ಸಾರಾಂಶ
ಹೊರೆಯಾಲ ವೀರಭದ್ರೇಶ್ವರ ದೇವಸ್ಥಾನದಲ್ಲಿ ಕಳ್ಳತನದ ವಿಷಯ ತಿಳಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ. ಕವಿತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗುಂಡ್ಲುಪೇಟೆ: ತಾಲೂಕಿನ ಹೊರೆಯಾಲ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಗೋಲಕ ಹೊಡೆದು ಕಳ್ಳರು ಹಣ, ಚಿನ್ನ ಎತ್ತಿಕೊಂಡು ಪರಾರಿಯಾಗಿದ್ದಾರೆ.
ಈ ಸಂಬಂಧ ದೇವಸ್ಥಾನದ ಸಮಿತಿ ಅಧ್ಯಕ್ಷ ಮಹೇಶ್ ನೀಡಿದ ದೂರಿನ ಮೇರೆಗೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಹೊರೆಯಾಲ ವೀರಭದ್ರೇಶ್ವರ ದೇವಸ್ಥಾನದಲ್ಲಿ ಕಳ್ಳತನದ ವಿಷಯ ತಿಳಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ. ಕವಿತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಗುಂಡ್ಲುಪೇಟೆ ತಾಲೂಕಿನ ಹೊರೆಯಾಲ ವೀರಭದ್ರೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ.