ಸಾರಾಂಶ
ಸೇತುವೆಯಿಂದ ಬಿದ್ದು, ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಓರ್ವ ವೃದ್ಧರನ್ನು ಯುವಕರಿಬ್ಬರು ಮೇಲಕ್ಕೆತ್ತಿ ರಕ್ಷಿಸಿದ ಘಟನೆ ಭಾನುವಾರ ವಿಟ್ಲದ ಸುರಂಬಡ್ಕದ ಕಿಂಡಿ ಅಣೆಕಟ್ಟು ಸೇತುವೆ ಬಳಿ ನಡೆದಿದೆ. ಸ್ಥಳೀಯ ನಿವಾಸಿ ಉಮ್ಮರ್ ಅಪಾಯದಿಂದ ಪಾರಾದ ವ್ಯಕ್ತಿ. ಚೆಕ್ಕಿದಕಾಡು ನಿವಾಸಿಗಳಾದ ಅಶೋಕ್ ಸಿ.ಎಚ್. ಹಾಗೂ ಸುರೇಶ್ ಸಿಎಚ್ ರಕ್ಷಣೆ ಮಾಡಿದ ಯುವಕರು.
ಕನ್ನಡಪ್ರಭ ವಾರ್ತೆ ಬಂಟ್ವಾಳ
ಸೇತುವೆಯಿಂದ ಬಿದ್ದು, ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಓರ್ವ ವೃದ್ಧರನ್ನು ಯುವಕರಿಬ್ಬರು ಮೇಲಕ್ಕೆತ್ತಿ ರಕ್ಷಿಸಿದ ಘಟನೆ ಭಾನುವಾರ ವಿಟ್ಲದ ಸುರಂಬಡ್ಕದ ಕಿಂಡಿ ಅಣೆಕಟ್ಟು ಸೇತುವೆ ಬಳಿ ನಡೆದಿದೆ.ಸ್ಥಳೀಯ ನಿವಾಸಿ ಉಮ್ಮರ್ ಅಪಾಯದಿಂದ ಪಾರಾದ ವ್ಯಕ್ತಿ. ಚೆಕ್ಕಿದಕಾಡು ನಿವಾಸಿಗಳಾದ ಅಶೋಕ್ ಸಿ.ಎಚ್. ಹಾಗೂ ಸುರೇಶ್ ಸಿಎಚ್ ರಕ್ಷಣೆ ಮಾಡಿದ ಯುವಕರು.
ಭಾನುವಾರ ಮಧ್ಯಾಹ್ನದ ಬಳಿಕ ಜಿಲ್ಲೆಯಾಧ್ಯಂತ ವ್ಯಾಪಕ ಮಳೆಯಾಗಿರುವ ಹಿನ್ನೆಲೆಯಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದವು. ವಿಟ್ಲದ ಸುರಂಬಡ್ಕದ ಕಿಂಡಿ ಅಣೆಕಟ್ಟು ಸೇತುವೆ ಬಳಿ ಸಂಜೆ ಉಮ್ಮರ್ ಸೇತುವೆಯಿಂದಾಗಿ ಹೋಗುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದಿದ್ದರು. ಇದನ್ನು ಕಂಡ ಯುವಕರಿಬ್ಬರು ನೀರಿನ ಹರಿವನ್ನು ಲೆಕ್ಕಿಸದೆ ನೀರಿಗೆ ಧುಮುಕಿ ಸ್ಥಳೀಯರ ಸಹಕಾರದಲ್ಲಿ ಉಮ್ಮರ್ ನ್ನು ರಕ್ಷಿಸುವಲ್ಲಿ ಸಫಲರಾಗಿದ್ದಾರೆ. ಯುವಕರ ಸಮಯಪ್ರಜ್ಞೆಗೆ ಸ್ಥಳೀಯರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಸೇತುವೆಗೆ ತಡೆಗೋಡೆ ಇಲ್ಲದಿರುವುದೇ ಅವರು ನೀರಿಗೆ ಬೀಳಲು ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ.ಕಾರಿನಲ್ಲಿ ಬೆಂಕಿ ಆಕಸ್ಮಿಕ: ಪ್ರಯಾಣಿಕರು ಪಾರು
ಮೂಲ್ಕಿ: ಕಿನ್ನಿಗೋಳಿ ಪೇಟೆಯಲ್ಲಿ ಮಾರುಕಟ್ಟೆ ಮುಂಭಾಗ ನಿಲ್ಲಿಸಿದ್ದ ಕಾರಿಗೆ ಆಕಸ್ಮಿಕ ಬೆಂಕಿ ತಗಲಿ ಕಾರು ಸುಟ್ಟು ಹೋದ ಘಟನೆ ಸೋಮವಾರ ನಡೆದಿದೆ.ಕಿನ್ನಿಗೋಳಿ ಸಮೀಪದ ದಾಮಸ್ ಕಟ್ಟೆ ನಿವಾಸಿ ಜಾಸ್ಮಿನ್ ಎಂಬವರು ತನ್ನ ತಾಯಿ ಮತ್ತು ಇಬ್ಬರು ಮಕ್ಕಳೊಂದಿಗೆ ಕಿನ್ನಿಗೋಳಿ ಮಾರುಕಟ್ಟೆ ಮುಂಭಾಗ ಕಾರು ನಿಲ್ಲಿಸಿ ಬೇಕರಿಗೆ ಹೋದ ಸಂದರ್ಭ ಕಾರಿನಲ್ಲಿ ಹೊಗೆ ಬರಲಾರಂಭಿಸಿತು. ಕಾರಿನಲ್ಲಿದ್ದ ಮಹಿಳೆ ಮತ್ತು ಮಕ್ಕಳು ಬೊಬ್ಬೆ ಹಾಕಿದ್ದಾರೆ. ಕೂಡಲೇ ಸ್ಥಳೀಯರು ಸೇರಿ ಕಾರಿನಲ್ಲಿದ್ದವರನ್ನು ಅಪಾಯದಿಂದ ಪಾರು ಮಾಡಿದ್ದಾರೆ. ಸ್ಥಳೀಯ ಅಂಗಡಿ ಮಾಲೀಕ ರಾಘವೇಂದ್ರ ಪ್ರಭು ಸ್ಥಳೀಯ ಪೆಟ್ರೋಲ್ ಪಂಪ್‌ನಿಂದ ಅಗ್ನಿ ಶಮನದ ಸಾಧನ ತರಿಸಿ ಬೆಂಕಿ ನಂದಿಸಿದ್ದಾರೆ.ಕಾರು ನಿಲ್ಲಿಸಿ ಎಸಿ ಹಾಕಿ ಹೋಗಿದ್ದ ಸಂಧರ್ಭ ದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಕಾರಿಗೆ ಬೆಂಕಿ ಹತ್ತಿರುವ ಸಾಧ್ಯತೆ ಕಂಡು ಬಂದಿದೆ. ಕಾರು ಸುಟ್ಟು ಹೋಗಿದ್ದು ಸ್ಥಳೀಯರ ಕ್ಷಿಪ್ರ ಕಾರ್ಯಚರಣೆಯಿಂದ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ.