ಸಾರಾಂಶ
ರಾಮನಗರ: ಅನುದಾನ ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗಿಲ್ಲ. ರಾಜ್ಯಕ್ಕೆ ಬರುತ್ತಿರುವ ಅನುದಾನವನ್ನು ಹೇಗೆ ಉಪಯೋಗಿಸುತ್ತೇವೆ ಎಂಬುದು ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಸದ ಡಾ.ಸಿ.ಎನ್.ಮಂಜುನಾಥ್ ತಿರುಗೇಟು ನೀಡಿದರು.
ರಾಮನಗರ: ಅನುದಾನ ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗಿಲ್ಲ. ರಾಜ್ಯಕ್ಕೆ ಬರುತ್ತಿರುವ ಅನುದಾನವನ್ನು ಹೇಗೆ ಉಪಯೋಗಿಸುತ್ತೇವೆ ಎಂಬುದು ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಸದ ಡಾ.ಸಿ.ಎನ್.ಮಂಜುನಾಥ್ ತಿರುಗೇಟು ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಸಮಸ್ಯೆಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂಬ ಮುಖ್ಯಮಂತ್ರಿಗಳ ಆರೋಪದಲ್ಲಿ ಹುರುಳಿಲ್ಲ. ರಾಜ್ಯದ ಪರವಾಗಿ ನಾವು ಕೂಡಾ ಧ್ವನಿ ಎತ್ತಿದ್ದೇವೆ ಎಂದರು.ಕಳೆದ 10 ವರ್ಷದಲ್ಲಿ ರಾಜ್ಯಕ್ಕೆ 5ಲಕ್ಷ ಕೋಟಿ ಅನುದಾನ ಬಂದಿದೆ. ಅದನ್ನು ರಾಜ್ಯ ಸಮರ್ಪಕವಾಗಿ ಬಳಸಬೇಕು ಅಷ್ಟೇ. ರೈಲ್ವೆ ಯೋಜನೆಗಳಿಗೆ ಸುಮಾರು ಏಳೂವರೆ ಸಾವಿರ ಕೋಟಿ ಅನುದಾನ ಬಂದಿದೆ. ರಾಜ್ಯದಲ್ಲೂ ಆಂತರಿಕ ಸಂಪನ್ಮೂಲ ಚೆನ್ನಾಗಿದೆ. ಅದನ್ನು ಶಾಶ್ವತ ಯೋಜನೆಗಳಿಗೆ ಹೆಚ್ಚು ಕರ್ಚು ಮಾಡಬೇಕು ಎಂದು ಹೇಳಿದರು.
ಕಬ್ಬು ಬೆಳೆಗಾರರು ಬೆಂಬಲ ಬೆಲೆಗಾಗಿ ಹೋರಾಟ ಮಾಡುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಇದರಲ್ಲಿ ಕೇಂದ್ರ, ರಾಜ್ಯ ಸರ್ಕಾರ ಹಾಗೂ ಸಕ್ಕರೆ ಮಾಲೀಕರ ಜವಾಬ್ದಾರಿ ಕೂಡಾ ಇದೆ. ಈಗಾಗಲೇ ಇದನ್ನು ಕೇಂದ್ರದ ಗಮನಕ್ಕೆ ತಂದಿದ್ದೇವೆ.ಚಳಿಗಾಲದ ಅಧಿವೇಶನದಲ್ಲಿ ಪ್ರಧಾನ ಮಂತ್ರಿಗಳು ಹಾಗೂ ಸಂಬಂಧಪಟ್ಟ ಸಚಿವರ ಗಮನ ಸೆಳೆಯುತ್ತೇವೆ ಎಂದರು.ಮೇಕೆದಾಟು ಯೋಜನೆ ಡಿಪಿಆರ್ ವಿಚಾರವಾಗಿ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಇದಕ್ಕೆ ಕಾವೇರಿ ವಾಟರ್ ಮ್ಯಾನೇಜಿಂಗ್ ಅಥಾರಿಟಿ ಹಾಗೂ ಹಸಿರು ನ್ಯಾಯಾಲಯದ ಅನುಮತಿ ಬೇಕು. ಇದರ ಬಗ್ಗೆ ದೇವೇಗೌಡರ ನೇತೃತ್ವದಲ್ಲಿ ನಿರಂತರ ಹೋರಾಟ ಆಗುತ್ತಿದೆ.
ಈ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಒಟ್ಟಾಗಿ ಕೆಲಸ ಮಾಡಬೇಕು. ಇದು ಸಂಪೂರ್ಣ ಕುಡಿಯುವ ನೀರಿನ ಯೋಜನೆ. ಇದು ಯಾವುದೇ ನೀರಾವರಿ ಯೋಜನೆ ಅಲ್ಲ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ನಾವೆಲ್ಲರು ಒಟ್ಟಾಗಿ ಒತ್ತಾಯ ಮಾಡಬೇಕು ಎಂದು ಡಾ.ಮಂಜುನಾಥ್ ತಿಳಿಸಿದರು.18ಕೆಆರ್ ಎಂಎನ್ 3.ಜೆಪಿಜಿ
ಸಂಸದ ಡಾ.ಸಿ.ಎನ್.ಮಂಜುನಾಥ್ .;Resize=(128,128))
;Resize=(128,128))
;Resize=(128,128))
;Resize=(128,128))