ಸಿದ್ದರಾಮಯ್ಯ ಸಿಎಂ ಅವಧಿ ಪೂರ್ಣದ ಅನುಮಾನ ಬೇಡ

| Published : Oct 26 2025, 02:00 AM IST

ಸಾರಾಂಶ

ರಾಮನಗರ: ಸಿದ್ದರಾಮಯ್ಯ 2013 - 2018ರವರೆಗೆ ಮುಖ್ಯಮಂತ್ರಿಯಾಗಿದ್ದರು. 2023ರಿಂದ ಮತ್ತೆ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿರುವ ಅವರು ಉಳಿದ ಅವಧಿ ಪೂರ್ಣಗೊಳಿಸಲಿದ್ದಾರೆ. ಈ ಬಗ್ಗೆ ಯಾರಿಗೂ ಯಾವುದೇ ಅನುಮಾನ ಬೇಡ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಹೇಳಿದರು.

ಬಿಡದಿ ಹೋಬಳಿ ಬನ್ನಿಕುಪ್ಪೆಯ ಜೆಯು ಗ್ರೂಪ್ ಆಫ್ ಇನ್ಸ್‌ಟಿಟ್ಯೂಶನ್ ಆವರಣದಲ್ಲಿ ದಾರುಲ್ ಖುರಾನ್ ಕ್ಯಾಂಪಸ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮನುಷ್ಯತ್ವದ ಜೊತೆಯಲ್ಲಿ ಇರಬೇಕೆಂದು ಬಯಸುವ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಅಲ್ಪಸಂಖ್ಯಾತರ ಕಷ್ಟ ಸುಖಗಳಲ್ಲಿ ಸದಾ ಭಾಗಿಯಾದವರು. ಹೀಗಾಗಿ ಅಲ್ಪಸಂಖ್ಯಾತರಿಗೆ ಹಕ್ಕುಗಳನ್ನು ಕೊಡಿಸಲು ಹೋರಾಟ ಮಾಡುತ್ತಿದ್ದಾರೆ. ಅವರ ನೇತೃತ್ವದಲ್ಲಿಯೇ ಭವಿಷ್ಯದಲ್ಲಿಯೂ ಸುರಕ್ಷತೆ ಮತ್ತು ಸಮಾನತೆ ಸಿಗುತ್ತದೆ ಎಂದು ಭಾವಿಸಿದ್ದೇವೆ ಎಂದು ತಿಳಿಸಿದರು.

ಈ ಬಾರಿಯ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗಾಗಿ 4500 ಕೋಟಿ ರುಪಾಯಿ ಅನುದಾನ ಮೀಸಲಿಟ್ಟಿದ್ದಾರೆ. ಆ ಅನುದಾನದಲ್ಲಿ ಹೆಚ್ಚಿನ ಪಾಲನ್ನು ಅಲ್ಪಸಂಖ್ಯಾತರ ಮಕ್ಕಳ ಶಿಕ್ಷಣ ಕಾರ್ಯಕ್ಕೆ ಸದ್ಬಳಕೆ ಮಾಡಲಾಗುತ್ತಿದೆ ಎಂದರು.

25ಕೆಆರ್ ಎಂಎನ್ 3.ಜೆಪಿಜಿ

ಬಿಡದಿ ಹೋಬಳಿ ಬನ್ನಿಕುಪ್ಪೆಯ ಜೆಯು ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ ಆವರಣದಲ್ಲಿ ಜಾಮಿಯಾ ಮಸೀದಿ ಮತ್ತು ಮುಸ್ಲಿಂ ಚಾರಿಟಬಲ್ ಫಂಡ್ ಟ್ರಸ್ಟ್ ನಿರ್ವಹಣೆಯ ಜೆಯು ಸಮೂಹ ಸಂಸ್ಥೆಗಳ ವತಿಯಿಂದ ಆಯೋಜಿಸಿದ್ದ ದಾರುಲ್ ಖುರಾನ್ ಕ್ಯಾಂಪಸ್ ನ ಉದ್ಘಾಟನಾ ಸಮಾರಂಭದ ವೇದಿಕೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.