ಕಾಪು: ಇಲ್ಲಿನ ತಾಲೂಕಿನ ಹೆಜಮಾಡಿ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವ ವೇಳೆ ವೃದ್ದೆಯ ಚಿನ್ನದ ಸರವನ್ನು ಕಳ್ಳತನ ಮಾಡಿದ ಮೂವರು ಮಹಿಳೆಯರನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತಮಿಳುನಾಡು ಕೃಷ್ಣಗಿರಿ ನಿವಾಸಿಗಳಾದ ಶೀತಲ್, ಕಾಳಿಯಮ್ಮ ಮತ್ತು ಮಾರಿ ಎಂದು ಗುರುತಿಸಲಾಗಿದೆ.
ಕಾಪು: ಇಲ್ಲಿನ ತಾಲೂಕಿನ ಹೆಜಮಾಡಿ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವ ವೇಳೆ ವೃದ್ದೆಯ ಚಿನ್ನದ ಸರವನ್ನು ಕಳ್ಳತನ ಮಾಡಿದ ಮೂವರು ಮಹಿಳೆಯರನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತಮಿಳುನಾಡು ಕೃಷ್ಣಗಿರಿ ನಿವಾಸಿಗಳಾದ ಶೀತಲ್, ಕಾಳಿಯಮ್ಮ ಮತ್ತು ಮಾರಿ ಎಂದು ಗುರುತಿಸಲಾಗಿದೆ. ಹೆಜಮಾಡಿ ಗರಡಿಯಲ್ಲಿ ಗುರುವಾರ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವ ನಡೆಯುತ್ತಿದ್ದ ವೇಳೆ ಕಮಲಾ ಎಂಬ ವೃದ್ಧೆಯೊಬ್ಬರನ್ನು ಇವರು ಸುತ್ತುವರಿದು ನಿಂತು, ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕದ್ದಿದ್ದಾರೆ. ಸರದ ಮೌಲ್ಯ ಸುಮಾರು 2 ಲಕ್ಷ ರು,ಗಳಾಗಿದ್ದು, ಅವರ ಕಳ್ಳತನದ ದೃಶ್ಯ ಗರಡಿಯ ಸಿಸಿ ಟಿವಿ ಕ್ಯಾಮರದಲ್ಲಿ ಸೆರೆಯಾಗಿತ್ತು. ಅದನ್ನು ವೈರಲ್ ಗೊಳಿಸಿ, ಆರೋಪಿಗಳ ಮುಖಚರ್ಯೆಯನ್ನು ಬಯಲು ಮಾಡಲಾಗಿತ್ತು.ಈ ಸಿಸಿ ಕ್ಯಾಮರಾ ದೃಶ್ಯದ ಆಧಾರದಲ್ಲಿ ಪಡುಬಿದ್ರೆ ಪೊಲೀಸರು ಮೂವರು ಮಹಿಳೆಯರನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.