ಸಾರಾಂಶ
ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ರೂಪುಗೊಂಡಂತಹ ಕುಡಿಯುವ ನೀರಿನ ಕಾರ್ಯಾಚರಣೆ ಮತ್ತು ನಿರ್ವಹಣೆ ನೀತಿಯನ್ನು ಕಡ್ಡಾಯವಾಗಿ ಗ್ರಾಮ ಪಂಚಾಯಿತಿಗಳಲ್ಲಿ ಅಳವಡಿಸಿಕೊಂಡು ಅದರಂತೆ ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ ಹೇಳಿದರು.ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ (ಗ್ರಾಮ್ಸ್) ಸಹಯೋಗದಲ್ಲಿ ಜಲಜೀವನ್ ಮಿಷನ್, ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆ ಹಾಗೂ ಕರ್ನಾಟಕ ಸುಸ್ಥಿರ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆ ಕುರಿತು ಹೊಳಲ್ಕೆರೆ ಮತ್ತು ಚಿತ್ರದುರ್ಗ ತಾಲೂಕುಗಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗಣಕಯಂತ್ರ ನಿರ್ವಾಹಕರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಂಜಿನಿಯರ್ಸ್ ಗಳಿಗೆ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಉತ್ತಮ ನೀರಿನ ಜಲಮೂಲಗಳು ಲಭ್ಯವಿದ್ದಲ್ಲಿ, ಅಂತಹ ಗ್ರಾಮಗಳನ್ನು 24 x 7 ನೀರು ಪೂರೈಸಲು ಅಥವಾ ಮಾದರಿ ಗ್ರಾಮಗಳಾಗಿ ಘೋಷಿಸಲು ಕ್ರಮವಹಿಸಬೇಕು ಎಂದರು.ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಬಸವನಗೌಡ ಪಾಟೇಲ್ ಮಾತನಾಡಿ, ಇಲಾಖೆಯಿಂದ ಈಗಾಗಲೇ 857 ಕಾರ್ಯಾತ್ಮಕ ನಳ ಸಂಪರ್ಕ ಕಾಮಗಾರಿಗಳು ಪೂರ್ಣಗೊಂಡಿದ್ದು, ಅದರಲ್ಲಿ 619 ಗ್ರಾಮಗಳನ್ನು ಗ್ರಾಮ ಪಂಚಾಯಿತಿಗೆ ಹಸ್ತಾಂತರ ಮಾಡಿ ಹರ್ ಘರ್ ಜಲ್ ಘೋಷಣೆ ಮಾಡಲಾಗಿದೆ. ಉಳಿದ ಕಾಮಗಾರಿಗಳನ್ನು ಪೂರ್ಣಗೊಳಿಸಿದ ನಂತರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ನೀರು ಮತ್ತು ನೈರ್ಮಲ್ಯ ಸಮಿತಿಯ ಸದಸ್ಯರು, ಇಂಜಿನಿಯರ್‍ಗಳು ಗ್ರಾಮಕ್ಕೆ ಭೇಟಿ ನೀಡಿ ಎಲ್ಲಾ ಮನಗಳಗೆ ನಳ ಸಂಪರ್ಕ ಕಲ್ಪಿಸಿರುವ ಬಗ್ಗೆ ಹಾಗೂ ರಸ್ತೆ ಪುನರ್ ಸ್ಥಾಪನೆ ನೀರು ಸರಬರಾಜು ಆಗುತ್ತಿರುವ ಬಗ್ಗೆ ಖಚಿತಪಡಿಸಿಕೊಂಡು ನಂತರ ಗ್ರಾಮ ಪಂಚಾಯಿತಿಗಳಗೆ ಹಸ್ತಾಂತರ ಮಾಡಿಕೊಂಡು ಹರ್ ಘರ್ ಜಲ್ ಘೋಷಣೆ ಮಾಡಲು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಉಪ ವಿಭಾಗದ ಹೊಳಲ್ಕೆರೆ ಮತ್ತು ಚಿತ್ರದುರ್ಗ ತಾಲೂಕುಗಳ ಸಹಾಯಕ ಕಾರ್ಯಪಾಲಕ ಇಂಜಿಯರ್ ಗಳಾದ ವಾಸುದೇವ, ಶಿವಮೂರ್ತಿ, ಜಲ ಜೀವನ್ ಮಿಷನ್ ಜಿಲ್ಲಾ ಯೋಜನಾ ವ್ಯವಸ್ಥಾಪಕ ಮಂಜುನಾಥ ಎಸ್ ನಾಡರ್, ಜಿಲ್ಲಾ ಐಇಸಿ ಸಮಾಲೋಚಕರಾದ ಬಿ.ಸಿ.ನಾಗರಾಜು, ಕೆಎಸ್‍ಆರ್ ಡ ಬ್ಲೂಎಸ್‍ಪಿ ಸಮಾಲೋಚಕರಾದ ಕಿರಣ್ ಕುಮಾರ್, ಚಂದ್ರಕಾಂತ್, ಪ್ರವೀಣ್, ಯಲಪ್ಪ, ಗೀತಾ ಲಕ್ಷ್ಮಿ, ಅನುಷ್ಠಾನ ಬೆಂಬಲ ಸಂಸ್ಥೆ (ಗ್ರಾಮ್ಸ್) ತಂಡದ ನಾಯಕರಾದ ನಾಗರಾಜ್, ಪ್ರತಾಪ್ ಇತರರು ಉಪಸ್ಥಿತರಿದ್ದರು.