ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಕ್ರೀಡೆ ಕೇವಲ ದೈಹಿಕ ಚಟುವಟಿಕೆಯಲ್ಲ. ಅದು ವ್ಯಕ್ತಿತ್ವ ವಿಕಸನ, ಶಿಸ್ತು ಮತ್ತು ಒಗ್ಗಟ್ಟಿನ ಸಂಕೇತವಾಗಿದೆ, ಯುವ ಸಮೂಹ ದೇಸಿ ಕ್ರೀಡೆಗಳಿಗೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.ನಗರದ ಬಿವಿವಿಎಸ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮಂಗಳವಾರ ಬಸವೇಶ್ವರ ಮೈದಾನದಲ್ಲಿ ಆಯೋಜಸಿದ ನಾಲ್ಕು ದಿನಗಳ ಡಾ.ಹಾನಿಮನ್ ಟ್ರೋಫಿ ಅಂತರ ಕಾಲೇಜು ಕ್ರಿಕೆಟ್ ಟೂರ್ನಾಮೆಂಟಗೆ ಚಾಲನೆ ನೀಡಿ ಮಾತನಾಡಿದರು.
ಬವಿವ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ ಮಾತನಾಡಿ, ಬವಿವ ಸಂಘ ಪಠ್ಯದ ಜತೆಗೆ ಕ್ರೀಡಾ ಚಟುವಟಿಕೆಗಳಿಗೂ ಪ್ರಾಮುಖ್ಯತೆ ನೀಡಿ ಕೋಟಿ ಕೋಟಿ ಹಣ ವ್ಯಯಿಸಿ ಒಳಾಂಗಣ - ಹೊರಾಂಗಣ ಕ್ರೀಡಾ ಮೈದಾನ, ಅಂತಾರಾಷ್ಟ್ರೀಯ ಗುಣಮಟ್ಟದ ಈಜು ಕೊಳ, ಬ್ಯಾಡಮಿನ್ ಕೋರ್ಟ ನಿರ್ಮಿಸಿದೆ ವಿದ್ಯಾರ್ಥಿಗಳು ಇವುಗಳ ಸದುಪಯೋಗ ಪಡೆದುಕೊಂಡು ರಾಜ್ಯ- ದೇಶಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಸಂಸ್ಥೆಗೆ ಹೆಸರು ತರಬೇಕೆಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿವಿವಿ ಸಂಘದ ಆಯುಷ್ ಕಾಲೇಜುಗಳ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಸಾಸನೂರ ಅಧ್ಯಕ್ಷೀಯ ನುಡಿಗಳನ್ನಾಡಿ ಕ್ರೀಡಾಕ್ಷೇತ್ರವು ಇಚ್ಛಾಶಕ್ತಿ, ಏಕಾಗ್ರತೆ ಮತ್ತು ಸ್ಪರ್ಧಾ ಮನೋಭಾವ ಬೆಳೆಸುತ್ತದೆ. ನಿರಂತರವಾದ ಕಠಿಣ ಪ್ರಯತ್ನದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ. ಸೋಲು ಕೊನೆಯಲ್ಲ. ಸೋಲೇ ಗೆಲುವಿನ ಸೋಪಾನ. ಕ್ರೀಡೆಯಲ್ಲಿ ಪರಿಣಿತರಾದವರಿಗೆ ಶ್ಯೆಕ್ಷಣಿಕ ಕ್ಷೇತ್ರದಲ್ಲೂ ಹಲವಾರು ಅವಕಾಶಗಳಿವೆ ಎಂದ ಅವರು, ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ಪ್ರಾಚಾರ್ಯ ಡಾ.ಅರುಣ ಹೂಲಿ, ಪ್ರಾಧ್ಯಾಪಕ ಡಾ.ರವಿ.ಕೋಟೆಣ್ಣವರ, ಡಾ.ಸುಧೀರ ಬೆಟಗೇರಿ, ಡಾ.ಪ್ರದೀಪ ಕೆ, ಡಾ.ಶಶಿಕುಮಾರ. ಡಾ.ತೃಪ್ತಿ ಶಿಂಧೆ, ಡಾ.ಐಶ್ವರ್ಯ ಪಾಟೀಲ, ಕ್ರೀಡಾ ಸಂಯೋಜಕರಾದ ಡಾ.ಮಂಜುನಾಥ ಪಾಟೀಲ, ಡಾ.ದೀಪಕ, ಡಾ.ಲಕ್ಷ್ಮೀ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ದೈಹಿಕ ನಿರ್ದೇಶಕರು ಉಪಸ್ಥಿತರಿದ್ದರು.
ಕರ್ನಾಟಕದ ವಿವಿಧ ಭಾಗಗಳಿಂದ ಬೆಂಗಳೂರು, ಬೆಳಗಾವಿ, ಧಾರವಾಡ, ಮಂಗಳೂರು, ಮೂಡುಬಿದ್ರೆ, ಕಲಬುರ್ಗಿಹಾಗೂ ಸಂಕೇಶ್ವರ ಹೋಮಿಯೋ ಮೆಡಿಕಲ್ ಕಾಲೇಜುಗಳ ತಂಡಗಳು ಟೂರ್ನಾಮಂಟನಲ್ಲಿ ಭಾಗವಹಿಸಿದ್ದವು.
ವಿದ್ಯಾರ್ಥಿ ಕ್ರೀಡಾ ಪ್ರತಿನಿಧಿಗಳಾದ ಶ್ರೇಯಾ, ಸುಮೀತ ಸ್ವಾಗತಿಸಿ ವಂದಿಸಿದರು. ಭಾಗ್ಯ ಗಂಗಶೆಟ್ಟಿ ನಿರೂಪಿಸಿದರು. ಕಾಲೇಜು ವಿದ್ಯಾರ್ಥಿ ಸಂಸತ್ತಿನ ಪ್ರತಿನಿಧಿಗಳಾದ ಶ್ರೇಯಸ್, ಆದಿತ್ಯ, ರಿಶಿಕೇಶ. ಹಿತೇಶ್ಯಾಮಖಾನ ವ್ಯವಸ್ಥೆ ನೇತೃತ್ವ ವಹಿಸಿದ್ದರು. ವಿದ್ಯಾರ್ಥಿ - ವಿದ್ಯಾರ್ಥಿನಿಯರ ಗುಂಪು ಸ್ವಾಗತ ನೃತ್ಯ ಎಲ್ಲರ ಕಣ್ಮನ ಸೆಳೆಯಿತು.ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಹಾಗೂ ಜೀವನದ ಕಠಿಣ ಸವಾಲುಗಳನ್ನು ಎದುರಿಸುವ ಛಲ ಬೆಳೆಸುತ್ತದೆ
-ಡಾ.ವೀರಣ್ಣ ಚರಂತಿಮಠ, ಮಾಜಿ ಶಾಸಕ