ಹೊಸ ಜ್ಞಾನ ತಂತ್ರಾಂಶದ ಅಗತ್ಯ ಬಹಳಷ್ಟಿದೆ: ಡಾ. ಜಯದೇವ್

| Published : May 14 2024, 01:05 AM IST

ಸಾರಾಂಶ

ಚಿಕ್ಕಮಗಳೂರು, ಪ್ರಸ್ತುತ ವಿದ್ಯಾಮಾನದಲ್ಲಿ ತಂತ್ರಜ್ಞಾನ ಅತಿ ಹೆಚ್ಚು ವೇಗವಾಗಿ ಬೆಳವಣಿಗೆ ಹೊಂದುತ್ತಿದೆ. ಹೊಸ ಜ್ಞಾನ ತಂತ್ರಾಂಶದ ಅಗತ್ಯ ಬಹಳಷ್ಟಿದ್ದು, ಜ್ಞಾನದ ಯುಗದಲ್ಲಿ ಪ್ರತಿಯೊಬ್ಬರು ತಂತ್ರಜ್ಞಾನದ ಬಗ್ಗೆ ತಿಳಿದುಕೊಳ್ಳಬೇಕು ಎಂದು ಎಐಟಿ ಕಾಲೇಜು ಪ್ರಾಂಶುಪಾಲ ಡಾ.ಸಿ.ಟಿ.ಜಯದೇವ್ ಹೇಳಿದರು.

ಎಐಟಿ ಕಾಲೇಜಿನಲ್ಲಿ ವಿದ್ಯಾರ್ಥಿ ಅಭಿವೃದ್ಧಿ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಪ್ರಸ್ತುತ ವಿದ್ಯಾಮಾನದಲ್ಲಿ ತಂತ್ರಜ್ಞಾನ ಅತಿ ಹೆಚ್ಚು ವೇಗವಾಗಿ ಬೆಳವಣಿಗೆ ಹೊಂದುತ್ತಿದೆ. ಹೊಸ ಜ್ಞಾನ ತಂತ್ರಾಂಶದ ಅಗತ್ಯ ಬಹಳಷ್ಟಿದ್ದು, ಜ್ಞಾನದ ಯುಗದಲ್ಲಿ ಪ್ರತಿಯೊಬ್ಬರು ತಂತ್ರಜ್ಞಾನದ ಬಗ್ಗೆ ತಿಳಿದುಕೊಳ್ಳಬೇಕು ಎಂದು ಎಐಟಿ ಕಾಲೇಜು ಪ್ರಾಂಶುಪಾಲ ಡಾ.ಸಿ.ಟಿ.ಜಯದೇವ್ ಹೇಳಿದರು.ನಗರದ ಆದಿಚುಂಚನಗಿರಿ ತಾಂತ್ರಿಕ ಮಹಾ ವಿದ್ಯಾಲಯದ ಕೃತಕ ಬುದ್ಧಿಮತ್ತೆ ಮತ್ತು ಯಂತ್ರಕಲಿಕೆ ಶಾಖೆಯಿಂದ ಸೋಮವಾರ ಆಯೋಜಿಸಿದ್ದ ವಿದ್ಯಾರ್ಥಿ ಅಭಿವೃದ್ಧಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಕಲಿಕೆ ಅವಧಿಯಲ್ಲಿ ಇವುಗಳ ಬಗ್ಗೆ ಜ್ಞಾನ ಹೊಂದುವುದು ಬಹಳ ಮುಖ್ಯ. ಇಲ್ಲದಿದ್ದರೆ ಸ್ಪರ್ಧಾತ್ಮಕ ಯುಗದಲ್ಲಿ ಅಭಿವೃದ್ಧಿ ಹೊಂದುವುದು ಕಷ್ಟಕರವಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಕೃತಕ ಬುದ್ಧಿಮತ್ತೆ ಪಾತ್ರ ಅನಿವಾರ್ಯವಾಗಿದೆ ಎಂದರು.

