ತೆಂಕನಿಡಿಯೂರು ಕಾಲೇಜು: ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಕಾರ್ಯಾಗಾರ

| Published : Dec 17 2024, 01:01 AM IST

ತೆಂಕನಿಡಿಯೂರು ಕಾಲೇಜು: ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಕಾರ್ಯಾಗಾರ
Share this Article
  • FB
  • TW
  • Linkdin
  • Email

ಸಾರಾಂಶ

ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಐಕ್ಯೂಎಸಿ, ಪ್ಲೇಸ್ಮೆಂಟ್ ಸೆಲ್ ಮತ್ತು ಯೂತ್ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ ಸ್ನಾತಕೋತ್ತರ ಅಧ್ಯಯನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಯುಜಿಸಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿ ಕಾರ್ಯಾಗಾರ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿಯ ಕಾರ್ಯಾಗಾರದ ಮೂಲಕ ವಿದ್ಯಾರ್ಥಿಗಳಲ್ಲಿ ಬುದ್ಧಿಮತ್ತೆಯನ್ನು ಹೆಚ್ಚಿಸುವುದು ಮಾತ್ರವಲ್ಲದೆ, ವಿವಿಧ ಪರೀಕ್ಷೆಗಳನ್ನ ಎದುರಿಸುವ ಮನೋಸ್ಥೈರ್ಯವನ್ನು ಇದು ವೃದ್ಧಿಸುತ್ತದೆ. ವಿಷಯದ ಆಳ ಮತ್ತು ವಿಸ್ತಾರತೆ ಹಾಗೂ ಪ್ರಾಮುಖ್ಯತೆಯನ್ನು ಅರಿಯಲು ಸಾಧ್ಯವಾಗುತ್ತದೆ. ಅಲ್ಲದೆ ಜ್ಞಾನವಿಕಾಸಕ್ಕೆ ಉತ್ತಮ ತಳಹದಿಯನ್ನು ರೂಪಿಸುವಲ್ಲಿ ಸಹಕಾರಿಯಾಗುತ್ತದೆ ಎಂದು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡಿನ ಪ್ರಾಂಶುಪಾಲ ಡಾ. ಶ್ರೀಧರ್ ಪ್ರಸಾದ್ ಹೇಳಿದರು.ಅವರು ಇಲ್ಲಿನ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಐಕ್ಯೂಎಸಿ, ಪ್ಲೇಸ್ಮೆಂಟ್ ಸೆಲ್ ಮತ್ತು ಯೂತ್ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ ಸ್ನಾತಕೋತ್ತರ ಅಧ್ಯಯನ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ರಾಜ್ಯಮಟ್ಟದ ಯುಜಿಸಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.ಎರಡು ದಿನ ನಡೆಯುವ ಈ ಕಾರ್ಯಾಗಾರದಲ್ಲಿ ಡಾ. ಅಜಯ್ ಅಂಚನ್ ಅವರು ಟೀಚಿಂಗ್ ಆಪ್ಟಿಟ್ಯೂಡ್ ಮತ್ತು ರಿಸರ್ಚ್ ಕುರಿತು, ಮನೋಹರ್ ಬಿ. ಅವರು ಮ್ಯಾಥಮೆಟಿಕಲ್ ರೀಸನಿಂಗ್ ಮತ್ತು ಡೇಟಾ ಇಂಟರ್ಪ್ರೆಟೇಶನ್ ಹಾಗೂ ಲಾಜಿಕಲ್ ರೀಸನಿಂಗ್ ಕುರಿತು, ಅಮೃತಾ, ಕಮ್ಯುನಿಕೇಶನ್ ಕುರಿತು, ಚಂದ್ರ ಖಾರ್ವಿ ಪೀಪಲ್ ಆ್ಯಂಡ್ ಎನ್ವಿರಾನ್ಮೆಂಟ್ ಕುರಿತು ಹಾಗೂ ಪ್ರಶಾಂತ್ ನೀಲಾವರ ಹೈಯರ್ ಎಜುಕೇಶನ್ ಸಿಸ್ಟಮ್ ಪಾಲಿಸಿಸ್ ಕುರಿತು ತರಬೇತಿ ನೀಡುವರು.ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವ್ಕರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶೈಕ್ಷಣಿಕ ಸಲಹೆಗಾರ ಡಾ. ಶ್ರೀಧರ್ ಭಟ್, ಐಕ್ಯೂಎಸಿ ಸಂಚಾಲಕ ಡಾ. ಮೇವಿ ಮಿರಾಂದ, ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಡಾ. ರಘು ನಾಯ್ಕ, ಪ್ಲೇಸ್ಮೆಂಟ್ ಆಫೀಸರ್ ದಿನೇಶ್ ಎಂ. ಉಪಸ್ಥಿತರಿದ್ದರು. ಪ್ರಶಾಂತ ಎನ್. ಕಾರ್ಯಕ್ರಮ ನಿರ್ವಹಿಸಿದರು. ಎರಡು ದಿನಗಳ ಕಾರ್ಯಾಗಾರದಲ್ಲಿ ರಾಜ್ಯದ ವಿವಿಧ ಸ್ನಾತಕೋತ್ತರ ವಿಭಾಗದ ೧೫೦ ಅಧಿಕ ವಿದ್ಯಾರ್ಥಿಗಳು ಹಾಜರಿದ್ದರು.