ರೈ ತರ ಜೇಬಿಗೆ ಕತ್ತರಿ ಹಾಕಿದ ಕಾಂಗ್ರೆಸ್ಸಿಗೆ ಉಳಿಗಾಲವಿಲ್ಲ: ಬಿ.ಸಿ.ಪಾಟೀಲ್‌ ಹೇಳಿಕೆ

| Published : Apr 30 2024, 02:02 AM IST

ರೈ ತರ ಜೇಬಿಗೆ ಕತ್ತರಿ ಹಾಕಿದ ಕಾಂಗ್ರೆಸ್ಸಿಗೆ ಉಳಿಗಾಲವಿಲ್ಲ: ಬಿ.ಸಿ.ಪಾಟೀಲ್‌ ಹೇಳಿಕೆ
Share this Article
  • FB
  • TW
  • Linkdin
  • Email

ಸಾರಾಂಶ

ರೈತರು ಒಂದು ಟ್ರಾನ್ಸ್‌ಫಾರ್ಮರ್‌ ಹಾಕಿಸಬೇಕೆಂದರೂ ಈಗ ₹1.75 ಲಕ್ಷ ಖರ್ಚು ಮಾಡಬೇಕಾಗಿದೆ. ಇದೆಲ್ಲಾ ಹಣ ಕಾಂಗ್ರೆಸ್ಸಿನವರ ಜೇಬಿಗೆ ಹೋಗುತ್ತಿದೆ. ರೈತರ ಜೇಬಿಗೆ ಕತ್ತರಿ ಹಾಕುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಮಾಜಿ ಕೃಷಿ ಸಚಿವ ಬಿ.ಸಿ.ಪಾಟೀಲ್ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.

- ದಾವಣಗೆರೆಯಲ್ಲಿ ವಿಕಸಿತ ಭಾರತಕ್ಕೆ ವಿಜಯ ಸಂಕಲ್ಪ ಸಮಾವೇಶ- - - ದಾವಣಗೆರೆ: ರೈತರು ಒಂದು ಟ್ರಾನ್ಸ್‌ಫಾರ್ಮರ್‌ ಹಾಕಿಸಬೇಕೆಂದರೂ ಈಗ ₹1.75 ಲಕ್ಷ ಖರ್ಚು ಮಾಡಬೇಕಾಗಿದೆ. ಇದೆಲ್ಲಾ ಹಣ ಕಾಂಗ್ರೆಸ್ಸಿನವರ ಜೇಬಿಗೆ ಹೋಗುತ್ತಿದೆ. ರೈತರ ಜೇಬಿಗೆ ಕತ್ತರಿ ಹಾಕುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಮಾಜಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಆರೋಪಿಸಿದರು.

ನಗರದ ಹೈಸ್ಕೂಲ್ ಮೈದಾನದಲ್ಲಿ ಭಾನುವಾರ ವಿಕಸಿತ ಭಾರತಕ್ಕೆ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಕೃಷಿ ಸಮ್ಮಾನ್ ಅಡಿ ನರೇಂದ್ರ ಮೋದಿ ಸರ್ಕಾರ ರೈತರಿಗೆ ₹6 ಸಾವಿರ ನೀಡುತ್ತಿದ್ದು, ನಮ್ಮ ಹಿಂದಿನ ಸರ್ಕಾರ ₹4 ಸಾವಿರ ಸೇರಿಸಿ ₹10 ಸಾವಿರ ನೀಡುತ್ತಿತ್ತು. ಆದರೆ, ಸಿದ್ದರಾಮಯ್ಯ ಸರ್ಕಾರ ₹4 ಸಾವಿರ ನೀಡುವುದನ್ನೇ ನಿಲ್ಲಿಸಿದೆ ಎಂದರು.

ಈ ಹಿಂದೆ ಬಸವರಾಜ ಬೊಮ್ಮಾಯಿ ಅವರು ರೈತರ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗಬಾರದು ಎಂದು ವಿದ್ಯಾನಿಧಿ ತಂದಿದ್ದರು. ವಿದ್ಯಾನಿಧಿ ನಮ್ಮ ರಾಜ್ಯದಲ್ಲಿ ಮಾತ್ರ ಇದೆ. ಆದರೆ, ಸಿದ್ದರಾಮಯ್ಯ ಸರ್ಕಾರವು ರೈತರಿಗೆ ಎಲ್ಲ ರೀತಿಯಲ್ಲೂ ಶೋಷಣೆ ಮಾಡುತ್ತಿದೆ. ಇಂತಹ ಅನ್ಯಾಯಕ್ಕೆ ತಕ್ಕ ಪಾಠ ಕಲಿಸುವ ಕೆಲಸ ಆಗಬೇಕು ಎಂದು ಮನವಿ ಮಾಡಿದರು.

ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಹತ್ಯೆ ಪ್ರಕರಣ ಆರೋಪಿ ವಿರುದ್ಧ ಕಾಂಗ್ರೆಸ್ ಸರ್ಕಾರ ಮತ ಕಠಿಣ ಕ್ರಮ ಕೈಗೊಳ್ಳದೇ, ಓಟ್‌ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅದನ್ನು ವೈಯಕ್ತಿಕ ಜಗಳವೆನ್ನುತ್ತಾರೆ. ಗೃಹ ಮಂತ್ರಿ ಇದೊಂದು ಲವ್ ಪ್ರಕರಣ. ಅದನ್ನು ಗಂಭೀರವಾಗಿ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ ಎನ್ನುತ್ತಾರೆ. ಆಕಸ್ಮಾತ್‌ ಇಂಥದ್ದೇ ಘಟನೆ ನಿಮ್ಮ ಮನೆ ಹೆಣ್ಣುಮಕ್ಕಳಿಗೂ ಆಗಿದ್ದರೆ ಇದೇ ರೀತಿ ಹೇಳಿಕೆ ನೀಡುತ್ತಿದ್ದಿರಾ ಎಂದು ಕಿಡಿಕಾರಿದರು.

ದಾವಣಗೆರೆಯಲ್ಲಿ ಗಾಯತ್ರಿ ಸಿದ್ದೇಶ್ವರ, ಹಾವೇರಿಯಲ್ಲಿ ಬಸವರಾಜ ಬೊಮ್ಮಾಯಿ ಭಾರಿ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ. ಉಭಯ ಕ್ಷೇತ್ರದ ಮತದಾರರು ಕಮಲದ ಚಿಹ್ನೆಗೆ ಮತ ನೀಡುವ ಮೂಲಕ ನರೇಂದ್ರ ಮೋದಿಯವರ ಕೈಗಳನ್ನು ಮತ್ತಷ್ಟು ಬಲ ಪಡಿಸಬೇಕು ಎಂದು ಅವರು ಮನವಿ ಮಾಡಿದರು.

- - - -(ಫೋಟೋ: ಬಿ.ಸಿ.ಪಾಟೀಲ್‌)