ಸಾರಾಂಶ
ಕನ್ನಡಪ್ರಭ ವಾರ್ತೆ ಕುಕನೂರುಭೀಕರ ಬರವಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ರೈತರಿಗೆ ಸ್ಪಂದನೆ ಇಲ್ಲ ಎಂದು ರಾಜ್ಯ ಜೆಡಿಎಸ್ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ್ ಆಕ್ರೋಶ ವ್ಯಕ್ತಪಡಿಸಿದರು.ತಾಲೂಕಿನ ನೆಲಜೇರಿ ಗ್ರಾಮದಲ್ಲಿ ಬರಗಾಲ ಪ್ರಯುಕ್ತ ರೈತರ ಜಮೀನಿಗೆ ಜೆಡಿಎಸ್ ತಂಡ ತೆರಳಿ ಬರ ವೀಕ್ಷಣೆ ಮಾಡಿ ರೈತರಿಗೆ ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರ ಇದ್ದರೂ ರಾಜ್ಯ ಸರ್ಕಾರ ರೈತರಿಗೆ ಸ್ಪಂದನೆ ನೀಡಿಲ್ಲ. ರೈತರ ಬಗ್ಗೆ ಸರ್ಕಾರಕ್ಕೆ ಕಿಂಚಿತ್ತೂ ಕಾಳಜಿ ಇಲ್ಲ. ಬರಗಾಲದಿಂದ ರೈತ ವರ್ಗ ತತ್ತರಿಸಿದೆ. ರೈತನ ಗೋಳಿಗೆ ಸರ್ಕಾರದಿಂದ ಸ್ಪಂದನೆ ದೊರಕದೇ ಇರುವುದು ಖೇದಕರ. ಸರ್ಕಾರದ ವೈಫಲ್ಯ ಖಂಡಿಸಿ ಮಾಜಿ ಸಿ.ಎಂ. ಕುಮಾರಸ್ವಾಮಿ ನೇತೃತ್ವದಲ್ಲಿ ರಾಜ್ಯಾದ್ಯಂತ ಸಾಂತ್ವನ ಯಾತ್ರೆ ನಡೆಸಿ ಡಿಸೆಂಬರ್‌ನಲ್ಲಿ ಆರಂಭವಾಗುವ ವಿಧಾನಸಭಾ ಚಳಿಗಾಲ ಅಧಿವೇಶನದಲ್ಲಿ ರೈತರ ಪರ ಧ್ವನಿ ಎತ್ತಲು ನಿರ್ಧರಿಸಲಾಗಿದೆ ಎಂದರು.ಜಿಲ್ಲಾ ಜೆಡಿಎಸ್ ತಂಡ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲನೆ ನಡೆಸಿತು. ತಾಲೂಕಿನ ನೆಲಜೇರಿ ಗ್ರಾಮದಲ್ಲಿ ಮಳೇ ಇಲ್ಲದೆ ನಷ್ಟ ಹೊಂದಿದ ಮೆಕ್ಕೆಜೋಳ ಪರಿಶೀಲಿಸಿ ರೈತರಿಗೆ ಸಾಂತ್ವನ ಹೇಳಿದರು.ಪಕ್ಷದ ಜಿಲ್ಲಾಧ್ಯಕ್ಷ ವೀರೇಶ ಮಹಾಂತಯ್ಯನಮಠ, ಜಿಲ್ಲಾ ಕಾರ್ಯದರ್ಶಿ ಮಂಜುನಾಥ ಸೊರಟೂರ, ಯಲಬುರ್ಗಾ ತಾಲೂಕಾಧ್ಯಕ್ಷ ಮಲ್ಲನಗೌಡ ಕೋನನಗೌಡ್ರು, ಶರಣಪ್ಪ ರಾಂಪೂರ, ಚೆನ್ನಪ್ಪ ಮುತ್ತಾಳ, ಶರಣಪ್ಪ ಪಾಟೀಲ್, ಬಸವರಾಜ, ಶರಣಪ್ಪ ತಳವಾರ, ಪಂಪನಗೌಡ ಮಾಲಿಪಾಟೀಲ್, ದ್ಯಾಮಣ್ಣ ಡೊಳ್ಳಿನ, ಬಸವರಾಜ ಗುಳಗುಳಿ ಇದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))