ಸಾರಾಂಶ
ದೊಡ್ಡಬಳ್ಳಾಪುರ: ಕನ್ನಡಿಗರಿಗೆ ಉದ್ಯೋಗ ಮೀಸಲಾತಿ, ಕನ್ನಡಿಗರ ಅಸ್ತಿತ್ವ, ಶಿಕ್ಷಣ, ಕನ್ನಡ ಶಾಲೆಗಳನ್ನು ಉಳಿಸುವ ವಿಷಯವಾಗಿ ಬೃಹತ್ ಹೋರಾಟವನ್ನು ನಡೆಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ. ಯುವಜನತೆ ದುಶ್ಚಟಗಳಿಂದ ದೂರ ಇದ್ದು, ಸಾಮಾಜಿಕ ಕಾಳಜಿಯನ್ನು ಹೊಂದಬೇಕು ಎಂದು ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಮಂಜುನಾಥ್ ದೇವಾ ಹೇಳಿದರು.
ದೊಡ್ಡಬಳ್ಳಾಪುರ: ಕನ್ನಡಿಗರಿಗೆ ಉದ್ಯೋಗ ಮೀಸಲಾತಿ, ಕನ್ನಡಿಗರ ಅಸ್ತಿತ್ವ, ಶಿಕ್ಷಣ, ಕನ್ನಡ ಶಾಲೆಗಳನ್ನು ಉಳಿಸುವ ವಿಷಯವಾಗಿ ಬೃಹತ್ ಹೋರಾಟವನ್ನು ನಡೆಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ. ಯುವಜನತೆ ದುಶ್ಚಟಗಳಿಂದ ದೂರ ಇದ್ದು, ಸಾಮಾಜಿಕ ಕಾಳಜಿಯನ್ನು ಹೊಂದಬೇಕು ಎಂದು ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಮಂಜುನಾಥ್ ದೇವಾ ಹೇಳಿದರು.
ದೊಡ್ಡಬಳ್ಳಾಪುರ ತಾಲೂಕು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ವತಿಯಿಂದ ಕನ್ನಡ ಹಬ್ಬ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಂಘಟನೆ ಸತತ 31 ವರ್ಷಗಳಿಂದ ಕನ್ನಡ ನಾಡು-ನುಡಿ, ಜಲ, ಭಾಷೆ ವಿಷಯವಾಗಿ, ಕನ್ನಡಿಗರ ವಿಷಯವಾಗಿ, ರೈತಪರ, ಪ್ರಗತಿಪರ, ಸಾಮಾಜಿಕ ಪರ ಮಹಿಳೆಯರ ಪರ ಹೋರಾಟಗಳನ್ನು ರೂಪಿಸುತ್ತಾ ರಚನಾತ್ಮಕವಾಗಿ ತೊಡಗಿಕೊಂಡಿದೆ. ಕನ್ನಡಿಗರಿಗೆ ಖಾಸಗಿ ಉದ್ಯೋಗ ವಲಯದಲ್ಲಿ ಮೀಸಲಾತಿ, ಕನ್ನಡಿಗರ ಸಾರ್ವಭೌಮತ್ವದ ವಿಷಯವಾಗಿ ಹೋರಾಟ ನಿರಂತರವಾಗಿ ನಡೆಸಲಾಗಿದೆ ಎಂದರು.ಕೇಂದ್ರ ರೇಷ್ಮೆ ಮಂಡಳಿ ಮಾಜಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ ಮಾತನಾಡಿ, ಕನ್ನಡ ಭಾಷೆಯ ಅಸ್ಮಿತೆಯನ್ನು ಉಳಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು. ಕನ್ನಡ ನಾಡಿನಲ್ಲಿ ಬದುಕು ಕಟ್ಟಿಕೊಂಡಿರುವ ಎಲ್ಲರೂ ಸ್ಥಳೀಯ ಭಾಷೆಯನ್ನು ಕಲಿತು ವ್ಯವಹರಿಸುವುದು ಅಗತ್ಯ ಎಂದು ತಿಳಿಸಿದರು.
