ಇಲ್ಲಿನ ಗ್ರಾಮಾಭಿವೃದ್ಧಿ ಮತ್ತು ಸ್ವಉದ್ಯೋಗ ತರಬೇತಿ (ರುಡ್ಸೆಟ್) ಸಂಸ್ಥೆ ಹಾಗೂ ಮರವಂತೆ ಮೀನುಗಾರರ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಮೀನು ಸಾಕಾಣಿಕೆ ತರಬೇತಿಯನ್ನು ಕೆನರಾ ಬ್ಯಾಂಕಿನ ಮರವಂತೆ ಶಾಖೆಯ ವ್ಯವಸ್ಥಾಪಕ ಸರೀಕ್ ರೇವನ್ ಉದ್ಘಾಟಿಸಿದರು.
ಕುಂದಾಪುರ: ಇಲ್ಲಿನ ಗ್ರಾಮಾಭಿವೃದ್ಧಿ ಮತ್ತು ಸ್ವಉದ್ಯೋಗ ತರಬೇತಿ (ರುಡ್ಸೆಟ್) ಸಂಸ್ಥೆ ಹಾಗೂ ಮರವಂತೆ ಮೀನುಗಾರರ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಮೀನು ಸಾಕಾಣಿಕೆ ತರಬೇತಿಯನ್ನು ಕೆನರಾ ಬ್ಯಾಂಕಿನ ಮರವಂತೆ ಶಾಖೆಯ ವ್ಯವಸ್ಥಾಪಕ ಸರೀಕ್ ರೇವನ್ ಉದ್ಘಾಟಿಸಿದರು.ನಂತರ, ಮೀನುಗಾರಿಕೆ ಹಾಗೂ ಮೀನು ಸಾಕಾಣಿಕೆ ಕೃಷಿ - ಉದ್ಯಮಕ್ಕೆ ಉತ್ತಮ ಬೇಡಿಕೆಯಿದೆ. ಕಡಿಮೆ ಬಂಡವಾಳದಲ್ಲಿ ಉತ್ತಮ ಆದಾಯ ಗಳಿಸಲು ಈ ಉದ್ಯಮದಲ್ಲಿ ವಿಫುಲ ಅವಕಾಶಗಳಿವೆ. ಶಿಬಿರಾರ್ಥಿಗಳು ತರಬೇತಿಯಲ್ಲಿ ಪಡೆದ ಜ್ಞಾನ ಮತ್ತು ಕೌಶಲ್ಯಗಳನ್ನು ಉದ್ಯಮವಾಗಿ ರೂಪಿಸಿಕೊಂಡು ಸ್ವಉದ್ಯೋಗಗಳಾಗಬೇಕು ಎಂದು ಕರೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಹಕಾರ ಸಂಘದ ಅಧ್ಯಕ್ಷ ಪ್ರವೀಣ್, ತರಬೇತಿಯಲ್ಲಿ ದೊರೆಯುವ ಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಂಡು ಮುಂದಿನ ದಿನಗಳಲ್ಲಿ ಯಶಸ್ವಿ ಉದ್ಯಮಿಗಳಾಗಿ ಬೆಳೆಯುವಂತೆ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.ವಿಶೇಷ ಅತಿಥಿಯಾಗಿದ್ದ ಮರವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್, ಮಹಿಳೆಯರು ಕೂಡ ಈ ತರಬೇತಿ ಪಡೆದು ಸ್ವಉದ್ಯೋಗವನ್ನು ಕೈಗೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದರು.
ರುಡ್ಸೆಟ್ ನಿರ್ದೇಶಕ ಡಾ. ಬೊಮ್ಮಯ್ಯ , ಶಿಬಿರಾರ್ಥಿಗಳು ತರಬೇತಿಯ ನಂತರ ಸ್ವ ಉದ್ಯೋಗ ಪ್ರಾರಂಭಿಸಲು ಅಗತ್ಯವಿರುವ ಬ್ಯಾಂಕ್ ಸಾಲ ಸೌಲಭ್ಯಗಳ ಕುರಿತು ಮಾರ್ಗದರ್ಶನ ಹಾಗೂ ಸಹಕಾರ ನೀಡಲಾಗುವುದು ಎಂದರು.ಸಹಕಾರ ಸಂಘದ ಉಪಾಧ್ಯಕ್ಷ ರತ್ನಾಕರ್ ಉಪಸ್ಥಿತರಿದ್ದರು, ಸಂಸ್ಥೆಯ ಹಿರಿಯ ಉಪನ್ಯಾಸಕ ಸಂತೋಷ್ ಶೆಟ್ಟಿ ನಿರೂಪಿಸಿದರು. ಕಚೇರಿ ಸಹಾಯಕ ಶಾಂತಪ್ಪ ಸ್ವಾಗತಿಸಿದರು. ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗಂಗಾಧರ್ ವಂದಿಸಿದರು.