ಗಿಡ ನೆಡುವ ವಿಷಯದಲ್ಲಿ ನಿರ್ಲಕ್ಷ್ಯ ಸಲ್ಲದು: ವಿದ್ಯಾ ಸಾಲಿಯಾನ್

| Published : Jul 30 2025, 12:51 AM IST

ಸಾರಾಂಶ

ಕೋಟತಟ್ಟು ಪಡುಕರೆಯಲ್ಲಿ ಕೋಟ ಪಂಚವರ್ಣ ಯುವಕ ಮಂಡಲ - ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ 265ನೇ ಹಸಿರು ಜೀವ ಅಭಿಯಾನ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಕುಂದಾಪುರ

ಗಿಡ ನೆಡುವ ವಿಷಯದಲ್ಲಿ ಯಾವುದೇ ನಿರ್ಲಕ್ಷ್ಯ ಸಲ್ಲದು, ಪ್ರತಿಯೊರ್ವರು ಪರಿಸರಸ್ನೇಹಿ ವಾತಾವರಣ ನಿರ್ಮಿಸುವುದು ಕರ್ತವ್ಯ ಎಂದು ತಿಳಿಕೊಳ್ಳಬೇಕು ಎಂದು ಕೋಟತಟ್ಟು ಪಂಚಾಯಿತಿ ಸದಸ್ಯೆ ವಿದ್ಯಾ ಸಾಲಿಯಾನ್ ಕರೆ ಕೊಟ್ಟರು.ಅವರು ಕೋಟತಟ್ಟು ಪಡುಕರೆಯಲ್ಲಿ ಕೋಟ ಪಂಚವರ್ಣ ಯುವಕ ಮಂಡಲ - ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ 265ನೇ ಹಸಿರು ಜೀವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪರಿಸರದಲ್ಲಿ ವಿವಿಧ ತಳಿಗಳ ಗಿಡಗಳು ತನ್ನದೆ ಆದ ವಿಶೇಷತೆಯನ್ನು ಹೊಂದಿದೆ. ಅದರಲ್ಲಿ ರಕ್ತಚಂದನ ಅತಿ ಶ್ರೀಮಂತ ಮರಗಳ ಸಾಲಿಗೆ ಸೇರುತ್ತದೆ, ಇದರ ಮಹತ್ವ ಅರಿತು ಅದನ್ನು ನೆಟ್ಟು ಪೋಷಿಸಬೇಕು ಎಂದರು.ಈ ಸರಣಿ ಕಾರ್ಯಕ್ರಮದ ಅಂಗವಾಗಿ ಕೋಟತಟ್ಟು ಪಡುಕರೆಯ ವಿವಿಧ ಭಾಗಗಳಲ್ಲಿ 35ಕ್ಕೂ ಅಧಿಕ ಮನೆಗಳಿಗೆ ತೆರಳಿ ರಕ್ತಚಂದನ ಗಿಡಗಳನ್ನು ನೆಡಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ವಹಿಸಿದ್ದರು.

ಮುಖ್ಯ ಅಭ್ಯಾಗತರಾಗಿ ಕೋಟತಟ್ಟು ಪಂಚಾಯತ್ ಸದಸ್ಯೆ ಅಶ್ವಿನಿ ದಿನೇಶ್, ಮಾಜಿ ಸದಸ್ಯೆ ಸುಜಾತ ಉದಯ್, ಉದ್ಯಮಿ ಕೇಶವ ಪುತ್ರನ್, ಗೀತಾನಂದ ಫೌಂಡೇಶನ್ ಸಮಾಜಕಾರ್ಯ ವಿಭಾಗದ ರವಿಕಿರಣ್ ಕೋಟ, ಕರ್ಣಾಟಕ ಬ್ಯಾಂಕ್ ನಿವೃತ್ತ ಅಧಿಕಾರಿ ರವೀಂದ್ರನಾಥ ಹಂದೆ, ಕೋಟತಟ್ಟು ಪಂಚಾಯತ್ ಮಾಜಿ ಅಧ್ಯಕ್ಷೆ ವಿಶ್ವಪ್ರಕಾಶನಿ ಹಂದೆ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಪಂಚವರ್ಣದ ಮಹೇಶ್ ಬೆಳಗಾವಿ ಸ್ವಾಗತಿಸಿದರು. ಕಾರ್ಯಕ್ರಮವನ್ನುಅಜಿತ್ ಆಚಾರ್ ನಿರೂಪಿಸಿ ಪ್ರಾಸ್ತಾವನೆ ಸಲ್ಲಿಸಿದರು. ರವೀಂದ್ರ ಕೋಟ ಸಂಯೋಜಿಸಿದರು.