ಸಾರಾಂಶ
ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಶಾ ಮುಕ್ತ ಅಭಿಯಾನ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಇಲ್ಲಿನ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಸೋಮವಾರ ಸಮಾಜಕಾರ್ಯ ವೇದಿಕೆ, ರಾಷ್ಟ್ರೀಯ ಸೇವಾ ಯೋಜನೆ, ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಮತ್ತು ಜಿಲ್ಲಾ ಅಂಗ ವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆಗಳ ಆಶ್ರಯದಲ್ಲಿ ನಶಾ ಮುಕ್ತ ಅಭಿಯಾನ ಕಾರ್ಯಕ್ರಮ ನಡೆಯಿತು.ಸಂಪನ್ಮೂಲ ವ್ಯಕ್ತಿಗಳಾಗಿ ದೊಡ್ಡಣಗುಡ್ಡೆಯ ಡಾ. ಎ.ವಿ. ಬಾಳಿಗಾ ಆಸ್ಪತ್ರೆಯ ಮನೋ ವೈದ್ಯ ಡಾ. ವಿರೂಪಾಕ್ಷ ದೇವರಮನೆ ಆಗಮಿಸಿದ್ದು, ನಶಾ ಮುಕ್ತ ಭಾರತ ಅಭಿಯಾನ ಮತ್ತು ಪ್ರಸ್ತುತ ಉಡುಪಿ ಜಿಲ್ಲೆಯನ್ನು ನಶಾ ಮುಕ್ತ ಮಾಡುವ ಬಗ್ಗೆ ವಿಚಾರಗಳನ್ನು ಪ್ರಸ್ತಾಪಿಸಿದರು.ಕಾಲೇಜಿನ ಪ್ರಾಂಶುಪಾಲ ಪ್ರೊ. ಸುರೇಶ್ ರೈ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ, ನಶಾ ಮುಕ್ತ ಭಾರತ ಅಭಿಯಾನದ ರಾಜ್ಯ ಸಂಯೋಜನಾಧಿಕಾರಿ ಅಕ್ಷರ ಯಾದವ್, ಎ.ಕೆ. ಪ್ರೋಜೆಕ್ಟ್ ಸಂಯೋಜನಾಧಿಕಾರಿ ಶಿವಾಜಿ ಹಾಗೂ ಸಮಾಜಕಾರ್ಯ ವಿಭಾಗ ಮುಖ್ಯಸ್ಥೆ (ಪದವಿ) ಮಮತಾ ಮತ್ತು ಸಮಾಜಕಾರ್ಯ ವಿಭಾಗ ಮುಖ್ಯಸ್ಥರು (ಸ್ನಾತಕೋತ್ತರ) ಸುಷ್ಮಾ ಟಿ. ಉಪಸ್ಥಿತರಿದ್ದರು.ತೃತೀಯ ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿ ಲವಿಟಾ ಮಥಾಯಿಸ್ ಸ್ವಾಗತಿಸಿದರು. ದ್ವಿತೀಯ ಬಿ.ಎಸ್.ಡಬ್ಲ್ಯೂ. ವಿದ್ಯಾರ್ಥಿ ಓಶಿಯನ್ ಬಾರಾ ವಂದಿಸಿದರು. ದ್ವಿತೀಯ ಬಿ.ಎಸ್.ಡಬ್ಲ್ಯೂ. ವಿದ್ಯಾರ್ಥಿನಿ ರಿಯೋನಾ ಕಾರ್ಯಕ್ರಮ ನಿರೂಪಿಸಿದರು.