ಜೆಡಿಎಸ್ ಮುಖಂಡ ಹರೀಶ್ ಗೌಡ ಮಾತನಾಡಿ, .ದೊಡ್ಡಬಳ್ಳಾಪುರ ಸೇರಿದಂತೆ ಬೆಂಗಳೂರು ಸುತ್ತಮುತ್ತಲ ಪ್ರದೇಶಗಳಲ್ಲಿ ವಲಸಿಗರ ಸಮಸ್ಯೆ ಅತಿಯಾಗಿ ಕಾಡುತ್ತಿದೆ. ಕೆಲವನ್ನು ಅರಸಿ ಇಲ್ಲಿಗೆ ಬರುತ್ತಿರುವ ಪರಭಾಷಿಕರು ಇಲ್ಲಿನ ಸ್ಥಳೀಯ ಭಾವನೆಗಳನ್ನು ಗೌರವಿಸುವ ಮೂಲಕ ಕನ್ನಡ ಕಲಿತು ವ್ಯವಹರಿಸುವ ವಾತಾವರಣ ನಿರ್ಮಾಣವಾಗಬೇಕು ಎಂದರು.ಮಾಜಿ ಪ್ರಧಾನಿ ಡಾ.ಮನಮೋಹನ್‌ಸಿಂಗ್ ಅವರಿಗೆ ಶ್ರದ್ದಾಂಜಲಿ ಸಲ್ಲಿಸಿ ಸಂತಾಪ ಅರ್ಪಿಸಲಾಯಿತು.
ನಗರಸಭೆ ಮಾಜಿ ಸದಸ್ಯ ಎನ್.ಕೆ.ರಮೇಶ್, ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರಾದ ಟಿಪ್ಪು ವರ್ಧನ್, ಕರ್ನಾಟಕ ನೇಕಾರರ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಎಚ್ಎ.ಸ್ ಕುಮಾರಸ್ವಾಮಿ, ಕರ್ನಾಟಕ ರಾಜ್ಯ ದೇವಾಂಗ ಸಂಘದ ಮಹಿಳಾ ಘಟಕದ ಎಂ.ಕೆ.ವತ್ಸಲ, ಕನ್ನಡ ಜಾಗೃತಿ ವೇದಿಕೆಯ ಮಹಿಳಾ ರಾಜ್ಯ ಕಾರ್ಯದರ್ಶಿ ಕವಿತಾ ಪೇಟೆಮಠ, ಪ್ರಜಾ ವಿಮೋಚನಾ ಚಳುವಳಿಯ ಪ್ರಧಾನ ಕಾರ್ಯದರ್ಶಿ ಚೆನ್ನಿಗರಾಯಪ್ಪ, ಹಿರಿಯ ಮುಖಂಡ ಚನ್ನಬಸವರಾಧ್ಯ, ಡಾ. ಕುಮಾರ್, ಕನ್ನಡ ಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ನಾಗರಾಜ್, ಅಗ್ನಿ ವೆಂಕಟೇಶ್, ತಾಲೂಕು ಅಧ್ಯಕ್ಷ ಶಶಿಧರ್ ಸಿ, ಕಸಾಪ ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹದೇವ್, ಕಸಬಾ ಹೋಬಳಿ ಕಾರ್ಯದರ್ಶಿ ಸುರೇಶ್, ಕಜಾವೇ ಕಾರ್ಮಿಕ ಘಟಕದ ಅಧ್ಯಕ್ಷ ಗುರುಪ್ರಸಾದ್, ಸುಮಾಲಿ ರಾಮಾಚಾರಿ, ಕೃಷ್ಣವೇಣಿ, ಮುನಿರತ್ನಮ್ಮ, ಗೌರಮ್ಮ ಪಾಲ್ಗೊಂಡಿದ್ದರು.31ಕೆಡಿಬಿಪಿ2-
ದೊಡ್ಡಬಳ್ಳಾಪುರದಲ್ಲಿ ಕನ್ನಡ ಜಾಗೃತಿ ವೇದಿಕೆ ನೇತೃತ್ವದಲ್ಲಿ ಕನ್ನಡ ಹಬ್ಬ ಸಂಭ್ರಮದಿಂದ ನಡೆಯಿತು.