ಸಾರಾಂಶ
ಇಬ್ಬರು ಕಳ್ಳರು ಮನೆ ಬೀಗ ಹೊಡೆದು ಬೀರುವಿನಲ್ಲಿದ್ದ 70 ಗ್ರಾಂ ಚಿನ್ನ, 750 ಗ್ರಾಂ ಬೆಳ್ಳಿ ಹಾಗೂ ₹5000 ದೋಚಿ ಪರಾರಿಯಾದ ಘಟನೆ ಪಟ್ಟಣದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ದಾಬಸ್‍ಪೇಟೆ: ಇಬ್ಬರು ಕಳ್ಳರು ಮನೆ ಬೀಗ ಹೊಡೆದು ಬೀರುವಿನಲ್ಲಿದ್ದ 70 ಗ್ರಾಂ ಚಿನ್ನ, 750 ಗ್ರಾಂ ಬೆಳ್ಳಿ ಹಾಗೂ ₹5000 ದೋಚಿ ಪರಾರಿಯಾದ ಘಟನೆ ಪಟ್ಟಣದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಪಟ್ಟಣದ ಅನ್ನಪೂರ್ಣೇಶ್ವರಿ ಬಡಾವಣೆಯಲ್ಲಿರುವ ನಿವೃತ್ತ ಪೊಲೀಸ್ ಅಧಿಕಾರಿ ಜಗದೀಶ್ ಮಾಲೀಕತ್ವದ ಮನೆಯಲ್ಲಿ ಬಾಡಿಗೆ ಇದ್ದ ಸುರೇಶ್ ಮನೆಯಲ್ಲಿ ಕಳ್ಳತನ ಆಗಿದೆ. ಘಟನಾ ವಿವರ: ಸುರೇಶ್ ಕಡೂರು ಗ್ರಾಮಕ್ಕೆ ಫೆ.3ರಂದು ಕುಟುಂಬ ಸಮೇತ ಮನೆಗೆ ಬೀಗ ಹಾಕಿಕೊಂಡು ಹೋಗಿದ್ದಾರೆ. ಇಬ್ಬರು ಕಳ್ಳರು ಫೆ.4ರಂದು ರಾತ್ರಿ ಮನೆಯ ಬೀಗ ಹೊಡೆದು ಬೀರುವಿನಲ್ಲಿದ್ದ ಅಸಲಿ ಚಿನ್ನಾಭರಣ ಕದ್ದು, ನಕಲಿ ಚಿನ್ನದ ವಸ್ತುಗಳನ್ನು ಅಲ್ಲಿಯೇ ಬಿಟ್ಟು ಹೋಗಿದ್ದಾರೆ.ಕಳ್ಳರ ಚಲನವಲನ ಎದುರುಗಡೆ ಮನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮುಖಕ್ಕೆ ಬಟ್ಟೆ ಧರಿಸಿಕೊಂಡು ಕಬ್ಬಿಣದ ರಾಡು ಇಡಿದುಕೊಂಡು ಬಂದಿದ್ದರು. ಎದುರುಗಡೆ ಮನೆಯಲ್ಲಿ ಕಳೆದ 6-7 ತಿಂಗಳ ಹಿಂದೆ ಕಳ್ಳತನವಾಗಿತ್ತು. ಮತ್ತೇ ಅದೇ ರಸ್ತೆಯ ಮತ್ತೊಂದು ಮನೆಯಲ್ಲಿ ಕಳ್ಳತನವಾಗಿರುವುದು ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಜಗದೀಶ್, ಸಂಚಾರಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ರವಿ, ಎಎಸ್ ಐ ಮಲ್ಲೇಶ್, ಶ್ವಾನದಳ, ಬೆರಳಚ್ಚುದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.