ಯುವ ಸಮುದಾಯ ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ಪಿ.ಕೆ. ಪೂಜಾರಿ

| Published : Jun 02 2024, 01:46 AM IST

ಯುವ ಸಮುದಾಯ ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ಪಿ.ಕೆ. ಪೂಜಾರಿ
Share this Article
  • FB
  • TW
  • Linkdin
  • Email

ಸಾರಾಂಶ

ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ನಾರಾವಿ ಪಟ್ಟಣದಲ್ಲಿ ಗುಂಪಿನ ಸದಸ್ಯರು ಹಾಗೂ ವಿದ್ಯಾರ್ಥಿಗಳು ಜಾಥಾ ನಡೆಸಿದರು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಶಾಲಾ ದೆಸೆಯಲ್ಲಿಯೇ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ಸ್ಪಷ್ಟ ದೂರ ದೃಷ್ಟಿಯನ್ನು ಇಟ್ಟುಕೊಳ್ಳಬೇಕು. ತಂಬಾಕು ಸೇವನೆ, ಮದ್ಯ ಸೇವನೆ, ಗಾಂಜಾ ಅಫೀಮು ಮೊದಲಾದ ದುಶ್ಚಟಗಳಿಗೆ ಯುವ ಸಮುದಾಯ ಬಲಿಯಾಗಬಾರದು ಎಂದು ಬೆಳ್ತಂಗಡಿ ತಾಲೂಕಿನ ಜನ ಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷ ಪಿ.ಕೆ. ಪೂಜಾರಿ ಹೇಳಿದರು.

ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ, ನಾರಾವಿ ಸರ್ಕಾರಿ ಪ್ರೌಢಶಾಲೆ, ಲಯನ್ಸ್ ಕ್ಲಬ್ ಬೆಳ್ತಂಗಡಿ, ಲಿಯೋ ಕ್ಲಬ್ ಬೆಳ್ತಂಗಡಿ, ಜನ ಜಾಗೃತಿ ವೇದಿಕೆ ನಾರಾವಿ ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ನಾರಾವಿ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ದುಶ್ಚಟ ದುರಭ್ಯಾಸಗಳನ್ನು ಮನಪರಿವರ್ತನೆಯ ಮೂಲಕ ಹೋಗಲಾಡಿಸುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರು ಜನ ಜಾಗೃತಿ ವೇದಿಕೆಯನ್ನು ಕಟ್ಟಿದ್ದಾರೆ. ಇದರಿಂದಾಗಿ ಸಾಕಷ್ಟು ಸಮಾಜ ಪರಿವರ್ತನೆಯ ಕಾರ್ಯಕ್ರಮಗಳ ಮೂಲಕ ಸಾವಿರಾರು ಕುಟುಂಬಗಳಲ್ಲಿ ನೆಮ್ಮದಿಯ ಜೀವನ ನಡೆಸಲು ಸಾಧ್ಯ ಆಗಿದೆ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ತಾಲೂಕ ಜನ ಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷ ಕಿಶೋರ್ ಹೆಗ್ಡೆ ಮಾತನಾಡಿದರು.

ಮುಖ್ಯ ಶಿಕ್ಷಕಿ ಸುಶೀಲಾ, ನಾರಾವಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜವರ್ಮ ಜೈನ್, ಮಾಜಿ ಉಪಾಧ್ಯಕ್ಷ ಉದಯ ಹೆಗ್ಡೆ, ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ, ನಿಯೋಜಿತ ಕಾರ್ಯದರ್ಶಿ ಕಿರಣ್ ಶೆಟ್ಟಿ, ಜನ ಜಾಗೃತಿ ವೇದಿಕೆಯ ನಾರಾವಿ ವಲಯದ ಅಧ್ಯಕ್ಷ ನಿತ್ಯಾನಂದ, ಸದಸ್ಯರಾದ ವಸಂತ ಗುಣಶೀಲ, ಕೇಂದ್ರ ಒಕ್ಕೂಟದ ಅಧ್ಯಕ್ಷ ಸದಾನಂದ ಬಂಗೇರಾ, ಗ್ರಾಮ ಸಮಿತಿ ಅಧ್ಯಕ್ಷ ರಾಮ ಶೆಟ್ಟಿ, ಜಗದೀಶ್ ಹೆಗ್ಡೆ, ಒಕ್ಕೂಟದ ಅಧ್ಯಕ್ಷ ಸುರೇಶ್ ದಾಸ್‌ ಉಪಸ್ಥಿತರಿದ್ದರು.

ಮೇಲ್ವಿಚಾರಕರಾದ ದಮಯಂತಿ, ಸೇವಾ ಪ್ರತಿನಿಧಿಗಳಾದ ಹರಿಣಾಕ್ಷಿ, ರೇಷ್ಮಾ, ಮಮತಾ ಶೆಟ್ಟಿ ಹಾಜರಿದ್ದರು. ನಾರಾವಿ ಪಟ್ಟಣದಲ್ಲಿ ಗುಂಪಿನ ಸದಸ್ಯರು ಹಾಗೂ ವಿದ್ಯಾರ್ಥಿಗಳು ಜಾಥಾ ನಡೆಸಿದರು.