ಚುನಾವಣೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ದಿಂಗಾಲೇಶ್ವರ ಶ್ರೀ

| Published : Apr 12 2024, 01:06 AM IST

ಚುನಾವಣೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ದಿಂಗಾಲೇಶ್ವರ ಶ್ರೀ
Share this Article
  • FB
  • TW
  • Linkdin
  • Email

ಸಾರಾಂಶ

ಜನತೆ ಚುನಾವಣೆ ನಿಲ್ಲುವಂತೆ ಸಲಹೆ ನೀಡಿದ್ದಾರೆ. ಪಕ್ಷೇತರನಾಗಿ ಸ್ಪರ್ಧಿಸುವ ನಿರ್ಧಾರ ಮಾಡಿದ್ದೇನೆ. ಹೀಗಿರುವಾಗ ಅಖಾಡದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಏಪ್ರಿಲ್‌ 18ಕ್ಕೆ ನಾಮಪತ್ರ ಸಲ್ಲಿಸುತ್ತೇನೆ.

ಹುಬ್ಬಳ್ಳಿ:

ನನ್ನನ್ನು ಚುನಾವಣೆಯಿಂದ ಹಿಂದೆ ಸರಿಸುವ ವ್ಯಕ್ತಿ ಭೂಮಿ ಮೇಲೆ ಹುಟ್ಟಿಲ್ಲ. ಚುನಾವಣೆಯಲ್ಲಿ ಹಿಂದೆ ಸರಿಯುತ್ತೇನೆ ಅನ್ನೋದು ಕೇವಲ ಊಹಾಫೋಹ ಎಂದು ಶಿರಹಟ್ಟಿ ಫಕೀರೇಶ್ವರ ಮಠದ ದಿಂಗಾಲೇಶ್ವರ ಶ್ರೀ ಸ್ಪಷ್ಟಪಡಿಸಿದರು.

ಧಾರವಾಡ ಲೋಕಸಭಾ ಮತಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಿಸಿದ ನಂತರ ಪ್ರಥಮ ಬಾರಿಗೆ ಹುಬ್ಬಳ್ಳಿ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ಜನತೆ ಚುನಾವಣೆ ನಿಲ್ಲುವಂತೆ ಸಲಹೆ ನೀಡಿದ್ದಾರೆ. ಪಕ್ಷೇತರನಾಗಿ ಸ್ಪರ್ಧಿಸುವ ನಿರ್ಧಾರ ಮಾಡಿದ್ದೇನೆ. ಹೀಗಿರುವಾಗ ಅಖಾಡದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಏಪ್ರಿಲ್‌ 18ಕ್ಕೆ ನಾಮಪತ್ರ ಸಲ್ಲಿಸುತ್ತೇನೆ ಎಂದರು. ಬಹುಸಂಖ್ಯಾತ ನಾಯಕರು ಈಗಾಗಲೇ ನನ್ನ ಜೊತೆ ಮಾತನಾಡಿ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಮನವಿ ಮಾಡಿದ್ದಾರೆ. ಆದರೆ, ಚುನಾವಣೆಯಿಂದ ಹಿಂದೆ ಸರಿಯಲ್ಲ ಎಂದು ಅವರಿಗೆ ಹೇಳಿದ್ದೇನೆ. ಕಾಂಗ್ರೆಸ್‌ ಪಕ್ಷ ಏನು ಚರ್ಚೆ ನಡೆಸಿದೆಯೋ ಗೊತ್ತಿಲ್ಲ. ಯಾವುದೇ ಕಾಂಗ್ರೆಸ್‌ ನಾಯಕರು ಸಂಪರ್ಕಿಸಿಲ್ಲ. ಒಂದು ವೇಳೆ ಕಾಂಗ್ರೆಸ್‌ನಿಂದ ಅವಕಾಶ ಸಿಕ್ಕಲ್ಲಿ ಭಕ್ತರ ಜತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ. ಸದ್ಯಕ್ಕೆ ನಾನು ಪಕ್ಷೇತರನಾಗಿ ನಿಲ್ಲುವುದು ಖಚಿತ ಎಂದು ಹೇಳಿದರು.