ರಾಜ್ಯದಲ್ಲಿ ಬೆಲೆ ಏರಿಕೆ ವಿರುದ್ಧ ಜನ ದಂಗೆ ನಿಶ್ಚಿತ

| Published : Jun 21 2024, 01:01 AM IST

ಸಾರಾಂಶ

ರಾಜ್ಯದ ಜನತೆಗೆ ಸುಳ್ಳು ಭರವಸೆಗಳನ್ನು ನೀಡಿ, ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಕಳೆದೊಂದು ವರ್ಷದ ಅಧಿಕಾರ ಅವಧಿಯಲ್ಲಿ ಎಲ್ಲ ತರಹದ ದಿನಬಳಕೆ ವಸ್ತುಗಳ ಬೆಲೆಗಳನ್ನು ಏರಿಕೆ ಮಾಡಿದೆ. ಜನತೆ ಮೇಲೆ ಆರ್ಥಿಕ ಹೊರೆ ಹೆಚ್ಚಾಗಿದೆ. ಮುಂಬರುವ ದಿನಗಳಲ್ಲಿ ಸರ್ಕಾರದ ವಿರುದ್ಧ ಜನತೆ ದಂತೆ ಏಳಲಿದ್ದಾರೆ ಎಂದು ತಾಲೂಕು ಬಿಜೆಪಿ ಮುಖಂಡ, ತುಮ್ಕೋಸ್‌ ಮಾಜಿ ಅಧ್ಯಕ್ಷ ಎಚ್.ಎಸ್. ಶಿವಕುಮಾರ್ ಹೇಳಿದ್ದಾರೆ.

- ಚನ್ನಗಿರಿ ಪಟ್ಟಣದಲ್ಲಿ ಬಿಜೆಪಿ ಪ್ರತಿಭಟನೆಯಲ್ಲಿ ಮುಖಂಡ ಎಚ್.ಎಸ್. ಶಿವಕುಮಾರ್ - - - ಕನ್ನಡಪ್ರಭ ವಾರ್ತೆ, ಚನ್ನಗಿರಿ

ರಾಜ್ಯದ ಜನತೆಗೆ ಸುಳ್ಳು ಭರವಸೆಗಳನ್ನು ನೀಡಿ, ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಕಳೆದೊಂದು ವರ್ಷದ ಅಧಿಕಾರ ಅವಧಿಯಲ್ಲಿ ಎಲ್ಲ ತರಹದ ದಿನಬಳಕೆ ವಸ್ತುಗಳ ಬೆಲೆಗಳನ್ನು ಏರಿಕೆ ಮಾಡಿದೆ. ಜನತೆ ಮೇಲೆ ಆರ್ಥಿಕ ಹೊರೆ ಹೆಚ್ಚಾಗಿದೆ. ಮುಂಬರುವ ದಿನಗಳಲ್ಲಿ ಸರ್ಕಾರದ ವಿರುದ್ಧ ಜನತೆ ದಂತೆ ಏಳಲಿದ್ದಾರೆ ಎಂದು ತಾಲೂಕು ಬಿಜೆಪಿ ಮುಖಂಡ, ತುಮ್ಕೋಸ್‌ ಮಾಜಿ ಅಧ್ಯಕ್ಷ ಎಚ್.ಎಸ್. ಶಿವಕುಮಾರ್ ಹೇಳಿದರು.

ಪೆಟ್ರೋಲ್, ಡಿಸೇಲ್ ದರ ಏರಿಕೆಯನ್ನು ಖಂಡಿಸಿ ಗುರುವಾರ ತಾಲೂಕು ಬಿಜೆಪಿ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಜ್ಯದ ಆರ್ಥಿಕ ಸ್ಥಿತಿಗತಿಗಳನ್ನು ಪರಿಗಣಿಸದೇ ಚುನಾವಣೆಯ ಪೂರ್ವದಲ್ಲಿ ಬಾಯಿಗೆ ಬಂದಂತೆ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಈಗ ಸಮರ್ಪಕ ಜಾರಿ ಮಾಡಲಾಗದೇ, ಅವುಗಳಿಗೆ ಹಣ ಹೊಂದಿಸಲು ದಿನಬಳಕೆ ವಸ್ತುಗಳ ಬೆಲೆಯನ್ನು ಏರಿಸಿರುವುದ ಖಂಡನೀಯ ಎಂದರು.

