು, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿವಿ ಈ ದಿಸೆಯಲ್ಲಿ ಜಗತ್ತಿನಾದ್ಯಂತ ಶಾಂತಿ ನೆಮ್ಮದಿಯ ವಾತಾವರಣಕ್ಕಾಗಿ ಪ್ರತಿಯೊಬ್ಬರಲ್ಲಿ ಆಧ್ಯಾತ್ಮಿಕ ಜಾಗೃತಿಯ ಮೂಲಕ ಶ್ರಮಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಶಿಕಾರಿಪುರ: ವಿಶ್ವಶಾಂತಿ ಇಂದಿನ ತುರ್ತು ಅಗತ್ಯವಾಗಿದ್ದು, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿವಿ ಈ ದಿಸೆಯಲ್ಲಿ ಜಗತ್ತಿನಾದ್ಯಂತ ಶಾಂತಿ ನೆಮ್ಮದಿಯ ವಾತಾವರಣಕ್ಕಾಗಿ ಪ್ರತಿಯೊಬ್ಬರಲ್ಲಿ ಆಧ್ಯಾತ್ಮಿಕ ಜಾಗೃತಿಯ ಮೂಲಕ ಶ್ರಮಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಭಾನುವಾರ ಪಟ್ಟಣದ ರಥಬೀದಿಯಲ್ಲಿನ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿವಿದಲ್ಲಿ ನಡೆದ ವಿಶ್ವ ಧ್ಯಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಗತ್ತಿಗೆ ಇಂದು ಶಾಂತಿ ಅಗತ್ಯವಾಗಿದ್ದು, ಈ ದಿಸೆಯಲ್ಲಿ ಪ್ರ.ಬ್ರ.ಈ ವಿವಿ ಜಗತ್ತಿನ ಬಹುತೇಕ ದೇಶಗಳಲ್ಲಿ ಶಾಂತಿ ನೆಮ್ಮದಿಯ ವಾತಾವರಣ ನಿರ್ಮಾಣಕ್ಕಾಗಿ ಶ್ರಮಿಸುತ್ತಿದೆ. ಸಂಸ್ಥೆಯ ಮಾತೆಯರು ಪ್ರತಿಯೊಬ್ಬರಲ್ಲಿ ಆಧ್ಯಾತ್ಮಿಕ ಜಾಗೃತಿಯ ಮೂಲಕ ಶಾಂತಿ ನೆಮ್ಮದಿಗಾಗಿ ಪ್ರಯತ್ನಿಸುತ್ತಿದ್ದಾರೆ ಎಂದರು. ಸಂಸ್ಥೆ ಕೈಗೊಂಡಿರುವ ಆಧ್ಯಾತ್ಮಿಕ ಜಾಗೃತಿ ಅಭಿಯಾನದಲ್ಲಿ ಪ್ರತಿಯೊಬ್ಬರೂ ಭಾಗಿಯಾಗಿ ಸಹಕರಿಸುವಂತೆ ಕರೆ ನೀಡಿದ ಅವರು, ಪ್ರ.ಬ್ರ.ಈ ವಿವಿ ದ ಅಕ್ಕಂದಿರ ಮಾರ್ಗದರ್ಶನದ ರೀತಿಯಲ್ಲಿ ಪ್ರತಿಯೊಬ್ಬರೂ ಬದುಕನ್ನು ರೂಪಿಸಿಕೊಳ್ಳಬೇಕು. ಸಂಸ್ಥೆಯ ಕಾರ್ಯವೈಖರಿ ಬಗ್ಗೆ ಪ್ರಧಾನಿ ಮೋದಿ ಹಲವು ಬಾರಿ ಶ್ಲಾಘಿಸಿದ್ದಾರೆ ಎಂದು ಹೇಳಿದರು. ರಾಣೆಬೆನ್ನೂರು ವಿವಿದ ಮಾಲತಿ ಅಕ್ಕ, ಬ್ಯಾಡಗಿಯ ಸುರೇಖಕ್ಕ, ಹಲಗೇರಿಯ ಕಸ್ತೂರಿ ಅಕ್ಕ, ಸ್ಥಳೀಯ ಸಂಸ್ಥೆಯ ಸಂಚಾಲಕರಾದ ಸ್ನೇಹಕ್ಕ ಧ್ಯಾನದ ಮಹತ್ವ ತಿಳಿಸಿದರು.

ವೇದಿಕೆಯಲ್ಲಿ ಎಂಎಡಿಬಿ ಮಾಜಿ ಅಧ್ಯಕ್ಷ ಗುರುಮೂರ್ತಿ, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಮಾಜಿ ಉಪಾಧ್ಯಕ್ಷ ರೇವಣಪ್ಪ ಕೊಳಗಿ, ತಾ.ವೀರಶೈವ ಮಹಾಸಭಾ ಅಧ್ಯಕ್ಷ ಸುಧೀರ್ ಮಾರವಳ್ಳಿ, ರೋಟರಿ ಕದಂಬ ಕ್ಲಬ್ ಸಂಸ್ಥಾಪಕ ಅಧ್ಯಕ್ಷ ಎಂ.ಆರ್.ರಘು, ಜೆಸಿ ಕ್ಲಬ್ ಅಧ್ಯಕ್ಷ ಶಾಂತರಾಮ್ ಶೇಟ್, ಪರೋಪಕಾರಂ ಸಂಸ್ಥೆಯ ಮುಖ್ಯಸ್ಥ ಮಧುಕೇಶವ, ಸಮಾಜ ಸೇವಕರಾದ ನಿವೇದಿತ ರಾಜು, ಕಾಂಚನ ಕುಮಾರ್, ಶಿವಕುಮಾರ್ ಮತ್ತಿತರರಿದ್ದರು.