ಸಾರಾಂಶ
ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎಸ್‌ಟಿಪಿ, ಟಿಎಸ್‌ಪಿ ಯೋಜನೆ ಅನುದಾನ ೧.೧೨ ಕೋಟಿ ರು.ವೆಚ್ಚದಲ್ಲಿ ನೂತನ ಗ್ರಂಥಾಲಯ ಹಾಗೂ ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ೬೮ ಲಕ್ಷ ರು.ವೆಚ್ಚದಲ್ಲಿ ಹೆಚ್ಚುವರಿ ನೂತನ ಕೊಠಡಿಗಳ ಅಭಿವೃದ್ದಿ ಕಾಮಗಾರಿಗೆ ಎಂಎಸ್‌ಐಎಲ್ ಅಧ್ಯಕ್ಷ, ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎಸ್‌ಟಿಪಿ, ಟಿಎಸ್‌ಪಿ ಯೋಜನೆ ಅನುದಾನ ೧.೧೨ ಕೋಟಿ ರು.ವೆಚ್ಚದಲ್ಲಿ ನೂತನ ಗ್ರಂಥಾಲಯ ಹಾಗೂ ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ೬೮ ಲಕ್ಷ ರು.ವೆಚ್ಚದಲ್ಲಿ ಹೆಚ್ಚುವರಿ ನೂತನ ಕೊಠಡಿಗಳ ಅಭಿವೃದ್ದಿ ಕಾಮಗಾರಿಗೆ ಎಂಎಸ್‌ಐಎಲ್ ಅಧ್ಯಕ್ಷ, ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.ಜಿಲ್ಲೆಯಲ್ಲಿ ಪ್ರಥಮದರ್ಜೆ ಕಾಲೇಜುಗಳು, ಎಂಜಿನಿಯರಿಂಗ್, ಪಾಲಿಟೆಕ್ನಿಕ್, ವೈದ್ಯಕೀಯ ಕಾಲೇಜು, ಕೃಷಿ ವಿಜ್ಞಾನ ಕಾಲೇಜು, ಕೇಂದ್ರಿಯ ವಿದ್ಯಾಲಯ, ಸರ್ಕಾರಿ ಆದರ್ಶ ವಿದ್ಯಾಲಯ, ಚಾಮರಾಜನಗರಕ್ಕೆ ಪ್ರತ್ಯೇಕ ವಿಶ್ವವಿದ್ಯಾನಿಲಯವನ್ನು ಸರ್ಕಾರ ಮಂಜೂರು ಮಾಡಿದ್ದು, ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಯಾವುದೇ ಕೊರತೆಯೂ ಇಲ್ಲ. ಶೈಕ್ಷಣಿಕ ಚಟುವಟಿಕೆಗಳು ಹಿಂದೆ ಬಿದ್ದಿಲ್ಲ. ಶಾಲಾ ಕಾಲೇಜಿಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಲೇ ಬರಲಾಗಿದೆ. ಜಿಲ್ಲೆಯ ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಂಡು, ಉನ್ನತ ಶಿಕ್ಷಣ ಪಡೆದು, ಸಮಾಜದ ಉತ್ತಮಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದರು.
ನಗರಸಭೆ ಸದಸ್ಯ ಎಂ.ಮಹೇಶ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಅವಧಿಯಲ್ಲಿ ಸಮಯಪ್ರಜ್ಞೆ ರೂಡಿಸಿಕೊಳ್ಳಬೇಕು ಎಂದರು. ಜಿಲ್ಲಾ ಕೇಂದ್ರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕೇಂದ್ರಗಳನ್ನು ಆರಂಭಿಸಲು ಶಾಸಕರು ಸರ್ಕಾರದ ಗಮನಸೆಳೆಯಬೇಕು ಎಂದು ಮನವಿ ಮಾಡಿದರು. ಕಾಲೇಜು ಅಭಿವೃದ್ದಿ ಸಮಿತಿಸದಸ್ಯ ಶ್ರೀನಿಧಿ, ಸರ್ಕಾರಿ ಪ್ರಥಮದರ್ಜೆ ಕಾಲೇಜು ಪ್ರಾಂಶುಪಾಲೆ ಚಂದ್ರಮ್ಮ, ಭೋಗಾಪುರ ವಸತಿಯುಕ್ತ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಪಿ.ದೇವರಾಜು, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಲೋಕೇಶ್, ಕೆಎಚ್‌ಬಿ ಎಇಇ ಮಹೇಶ್, ಇಂಜಿನಿಯರ್ ಕುಸುಮ, ಉಪನ್ಯಾಸಕರು ಹಾಜರಿದ್ದರು.