ಒಬ್ಬ ವ್ಯಕ್ತಿಯಿಂದ ₹10 ಪಡೆದು ಭಾಗ್ಯಗಳ ಹೆಸರಿನಲ್ಲಿ ಜನತೆಗೆ ₹2 ಗಳನ್ನು ನೀಡಲಾಗುತ್ತಿದೆ. ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ದುರಾಡಳಿತದಿಂದ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಕಾಂಗ್ರೆಸ್‌ ಸರ್ಕಾರದ ಕೇವಲ 1 ವರ್ಷದ ಅಧಿಕಾರದ ಅವಧಿಯಲ್ಲಿ ಕೊಲೆ, ಸುಲಿಗೆ, ಅತ್ಯಾಚಾರಗಳು ಹೆಚ್ಚಾಗಿವೆ. ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ಸುರಕ್ಷಿತವಲ್ಲ ಎಂಬುದು ಮನವರಿಕೆಯಾಗಿದೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು.

ಪ್ರತಿಭಟನಾ ಮೆರವಣಿಗೆಯು ಚನ್ನಗಿರಿ ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟು ಬಸ್ ನಿಲ್ದಾಣದ ಮೂಲಕ ಗಾಂಧಿ ವೃತ್ತಕ್ಕೆ ಆಗಮಿಸಿತು. ಈ ಸಂದರ್ಭ ಕೆಲ ಕಾಲ ರಸ್ತೆತಡೆ ನಡೆಸಿದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಿದರು.

ತಾಲೂಕು ಬಿಜೆಪಿ ಅಧ್ಯಕ್ಷ ಗಿರೀಶ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಮುಖಂಡರಾದ ಕಾಯಿ ಮಂಜುನಾಥ್, ಮಾಚನಾಯ್ಕನಹಳ್ಳಿ ಜಯಣ್ಣ, ಚಿಕ್ಕಣ್ಣ, ಚನ್ನಗಿರಿ ನವೀನ್, ಗೌ.ಹಾಲೇಶ್, ರುದ್ರಪ್ಪ, ವಿಜಯಕುಮಾರ್ ಸೇರಿದಂತೆ ಬಿಜೆಪಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

- - - ಕೋಟ್‌ ಕಾಂಗ್ರೆಸ್‌ ದುರಾಡಳಿತದಿಂದ ಬೇಸತ್ತಿರುವ ಜನತೆ ಲೋಕಸಭೆ ಮತ್ತು ವಿಧಾನ ಪರಿಷತ್ತು ಚುನಾವಣೆಗಳಲ್ಲಿ ಕಾಂಗ್ರೆಸ್‌ ತಿರಸ್ಕರಿಸಿದ್ದಾರೆ. ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳೇ ಜಯಗಳಿಸುವರು. ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಸರ್ಕಾರ ಜನವಿರೋಧಿ, ರೈತವಿರೋಧಿ, ಬಡವರು ಹಾಗೂ ದೀನ ದಲಿತರ ವಿರೋಧಿಯಾಗಿದೆ

- ಎಚ್‌.ಎಸ್. ಶಿವಕುಮಾರ್‌, ಮುಖಂಡ, ಬಿಜೆಪಿ

- - - -20ಕೆಸಿಎನ್ಜಿ1:

ಪೆಟ್ರೋಲ್, ಡಿಸೇಲ್ ದರ ಏರಿಕೆ ಖಂಡಿಸಿ ಚನ್ನಗಿರಿ ತಾಲೂಕು ಬಿಜೆಪಿ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.