ಕುಶಾಲನಗರದ ವಿವೇಕಾನಂದ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಕಾರ್ಯಕ್ರಮ ನಡೆಯಿತು. ಕ್ರೀಡಾ ವಿಶ್ಲೇಷಣೆಗಾರ ಚಪ್ಪುಡೀರ ಕಾರ್ಯಪ್ಪ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ನಂತರ ಮಾತನಾಡಿದರು.

ಕುಶಾಲನಗರ : ಕುಶಾಲನಗರದ ವಿವೇಕಾನಂದ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಕಾರ್ಯಕ್ರಮ ನಡೆಯಿತು. ಕ್ರೀಡಾ ವಿಶ್ಲೇಷಣೆಗಾರ ಚಪ್ಪುಡೀರ ಕಾರ್ಯಪ್ಪ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ನಂತರ ಮಾತನಾಡಿದರು.ಮೇಜರ್ ಧ್ಯಾನ್ ಚಂದ್ ಅವರ ಜೀವಮಾನದ ಸಾಧನೆ ಅವರಲ್ಲಿದ್ದ ರಾಷ್ಟ್ರ ಪ್ರೇಮ ಹಾಗೂ ಅವರು ಒಲಂಪಿಕ್ ನಲ್ಲಿ ಗಳಿಸಿದ ಸಾಧನೆಗಳ ಬಗ್ಗೆ ಮಾಹಿತಿ ನೀಡಿದರು. ಆಟದ ಮೈದಾನದಲ್ಲಿ ಮಿಂಚಿನ ವೇಗದಲ್ಲಿ ಗಳಿಸಿದ ಗೋಲುಗಳ ಬಗ್ಗೆ ವಿದ್ಯಾರ್ಥಿ ಗಳಿಗೆ ಮನಮುಟ್ಟುವ ರೀತಿಯಲ್ಲಿ ತಿಳಿಯಪಡಿಸಿದರು. ಜಿಲ್ಲೆಯ ಮಕ್ಕಳಲ್ಲಿ ಇತ್ತೀಚಿನ ದಿನಗಳಲ್ಲಿ ಹಾಕಿ ಕ್ರೀಡೆಯ ಬಗ್ಗೆ ಆಸಕ್ತಿ ಕಡಿಮೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು ಈಗಿನ ಯುವಕರು ಮೊಬೈಲ್ ಬಳಸುವುದರಲ್ಲಿಯೇ ಕಾಲ ಕಳೆಯುತ್ತಿದ್ದಾರೆ. ಯುವಕರ ದೈಹಿಕ ಸಾಮರ್ಥ್ಯ ಕುಂದುತ್ತಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿದರು.

ವಿವೇಕಾನಂದ ಕಾಲೇಜು ಆಡಳಿತ ಮಂಡಳಿ ರಾಷ್ಟ್ರೀಯ ಕ್ರೀಡಾ ದಿನಕ್ಕೆ ಬಹಳ ಅಚ್ಚುಕಟ್ಟಾಗಿ ಕಾರ್ಯಕ್ರಮ ರೂಪಿಸಿ ಮಕ್ಕಳಲ್ಲಿ ಕ್ರೀಡಾ ಸ್ಪೂರ್ತಿ ತುಂಬುವಂತಹ ಕಾರ್ಯಕ್ರಮ ರೂಪಿಸಿರೋದಕ್ಕೆ ಸಂತಸ ವ್ಯಕ್ತಪಡಿಸಿದರು. ದಿನದ ಮಹತ್ವ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕೆಲಸ ನಿರಂತರ ನಡೆಯಬೇಕಾಗಿದೆ ಎಂದರು. ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ವಿಕ್ರಂ, ಕಚೇರಿ ಆಡಳಿತಾಧಿಕಾರಿ ಮಹೇಶ್ ಅಮೀನ್ ಇದ್ದರು. ಇದೇ ಸಂದರ್ಭ ಕಾರ್ಯಪ್ಪ ಅವರನ್ನು ಕಾಲೇಜು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಉಪನ್ಯಾಸಕಿ ಮೇರಿ ಪ್ರಿಯಾ ಕಾರ್ಯಕ್ರಮ ನಿರೂಪಿಸಿದರು.