ಸಾರಾಂಶ
ರಕ್ತದಾನ ಶಿಬಿರ
ಕನ್ನಡಪ್ರಭ ವಾರ್ತೆ ಆಲೂರುರಕ್ತಕ್ಕೆ ಯಾವುದೆ ಪರ್ಯಾಯ ವ್ಯವಸ್ಥೆ ಇಲ್ಲ. ರಕ್ತದಾನ ಮಾಡುವುದರಿಂದ ಹೃದಯಾಘಾತ, ಕ್ಯಾನ್ಸರ್ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡಬಹುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ನಿಸಾರ್ ಫಾತಿಮ ತಿಳಿಸಿದರು.
ಪಟ್ಟಣದ ತಾಲೂಕು ಆರೋಗ್ಯಧಿಕಾರಿಗಳ ಕಚೇರಿ, ಆಟೋ ಚಾಲಕರ ಸಂಘ ಮತ್ತು ಸಾರ್ವಜನಿಕ ಆಸ್ಪತ್ರೆ ಸಹಯೋಗದಲ್ಲಿ ಆರೋಗ್ಯ ಇಲಾಖೆ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಏರ್ಪಡಿಸಲಾಗಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.ರಕ್ತ ಕಣಗಳಲ್ಲಿ ಕಬ್ಬಿಣಾಂಶವನ್ನು ಕಡಿಮೆ ಮಾಡುವುದರಿಂದ ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯ ಬರುವ ಸಾಧ್ಯತೆ ಕಡಿಮೆ ಇರುತ್ತದೆ ಎಂದು ಸಂಶೋಧನೆ ತಿಳಿಸಿದೆ. ನಿಯಮಿತ ರಕ್ತದಾನವು ಹೃದಯ ರಕ್ತನಾಳದ ಆರೋಗ್ಯ ಅಪಾಯವನ್ನು ಸುಧಾರಿಸುತ್ತದೆ ಮತ್ತು ಕಡಿಮೆ ಮಾಡುತ್ತದೆ. ಉತ್ತಮ ರಕ್ತದ ಹರಿವನ್ನು ಉತ್ತೇಜಿಸುತ್ತದೆ. ರಕ್ತದ ಹರಿವು ಉತ್ತಮವಾದಾಗ, ಅದು ರಕ್ತ ಹೆಪ್ಪುಗಟ್ಟುವಕೆಯ ರಚನೆಯನ್ನು ತಡೆಯುತ್ತದೆ. ಇದು ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಹೇಳಿದರು.
೧೮ ರಂದ ೬೦ ವಯೋಮಿತಿಯೊಳಗಿನ ಪ್ರತಿ ಮೂರು ತಿಂಗಳಿಗೊಮ್ಮೆ ಪುರುಷರು ಮತ್ತು ನಾಲ್ಕು ತಿಂಗಳಿಗೊಮ್ಮೆ ಮಹಿಳೆಯರು ರಕ್ತದಾನ ಮಾಡಬಹುದು. ರಕ್ತದಾನ ಮಾಡುವ ಸಂದರ್ಭದಲ್ಲಿ ಉಚಿತವಾಗಿ ರಕ್ತದಾನ ಕೇಂದ್ರದಲ್ಲಿ ವೈದ್ಯರು ಹೃದಯಬಡಿತ, ರಕ್ತದೊತ್ತಡ, ಕೊಲೆಸ್ಟ್ರಾಲ್, ಹಿಮೋಗ್ಲೋಬಿನ್ ಮಟ್ಟವನ್ನು ಪರೀಕ್ಷೆ ಮಾಡುತ್ತಾರೆ. ರಕ್ತದಾನ ಒಬ್ಬರ ಜೀವ ಉಳಿಸುತ್ತದೆ. ರಕ್ತಕ್ಕೆ ಯಾವುದೇ ಪರ್ಯಾಯವಿಲ್ಲ. ಕೇವಲ ಒಂದು ದಾನವು ನಾಲ್ವರ ಜೀವವನ್ನು ಉಳಿಸುತ್ತದೆ. ರಕ್ತದಾನ ಮಾಡಿದಾಗ ದೇಹ ಹೊಸ ರಕ್ತ ಪಡೆಯುವ ಅವಕಾಶ ಸಿಗುತ್ತದೆ ಮತ್ತು ರಕ್ತದ ಕ್ಯಾನ್ಸರ್ ಅವಕಾಶ ಕಡಿಮೆಯಾಗುತ್ತದೆ. ರಕ್ತದಾನ ಮಾಡುವುದರಿಂದ ಯಾವುದೇ ನಷ್ಟವಾಗುವುದಿಲ್ಲ ಎಂದು ಮಾಹಿತಿ ನೀಡಿದರು.ಶಿಬಿರದಲ್ಲಿ ೨೫ ವ್ಯಕ್ತಿಗಳು ರಕ್ತದಾನ ಮಾಡಿದರು. ಹಾಸನ ರಕ್ತನಿದಿ ಕೇಂದ್ರ ವೈದ್ಯೆ ಡಾ.ನಾಗಲಕ್ಷ್ಮಿ, ಹಿರಿಯ ಪ್ರಯೋಗ ಶಾಖಾ ತಂತ್ರಜ್ಞ ಅಶ್ವಥ್, ಕೆ. ಎನ್. ಸುಪ್ರಿಯ, ಥ್ಲೂಲ್ಲೂಕು ಆರೋಗ್ಯ ಇಲಾಖೆ ಕಚೇರಿ ಸಿಬ್ಬಂದಿ ಮೋಹನ್, ಶ್ವೇತಾ, ಪಲ್ಲವಿ ಭಾಗವಹಿಸಿದ್ದರು.