ದೇವನಹಳ್ಳಿ: ಜುಲೈ ೨೬ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಿಸಿರುವ ಥೀಮ್ ಪಾರ್ಕ್ ಲೋಕಾರ್ಪಣೆ ಮಾಡಲಾಗುವುದು ಎಂದು ಮಾಜಿ ಡಿಸಿಎಂ ಸಿ.ಎನ್.ಅಶ್ವತ್ಥ ನಾರಾಯಣ್ ತಿಳಿಸಿದರು
ದೇವನಹಳ್ಳಿ: ಜುಲೈ ೨೬ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಿಸಿರುವ ಥೀಮ್ ಪಾರ್ಕ್ ಲೋಕಾರ್ಪಣೆ ಮಾಡಲಾಗುವುದು ಎಂದು ಮಾಜಿ ಡಿಸಿಎಂ ಸಿ.ಎನ್.ಅಶ್ವತ್ಥ ನಾರಾಯಣ್ ತಿಳಿಸಿದರು.
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಥೀಮ್ ಪಾರ್ಕ್ ಕಾಮಗಾರಿಯನ್ನು ವೀಕ್ಷಿಸಿ ಮಾತನಾಡಿದ ಅವರು, ಥೀಮ್ ಪಾರ್ಕ್ ಕಾಮಗಾರಿ ಪೂರ್ಣಗೊಂಡಿದೆ. ಬೆಂಗಳೂರು ಮಹಾನಗರ ನಿರ್ಮಾತೃ ಕೆಂಪೇಗೌಡರು ಕಟ್ಟಿದ ಬೆಂಗಳೂರು ದಿನೆದಿನೇ ವ್ಯಾಪಕವಾಗಿ ಬೆಳೆಯುತ್ತಿದೆ. ಅನೇಕರು ಸಮಾಜಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಪ್ರಸ್ತುತ ಕೆಂಪೇಗೌಡರು ಎಲ್ಲರಲ್ಲೂ ಚಿರಸ್ಥಾಯಿಯಾಗಿದ್ದಾರೆ. ಅವರು ಕೊಟ್ಟಂತಹ ಕೊಡುಗೆ ಅಪಾರವಾದುದು ಎಂದು ಹೇಳಿದರು. ನಗರ ನಿರ್ಮಾಣದ ಪರಿಕಲ್ಪನೆಯನ್ನು ಎಲ್ಲರಿಗೂ ತೋರಿಸಿಕೊಟ್ಟಿದ್ದಾರೆ. ೫೦೦ ವರ್ಷ ಕಳೆದರು ಅವರು ನಿರ್ಮಾಣ ಮಾಡಿದ ಪೇಟೆಗಳು, ದೇವಾಲಯಗಳು ಇಂದಿಗೂ ನೋಡುವಂತಾಗಿದೆ. ಕೆಂಪೇಗೌಡ ಪ್ರತಿಮೆಗೆ ಸಮೃದ್ಧಿ ಪ್ರತಿಮೆ ಎಂದು ನಾಮಕರಣ ಮಾಡಿ ಇಡೀ ವಿಶ್ವಕ್ಕೆ ಅವರ ಅಸ್ತಿತ್ವ ಹಾಗೂ ಶಕ್ತಿ ಸಾರುವ ಕೆಲಸ ಮಾಡಲು ಸಮೃದ್ಧಿಯ ಪ್ರತಿಮೆ ಎಂದು ನಾಮಕರಣ ಮಾಡಲಾಗುವುದು. ೨೬ ರಂದು ನಡೆಯುವ ಕಾಯಕ್ರಮದಲ್ಲಿ ೧೫ ಜನರಿಗೆ ರಾಜ್ಯಮಟ್ಟದ ಕೆಂಪೇಗೌಡ ಪ್ರಶಸ್ತಿ, ಮೂವರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಗುವುದು, ಕಾಯಕ್ರಮವನ್ನು ಟಿ.ಪಿ.ರಾಧಾಕೃಷ್ಣ ಅವರು ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.ಪ್ರತಿಷ್ಠಾನದ ಅಧ್ಯಕ್ಷ ಕೃಷ್ಣೇಗೌಡ ಮಾತನಾಡಿ, ನಾಡಪ್ರಭು ಕೆಂಪೇಗೌಡರು ಅನೇಕ ಪೇಟೆಗಳನ್ನು ನಿರ್ಮಾಣ ಮಾಡಿದ್ದಾರೆ. ಎಲ್ಲ ಸಮುದಾಯದವರಿಗೂ ಅನುಕೂಲ ಕಲ್ಪಿಸಿದ್ದಾರೆ. ಕೆರೆಕಟ್ಟೆ, ಕಲ್ಯಾಣಿ ನಿರ್ಮಿಸಿ ರೈತರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ನಮ್ಮ ಫೌಂಡೇಷನ್ ನಿಂದ ಜೂನ್ ೨೭ರಂದು ಸಂಜೆ ೪-೩೦ಕ್ಕೆ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಠಾಧೀಶರಾದ ಶ್ರೀ ನಿರ್ಮಲಾನಂದ ಸ್ವಾಮೀಜಿ, ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ವಿ.ಸೋಮಣ್ಣ ಸೇರಿದಂತೆ ಮುಖಂಡರು, ರಾಜಕೀಯ ನಾಯಕರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮಹನೀಯರನ್ನು ಅಭಿನಂದಿಸಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ದೊಡ್ಡಬಳ್ಳಪುರ ಶಾಸಕ ಧೀರಜ್ ಮುನಿರಾಜು, ದೇವನಹಳ್ಳಿ ತಾಲೂಕು ಮಂಡಲ ಅಧ್ಯಕ್ಷ ನೀಲೇರಿ ಎಲ್.ಎನ್.ಅಂಬರೀಶ್‌ಗೌಡ, ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಅಧ್ಯಕ್ಷ ಸೀತಕಲ್ ರಾಮಚಂದ್ರಪ್ಪ, ದೇವನಹಳ್ಳಿ ತಾಲೂಕು ಮಂಡಲ ಅಧ್ಯಕ್ಷ ಎಲ್.ಎನ್. ಅಂಬರೀಶ್‌ಗೌಡ, ಚಿಂತಾಮಣಿ ಶಾಸಕ ಆಕಾಂಕ್ಷಿ ವೇಣುಗೋಪಾಲ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾಗವೇಣಿ, ಓಬದೇನಹಳ್ಳಿ ಮುನಿಯಪ್ಪ, ಬಿಜೆಪಿ ಮುಖಂಡರಾದ ವಿಶ್ವನಾಥಪುರ ವಿನಯ್‌ಕುಮಾರ್, ಅರುವನಹಳ್ಳಿ ವೆಂಕಟೇಗೌಡ, ಶಿವಪ್ರಸಾದ್, ಸುರೇಶ್, ಎಸ್.ರಮೇಶ್‌ಕುಮಾರ್, ದೊಡ್ಡಬಸವರಾಜು ಇತರರಿದ್ದರು.೨೪ ದೇವನಹಳ್ಳಿ ಚಿತ್ರಸುದ್ದಿ: ೦೧ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದ ಅಧ್ಯಕ್ಷ ಕೃಷ್ಣೇಗೌಡ ನಾಡಪ್ರಭು ಕೆಂಪೇಗೌಡರ ೫೧೭ನೇ ಜಯಂತಿಯ ಆಹ್ವಾನ ಪತ್ರಿಕೆಯನ್ನು ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ್ ಬಿಡುಗಡೆ ಮಾಡಿ ನಂತರ ಅವರನ್ನು ಅಭಿನಂದಿಸಲಾಯಿತು.