ಗಾಂಧೀಜಿ ವ್ಯಕ್ತಿತ್ವದಿಂದ ಕಲಿಯುವುದು ಬಹಳಷ್ಟಿದೆ: ಡಾ. ಪುಂಡಿಕಾಯಿ ಗಣಪಯ್ಯ ಭಟ್

| Published : Oct 03 2024, 01:29 AM IST

ಗಾಂಧೀಜಿ ವ್ಯಕ್ತಿತ್ವದಿಂದ ಕಲಿಯುವುದು ಬಹಳಷ್ಟಿದೆ: ಡಾ. ಪುಂಡಿಕಾಯಿ ಗಣಪಯ್ಯ ಭಟ್
Share this Article
  • FB
  • TW
  • Linkdin
  • Email

ಸಾರಾಂಶ

ಗಾಂಧಿ ಜಯಂತಿಯ ಅಂಗವಾಗಿ ಕಾಲೇಜಿನ ಗ್ರಂಥಾಲಯದಲ್ಲಿ ಗಾಂಧಿ ಸಾಹಿತ್ಯ ಕುರಿತಾದ ಪುಸ್ತಕ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ಗಾಂಧೀಜಿಯವರು ಹಲವಾರು ಕ್ಷೇತ್ರಗಳಲ್ಲಿ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಬಾಲ್ಯದಿಂದಲೂ ಸತ್ಯ, ನಿಷ್ಠೆ ಮತ್ತು ಪ್ರಾಮಾಣಿಕತೆಯನ್ನು ಪಾಲಿಸುವುದರ ಜೊತೆಗೆ, ಜೀವನದುದ್ದಕ್ಕೂ ಸರಳತೆಯಿಂದ ಜೀವನ ನಡೆಸಿದವರು. ಅವರ ವ್ಯಕ್ತಿತ್ವದಿಂದ ‌ನಾವು ಕಲಿಯುವುದು ಬಹಳಷ್ಟಿದೆ ಎಂದು ಶ್ರೀ ಧವಳಾ ಕಾಲೇಜಿನ ಇತಿಹಾಸ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ಪುಂಡಿಕಾಯಿ ಗಣಪಯ್ಯ ಭಟ್ ಹೇಳಿದರು.

ಅವರು ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜಿನಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಗಾಂಧೀಜಿಯವರ ಜೀವನ ಮತ್ತು ವ್ಯಕ್ತಿತ್ವದ ಕುರಿತು ಮಾತನಾಡಿದರು.

ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ರಮೇಶ್ ಭಟ್, ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಹಾಗೂ ಐಕ್ಯೂಎಸಿ ಸಂಚಾಲಕ ಪ್ರೊ. ಹರೀಶ್, ರೆಡ್‌ಕ್ರಾಸ್ ಅಧಿಕಾರಿಗಳಾದ ಶ್ರೀಗೌರಿ, ಎನ್‌ಎಸ್‌ಎಸ್ ಅಧಿಕಾರಿ ಶಾರದಾ, ರೇಂಜರ್ಸ್ ಅಧಿಕಾರಿ ಶ್ರದ್ಧಾ, ರೋವರ್ಸ್ ಅಧಿಕಾರಿ ಸಂದೀಪ್ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಮೊದಲಿಗೆ ನಡೆದ ಗಾಂಧಿ ಸ್ಮೃತಿ’ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರು ಗಾಂಧೀಜಿಯವರಿಗೆ ಪ್ರಿಯವಾದ ಭಜನೆಯ ಗೀತೆಗಳನ್ನು ಸುಶ್ರಾವ್ಯವಾಗಿ ಹಾಡಿದರು. ಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಲಾಯಿತು. ವಿದ್ಯಾರ್ಥಿಗಳಾದ ಸಂಜನಾ ಸ್ವಾಗತಿಸಿದರು. ರಕ್ಷಿತಾ ವಂದಿಸಿದರು. ಸಾಕ್ಷಿ ನಿರೂಪಿಸಿದರು.ಗಾಂಧಿ ಜಯಂತಿಯ ಅಂಗವಾಗಿ ಕಾಲೇಜಿನ ಗ್ರಂಥಾಲಯದಲ್ಲಿ ಗಾಂಧಿ ಸಾಹಿತ್ಯ ಕುರಿತಾದ ಪುಸ್ತಕ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.