ಕಲಿಯುವ ವಿಷಯದಲ್ಲಿ ವಿಶೇಷ ಜ್ಞಾನ ಹೊಂದುವುದು ಹಾಗೂ ಹೊಸತನ್ನು ಮಾಡುವ ಜ್ಞಾನವನ್ನು ಪ್ರತಿಯೊಬ್ಬ ವಿದ್ಯಾರ್ಥಿ ತಿಳಿದುಕೊಳ್ಳಬೇಕು. ಕಲಿಕೆ ನಿಮ್ಮೊಂದಿಗೆ ದೇಶದ ಅಭಿವೃದ್ಧಿಗೂ ಸಹಕಾರಿ ಆಗುತ್ತವೆ ಆದ್ದರಿಂದ ವಿದ್ಯಾರ್ಥಿಗಳು ಇಂತಹ ವಿಷಯಗಳಲ್ಲಿ ವಿಶೇಷ ಆಸಕ್ತಿ ಹಾಗೂ ಜ್ಞಾನ ಹೊಂದಿ ಭವಿಷ್ಯದ ಬೆಳವಣಿಗೆಯತ್ತ ಗಮನ ಹರಿಸಬೇಕು ಎಂದು ತಿಳಿಸಿದರು.ಪ್ರಾಧ್ಯಾಪಕ ಎಂ.ಎಸ್.ಧೃವ ವಿಶೇಷ ಉಪನ್ಯಾಸ ನೀಡಿ, ಕೃತಕ ಬುದ್ಧಿ ಮತ್ತು ಯಂತ್ರ ಕಲಿಕೆಯಲ್ಲಿ ವಿದ್ಯಾರ್ಥಿಗಳು ತಂತ್ರಾಂಶದಲ್ಲಿ ಅನೇಕ ವಿಷಯ ತಿಳಿದುಕೊಳ್ಳಬೇಕಾಗುತ್ತದೆ. ಈ ವಿಷಯಗಳ ಬಗ್ಗೆ ಅಧ್ಯಯನ ಮಾಡುವ ವಿದ್ಯಾರ್ಥಿ ಗಳಿಗೆ ಪ್ರೋಗ್ರಾಮಿಂಗ್ ಭಾಷೆಗಳು ಬಹಳ ಮುಖ್ಯವಾಗುತ್ತವೆ ಎಂದರು.ಪೈಥಾನ್, ಜಾವಾ ಅಂತಹ ಹಲವಾರು ತಂತ್ರಾಂಶದ ಭಾಷೆಗಳು ಕಲಿಯುವುದು ಅಗತ್ಯ. ಈ ತಂತ್ರಜ್ಞಾನ ಯುಗದಲ್ಲಿ ಕಲಿಕೆಗೆ ಮಿತಿ ಇಲ್ಲ, ವಿಶೇಷವಾಗಿ ಕಲಿತು ಹೊಸತನ ರೂಪಿಸುವ ಮೂಲಕ ಎಲ್ಲರಿಗಿಂತ ವಿಭಿನ್ನವಾಗಿ ಕಲಿಯುವುದನ್ನು ಸಮಾಜದಲ್ಲಿ ಗುರುತಿಸಿಕೊಳ್ಳಬಹುದು ಎಂದು ಹೇಳಿದರು.

ಎಐಎಂಲ್ ಶಾಖೆ ಮುಖ್ಯಸ್ಥೆ ಡಾ. ಎಂ.ಆರ್.ಸುನೀತಾ ಮಾತನಾಡಿ, ವಿಶ್ವವಿದ್ಯಾನಿಲಯದಲ್ಲಿ ಅಧ್ಯಯನ ಮಾಡಲು 50 ಕ್ಕೂ ಹೆಚ್ಚಿನ ವಿಷಯಗಳಿವೆ. ಪ್ರತಿಯೊಬ್ಬರು ಒಂದೊಂದು ವಿಷಯಗಳಲ್ಲಿ ತಮ್ಮದೇ ಆದ ಜ್ಞಾನ ಹೊಂದಿರುತ್ತಾರೆ. ಆಸಕ್ತಿ ಯಿರುವ ವಿಷಯಗಳ ಮೇಲೆ ಅಧ್ಯಯನ ನಡೆಸುವುದರೊಂದಿಗೆ ಈ ಯುಗಕ್ಕೆ ಅಗತ್ಯವಿರುವ ಪಠ್ಯೇತರ ವಿಷಯಗಳ ಬಗ್ಗೆ ಜ್ಞಾನ ಹೊಂದಬೇಕು ಎಂದರು.ಈ ಕಾರಣದಿಂದ ಅನೇಕ ಚಟುವಟಿಕೆಗಳನ್ನು ಆಯೋಜಿಸಿ ವಿದ್ಯಾರ್ಥಿಗಳ ಜ್ಞಾನ ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಿದ್ದು ಪ್ರತಿಯೊಬ್ಬರು ಕಾರ್ಯಕ್ರಮದ ಉದ್ದೇಶ ಹಾಗೂ ಅದರ ಮಹತ್ವವನ್ನು ತಮ್ಮ ಜ್ಞಾನವನ್ನು ಇನ್ನಷ್ಟು ವೃದ್ಧಿಸಿಕೊಳ್ಳಿ ಎಂದರು.ಈ ಸಂದರ್ಭದಲ್ಲಿ ಡಾಟಾ ಸೈನ್ಸ್ ಶಾಖೆ ಮುಖ್ಯಸ್ಥ ಡಾ. ಎಂ.ಜೆ.ಆದರ್ಶ್ ಹಾಗೂ ಬೋಧಕ, ಬೋಧಕೇತರ, ವಿದ್ಯಾರ್ಥಿಗಳು ಹಾಜರಿದ್ದರು. 13 ಕೆಸಿಕೆಎಂ 2ಚಿಕ್ಕಮಗಳೂರಿನ ಎಐಟಿ ಕಾಲೇಜಿನಲ್ಲಿ ಸೋಮವಾರ ನಡೆದ ವಿದ್ಯಾರ್ಥಿ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಎಐಎಂಲ್ ಶಾಖೆ ಮುಖ್ಯಸ್ಥೆ ಡಾ. ಎಂ.ಆರ್.ಸುನೀತಾ ಮಾತನಾಡಿದರು. ಪ್ರಾಂಶುಪಾಲ ಡಾ. ಸಿ.ಟಿ. ಜಯದೇವ್‌, ಡಾ. ಆದರ್ಶ್‌ ಇದ್ದರು.