ರಸ್ತೆಗಳ ಅಭಿವೃದ್ಧಿ ಅನುದಾನದಲ್ಲಿ ತಾರತಮ್ಯ ಮಾಡೋದಿಲ್ಲ

| Published : Oct 04 2024, 01:04 AM IST

ಸಾರಾಂಶ

ನಮ್ಮೆಲ್ಲರ ಸ್ವಭಾವ, ಸಂಸ್ಕಾರಗಳಲ್ಲಿ ಸ್ವಚ್ಛತೆಯೇ ಧ್ಯೇಯವಾದಾಗ ಮಾತ್ರ ಮಹಾತ್ಮಾ ಗಾಂಧೀಜಿ ಕಂಡ ಕನಸು ನನಸಾಗುತ್ತದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಜಗಳೂರಲ್ಲಿ ಹೇಳಿದ್ದಾರೆ.

- ಸ್ವಚ್ಛತೆಯೇ ಸೇವಾ ಕಾರ್ಯಕ್ರಮ ಸಮಾರೋಪದಲ್ಲಿ ಶಾಸಕ ಬಿ.ದೇವೇಂದ್ರಪ್ಪ - - - ಕನ್ನಡಪ್ರಭ ವಾರ್ತೆ ಜಗಳೂರು

ನಮ್ಮೆಲ್ಲರ ಸ್ವಭಾವ, ಸಂಸ್ಕಾರಗಳಲ್ಲಿ ಸ್ವಚ್ಛತೆಯೇ ಧ್ಯೇಯವಾದಾಗ ಮಾತ್ರ ಮಹಾತ್ಮಾ ಗಾಂಧೀಜಿ ಕಂಡ ಕನಸು ನನಸಾಗುತ್ತದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು.

ತಾಲೂಕಿನ ದೇವಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡದಗುಡ್ಡ ಗ್ರಾಮದಲ್ಲಿ ವೀರಭದ್ರೇಶ್ವರ ಸ್ವಾಮಿ ಸನ್ನಿಧಾನದಲ್ಲಿ ಬುಧವಾರ ಸ್ವಚ್ಛತೆಯೇ ಸೇವಾ ಕಾರ್ಯಕ್ರಮ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಲಕ್ಷಾಂತರ ಭಕ್ತರು ಬರುವ ಕೊಡದಗುಡ್ಡದ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನ ಮತ್ತು ಗ್ರಾಮದ ರಸ್ತೆಗಳ ಅಭಿವೃದ್ಧಿಗೆ ತಾರತಮ್ಯವಿಲ್ಲದೇ ಅನುದಾನ ನೀಡಲು ಹೆಚ್ಚಿನ ಆದ್ಯತೆ ನೀಡುತ್ತೇನೆ ಎಂದರು.

ಇತ್ತೀಚಿನ ದಿನಗಳಲ್ಲಿ ಬಾಲ್ಯವಿವಾಹ ಕಾಯ್ದೆಗೆ ತಿದ್ದುಪಡಿಯಾಗಿದ್ದು, ಕಾಯ್ದೆ ಉಲ್ಲಂಘಿಸಿದರಿಗೆ ಕಠಿಣ ಶಿಕ್ಷೆಗೆ ಗುರಿಯಾಗುತ್ತಾರೆ. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿರುವುದು ಸಂತೋಷ ಎಂದರು.

ಗ್ರಾಪಂ ಸದಸ್ಯ ಬಸವಾಪುರ ರವಿಚಂದ್ರ ಅವರು ವೀರಭದ್ರೇಶ್ವರ ಸನ್ನಿಧಾನದಲ್ಲಿ ಭಕ್ತಾದಿಗಳಿಗಾಗಿ ಹೈಟೆಕ್ ಶೌಚಾಲಯ ನಿರ್ಮಾಣ ವಿಳಂಬ ಆಗಿರುವ ಬಗ್ಗೆ ಕಾರ್ಯಕ್ರಮದಲ್ಲಿ ಗಮನ ಸೆಳೆದಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕರು, ಕಾಮಗಾರಿ ಏಕೆ ವಿಳಂಬವಾಗಿದೆ ಎಂಬುದನ್ನು ಅಧಿಕಾರಿಗಳ ಸಮಕ್ಷಮ ಚರ್ಚಿಸಿ, ಆದಷ್ಟು ಬೇಗ ಶೌಚಾಲಯ ನಿರ್ಮಾಣ ಮತ್ತು ಅಂಗನವಾಡಿ ಕಟ್ಟಡಗಳ ಲೋಕಾರ್ಪಣೆಗೆ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ತಹಸೀಲ್ದಾರ್ ಸೈಯದ್ ಕಲೀಂ ಉಲ್ಲಾ, ಸ್ವಚ್ಛತೆಯೇ ಸೇವಾ ಕಾರ್ಯಕ್ರಮ ಮಹಾತ್ಮ ಗಾಂಧೀಜಿ ಅವರ ಕನಸನ್ನು ನನಸು ಮಾಡುವಂತಹ ಕಾರ್ಯಕ್ರಮವಾಗಿದೆ. ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ಆರೋಗ್ಯ ಕಾಪಾಡಿಕೊಳ್ಳಿ ಎಂದರು.

ದೇವಿಕೆರೆ ಗ್ರಾಪಂ ಸದಸ್ಯ ಗುರುಸ್ವಾಮಿ ಮತ್ತು ಬಸವಾಪುರ ರವಿಚಂದ್ರ ಶಾಸಕರಲ್ಲಿ ಗ್ರಾಪಂ ಅಭಿವೃದ್ಧಿಗೆ ಬೇಕಾದ ಅನುದಾನದ ಬಗ್ಗೆ ಶಾಸಕರಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ತಾಪಂ ಇಒ ಕೆಂಚಪ್ಪ, ಸಿಡಿಪಿಒ ಬಿರೇಂದ್ರ ಕುಮಾರ್, ಬಿಇಒ, ಹಾಲಮೂರ್ತಿ, ಡಿಡಿ ಹಾಲಪ್ಪ, ಟಿ.ಎಚ್.ಒ. ಡಾ.ವಿಶ್ವನಾಥ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಪರಮೇಶ್ವರಪ್ಪ, ಗ್ರಾಪಂ ಅಧ್ಯಕ್ಷರಾದ ರಣದಮ್ಮ, ಉಪಾಧ್ಯಕ್ಷರಾದ ವೀರೇಶ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರ ಪ್ರಭುಶಂಕರ್, ಲೋಕೋಪಯೋಗಿ ಇಲಾಖೆಯ ಸಹಾಯಕ ನಿರ್ಧೇಶಕ ನಾಗರಾಜ್, ಜಿಪಂ ಸಹಾಯಕ ನಿರ್ದೇಶಕ ಶಿವಮೂರ್ತಿ, ತಾಲೂಕು ಅಧಿಕಾರಿಗಳು, ಗ್ರಾಪಂ ಸದಸ್ಯರು ಇದ್ದರು.

- - - -2ಜೆಎಲ್ಆರ್ಚಿತ್ರ1:

ಸಮಾರೋಪ ಸಮಾರಂಭಕ್ಕೆ ಶಾಸಕ ಬಿ.ದೇವೇಂದ್ರಪ್ಪ ಚಾಲನೆ ನೀಡಿದರು.