ಮಾನವನ ರಕ್ತಕ್ಕೆ ಪರ್ಯಾಯವಿಲ್ಲ: ಡಾ.ಶರತ್ ರಾವ್

| Published : Sep 30 2024, 01:22 AM IST

ಮಾನವನ ರಕ್ತಕ್ಕೆ ಪರ್ಯಾಯವಿಲ್ಲ: ಡಾ.ಶರತ್ ರಾವ್
Share this Article
  • FB
  • TW
  • Linkdin
  • Email

ಸಾರಾಂಶ

ವಿಶ್ವ ಹೃದಯ ದಿನದ ಅಂಗವಾಗಿ ರಕ್ತದಾನ ಶಿಬಿರ, ಉಚಿತ ಹೃದಯ ಮತ್ತು ಆರೋಗ್ಯ ತಪಾಸಣೆ ಶಿಬಿರ, ಅಪಘಾತ ವಿಮಾ ಯೋಜನೆಯ ನೋಂದಣಿ ಹಾಗೂ ಆಧಾರ್ ತಿದ್ದುಪಡಿ ಕಾರ್ಯಾಗಾರ, ಗ್ಯಾರೇಜು ಕಾರ್ಮಿಕರ ಕೌಶಲ್ಯ ಉನ್ನತೀಕರಣ ತರಬೇತಿ ಶಿಬಿರ ನಡೆಯಿತು.

ಕನ್ನಡಪ್ರಭ ವಾರ್ತೆ ಮಣಿಪಾಲ

ಮಾನವನ ರಕ್ತದ ಒಂದೊಂದು ಹನಿಯೂ ಅತ್ಯಂತ ಅಮೂಲ್ಯವಾಗಿದ್ದು, ಜಗತ್ತಿನಲ್ಲಿ ಇದಕ್ಕೆ ಇದುವರೆಗೂ ಪರ್ಯಾಯ ಅನ್ವೇಷಣೆಯಾಗಿಲ್ಲ. ಮಣಿಪಾಲದಂತಹ ಆಸ್ಪತ್ರೆಯಲ್ಲಿ ಪ್ರತಿದಿನ ನೂರಾರು ಯೂನಿಟ್ ರಕ್ತದ ಅವಶ್ಯಕತೆ ಇದ್ದು, ಇದಕ್ಕೆ ಸ್ವಯಂ ಪ್ರೇರಿತ ರಕ್ತದಾನವೇ ಪರಿಹಾರ ಎಂದು ಖ್ಯಾತ ಮೂಳೆತಜ್ಞ, ಮಾಹೆ ಸಹ ಉಪಕುಲಪತಿಗಳಾದ ಡಾ. ಶರತ್ ರಾವ್ ಹೇಳಿದರು.ಅವರು ಭಾನುವಾರ ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಆಶ್ರಯದಲ್ಲಿ, ಡಾ.ಟಿ.ಎಂ.ಎ. ಪೈ ಪಾಲಿಟೆಕ್ನಿಕ್, ಮಣಿಪಾಲ ಕೌಶಲ ತರಬೇತಿ ಕೇಂದ್ರ, ಕೆಎಂಸಿ ಆಸ್ಪತ್ರೆ, ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗ, ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ ಸಹಭಾಗಿತ್ವದಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ರಕ್ತದಾನ ಶಿಬಿರ, ಉಚಿತ ಹೃದಯ ಮತ್ತು ಆರೋಗ್ಯ ತಪಾಸಣೆ ಶಿಬಿರ, ಅಪಘಾತ ವಿಮಾ ಯೋಜನೆಯ ನೋಂದಣಿ ಹಾಗೂ ಆಧಾರ್ ತಿದ್ದುಪಡಿ ಕಾರ್ಯಾಗಾರ, ಗ್ಯಾರೇಜು ಕಾರ್ಮಿಕರ ಕೌಶಲ್ಯ ಉನ್ನತೀಕರಣ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.ಸಂಘ ಅಧ್ಯಕ್ಷ ರೋಶನ್ ಕರ್ಕಡ ಕಾಪು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸ್ಥಾಪಕ ಅಧ್ಯಕ್ಷ ಪ್ರಭಾಕರ್ ಕೆ., ಗೌರವ ಸಲಹೆಗಾರರಾದ ಯಾದವ್ ಶೆಟ್ಟಿಗಾರ್, ಜಯ ಸುವರ್ಣ ಮತ್ತು ಉದಯ್ ಕಿರಣ್, ಉಪಾಧ್ಯಕ್ಷರಾದ ರಾಜೇಶ್ ಜತ್ತನ್ ಮತ್ತು ವಿನಯ್ ಕುಮಾರ್ ಕಲ್ಮಾಡಿ, ಕಾಲೇಜಿನ ಪ್ರಾಂಶುಪಾಲ ಡಾ.ಕಾಂತರಾಜ್ ಎ.ಎನ್., ತರಬೇತಿ ಕೇಂದ್ರದ ಕುಲಸಚಿವ ಡಾ.ಆಂಜಯ್ಯ, ರಕ್ತನಿಧಿ ಕೇಂದ್ರದ ಮುಖ್ಯಸ್ಥೆ ಡಾ. ಶಮಿ ಶಾಸ್ತ್ರಿ, ಕೆ.ಎಂ.ಸಿ. ಆಸ್ಪತ್ರೆಯ ಮಾರುಕಟ್ಟೆ ವ್ಯವಸ್ಥಾಪಕ ಮೋಹನ್ ಶೆಟ್ಟಿ, ಭಾರತೀಯ ಅಂಚೆ ಇಲಾಖೆಯ ಅಧಿಕಾರಿ ಶಂಕರ್ ಲಮಾಣಿ, ಅಭಯಹಸ್ತ ಟ್ರಸ್ಟ್ ಅಧ್ಯಕ್ಷ ಸತೀಶ್ ಸಾಲಿಯಾನ್, ದ.ಕ. ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ಕೇಶವ, ಮಾಜಿ ಚೇರ್ಮನ್ ಪುಂಡಲಿಕ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.ವಿನಯ್ ಕುಮಾರ್ ಸ್ವಾಗತಿಸಿದರು. ಸಂತೋಷ್ ಕುಮಾರ್ ವಂದಿಸಿದರು. ಮಂಜುನಾಥ್ ಮಣಿಪಾಲ ಕಾರ್ಯಕ್ರಮ ನಿರೂಪಣೆ ಮಾಡಿದರು.