ಸಾರಾಂಶ
ಸದ್ಯಕ್ಕೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದು, ಸಿಎಂ ಕುರ್ಚಿ ಖಾಲಿ ಇಲ್ಲ. ಮುಖ್ಯಮಂತ್ರಿ ಬದಲಾವಣೆ ವಿಚಾರದ ಸಂದರ್ಭ ಬಂದಾಗ ಅಂತಿಮವಾಗಿ ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ .
ಕನ್ನಡಪ್ರಭ ವಾರ್ತೆ ಹೊಸಕೋಟೆ
ರಾಜ್ಯದಲ್ಲಿ ಪ್ರಸ್ತುತ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರಿದ್ದು, ಸಿಎಂ ಬದಲಾವಣೆ ವಿಚಾರವಾಗಿ ಯಾವುದೇ ರೀತಿಯ ಚರ್ಚೆ ಇಲ್ಲ. ಅಷ್ಟೇ ಅಲ್ಲದೆ ಮುಖ್ಯಮಂತ್ರಿ ಸ್ಥಾನವೂ ಸಹ ಖಾಲಿ ಇಲ್ಲ ಎಂದು ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದರು. ಬಮುಲ್ ಹೊಸಕೋಟೆ ಶಿಬಿರಕ್ಕೆ ಭೇಟಿ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದು, ಸಿಎಂ ಕುರ್ಚಿ ಖಾಲಿ ಇಲ್ಲ. ಮುಖ್ಯಮಂತ್ರಿ ಬದಲಾವಣೆ ವಿಚಾರದ ಸಂದರ್ಭ ಬಂದಾಗ ಅಂತಿಮವಾಗಿ ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದರು.ಕೇಂದ್ರ ಸಚಿವ ಕುಮಾರಸ್ವಾಮಿ ಮೇಕೆದಾಟು ಹೇಳಿಕೆಗೆ ಉತ್ತರಿಸಿ, ಕುಮಾರಸ್ವಾಮಿಯವರು ರಾಜ್ಯದಲ್ಲಿ ಮುಖ್ಯಮಂತ್ರಿ ಆಗಿದ್ದವರು, ಚುನಾವಣೆ ಸಂದರ್ಭದಲ್ಲಿ ನನ್ನನ್ನು ಗೆಲ್ಲಿಸಿದರೆ ಹತ್ತು ನಿಮಿಷದಲ್ಲಿ ಅನುಮತಿ ಕೊಡಿಸುತ್ತೇನೆ ಎಂದು ಹೇಳಿದವರು. ಈಗ ಅವರು ಗೆದ್ದು ಕೇಂದ್ರದಲ್ಲಿ ಸಚಿವರು ಆಗಿ ಸಹ ಕೆಲಸ ಮಾಡುತ್ತಿದ್ದಾರೆ, ಈಗ ಮೇಕೆದಾಟು ಅಣೆಕಟ್ಟೆಗೆ ಕೇಂದ್ರದಿಂದ ಅನುಮತಿಯನ್ನು ಅವರು ಕೊಡಿಸಬೇಕು ಎಂದರು.