ಸಾರಾಂಶ
ಕಡೂರು, ನಮ್ಮ ದೇಶದ ಭವಿಷ್ಯದ ಪ್ರಜೆಗಳಾಗಿರುವ ಯುವಪೀಳಿಗೆ ದುಶ್ಚಟಗಳಿಗೆ ಬಲಿಯಾಗದೆ ಸದೃಢ ಆರೋಗ್ಯ ಕಾಪಾಡಿ ಕೊಳ್ಳಬೇಕು ಎಂದು ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ಕರೆ ನೀಡಿದರು.
ಸರಕಾರಿ ಕಾಲೇಜಿನಲ್ಲಿ ಎರಡು ದಿನಗಳ ಆರೋಗ್ಯ ಜಾಗೃತಿ ಶಿಬಿರ
ಕನ್ನಡಪ್ರಭ ವಾರ್ತೆ, ಕಡೂರುನಮ್ಮ ದೇಶದ ಭವಿಷ್ಯದ ಪ್ರಜೆಗಳಾಗಿರುವ ಯುವಪೀಳಿಗೆ ದುಶ್ಚಟಗಳಿಗೆ ಬಲಿಯಾಗದೆ ಸದೃಢ ಆರೋಗ್ಯ ಕಾಪಾಡಿ ಕೊಳ್ಳಬೇಕು ಎಂದು ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ಕರೆ ನೀಡಿದರು.ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕದಿಂದ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಎರಡು ದಿನಗಳ ಆರೋಗ್ಯ ಜಾಗೃತಿ ಮತ್ತು ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಯೋಗಾಭ್ಯಾಸದ ಕೊರತೆಯಿಂದ ವಿದ್ಯಾರ್ಥಿಗಳು ಮಾನಸಿಕ ಖಿನ್ನತೆಗೆ ಒಳಗಾಗುತ್ತಾರೆ. ಇದಕ್ಕೆ ಬಹು ಮುಖ್ಯವಾದ ಯೋಗಾಭ್ಯಾಸಗಳ ಬಗ್ಗೆ ಹೆಚ್ಚು ಒತ್ತು ಕೊಟ್ಟು ನಿಯಮಿತ ಆಹಾರ ಪದ್ಧತಿ ಅಳವಡಿಸಿಕೊಳ್ಳಬೇಕು. ಸರ್ಕಾರ ಶಿಕ್ಷಣಕ್ಕಾಗಿ ಹಲವು ರೀತಿ ಸವಲತ್ತುಗಳನ್ನು ನೀಡುತ್ತಿವೆ.ಇದರ ಸದ್ಬಳಕೆ ಆಗಬೇಕಿದ್ದು ಕಲಿಕೆ ಜೊತೆಗೆ ಕ್ರೀಡೆಗೂ ಆದ್ಯತೆ ನೀಡಿ ವಿದ್ಯಾರ್ಥಿಗಳು ಉತ್ತಮ ಆರೋಗ್ಯ ಪಡೆದುಕೊಳ್ಳಬೇಕಿದೆ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ ಕೆ.ಎ. ರಾಜಣ್ಣ ಮಾತನಾಡಿ, ಆಧುನಿಕ ಹಾಗೂ ಬದಲಾದ ಆಹಾರ ಪದ್ಧತಿಯಿಂದ ಯುವ ಸಮೂಹದಲ್ಲಿ ಉತ್ಸಾಹದ ಆರೋಗ್ಯ ಕಮರುತ್ತಿದೆ. ವಿದ್ಯಾರ್ಥಿಗಳು ಇದನ್ನು ಅರಿತು ಆರೋಗ್ಯ ಕಾಪಾಡಿಕೊಳ್ಳಲು ಇಂತಹ ಆರೋಗ್ಯ ಶಿಬಿರಗಳಲ್ಲಿ ತಪಾಸಣೆಗೆ ಒಳಗಾಗಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಜಿ. ಸಂಪತ್‍ಕುಮಾರ್, ಜಲಜಾಕ್ಷಿ, ತಾಲೂಕು ವೈದ್ಯಾಧಿಕಾರಿ ಡಾ ರವಿಕುಮಾರ್, ಜಿಲ್ಲಾ ಆಸ್ಪತ್ರೆ ಮಾನಸಿಕ ರೋಗ ತಜ್ಞ ವಿನಯ್‍ಕುಮಾರ್, ಬಿ.ರಮೇಶ್, ಎಂ.ಟಿ.ಭಾರತಿ, ಎಚ್.ಎಸ್. ಸವಿತಾ, ಪಂಕಜ, ಜೆ.ಈರಣ್ಣ ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.9ಕೆಕೆಡಿಯು1.ಕಡೂರು ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಆರೋಗ್ಯ ಜಾಗೃತಿ ಮತ್ತು ತಪಾಸಣಾ ಶಿಬಿರವನ್ನು ಪುರಸಭೆ ಅಧ್ಯಕ್ಷ ಭಂಡಾರಿಶ್ರೀನಿವಾಸ್ ಉದ್ಘಾಟಿಸಿದರು. ಡಾ. ಕೆ.ಎ. ರಾಜಣ್ಣ, ಜಿ.ಸಂಪತ್‍ಕುಮಾರ್, ಜಲಜಾಕ್ಷಿ, ಡಾ. ರವಿಕುಮಾರ್ ಇದ್ದರು.