ಕೆಂಪು ಕಲ್ಲು ಖರೀದಿಗೂ ಇನ್ನು ಆ್ಯಪ್‌ ವ್ಯವಸ್ಥೆ: ಸ್ಪೀಕರ್‌

| Published : Jul 25 2025, 12:43 AM IST / Updated: Jul 25 2025, 12:51 AM IST

ಕೆಂಪು ಕಲ್ಲು ಖರೀದಿಗೂ ಇನ್ನು ಆ್ಯಪ್‌ ವ್ಯವಸ್ಥೆ: ಸ್ಪೀಕರ್‌
Share this Article
  • FB
  • TW
  • Linkdin
  • Email

ಸಾರಾಂಶ

ಈ ಹಿಂದೆ ಜಾರಿಗೆ ತರಲಾಗಿದ್ದ ಸ್ಯಾಂಡ್‌ ಬಜಾರ್‌ ಆ್ಯಪ್‌ ಮೂಲಕ ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಮರಳು ಲಭ್ಯವಾಗುತ್ತಿತ್ತು. ಅದೇ ಮಾದರಿಯಲ್ಲಿ ಕೆಂಪು ಕಲ್ಲು ಕೂಡ ಲಭ್ಯವಾಗುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ಸ್ಪೀಕರ್ ಯು.ಟಿ.ಖಾದರ್ ಭರವಸೆ ನೀಡಿದ್ದಾರೆ.

ದ.ಕ.ದಲ್ಲಿ ಕೆಂಪು ಕಲ್ಲು ಸಮಸ್ಯೆಗೆ ಶೀಘ್ರ ಪರಿಹಾರ ಭರವಸೆ

ಕನ್ನಡಪ್ರಭ ವಾರ್ತೆ ಮಂಗಳೂರು

ಮರಳು ವಿತರಣೆಗಾಗಿ ಇರುವ ‘ಸ್ಯಾಂಡ್‌ ಬಜಾರ್‌’ ಆ್ಯಪ್‌ ಮಾದರಿಯಲ್ಲಿ ಕೆಂಪು ಕಲ್ಲು ಖರೀದಿಗೆ ಆ್ಯಪ್‌ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್‌ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಜಾರಿಗೆ ತರಲಾಗಿದ್ದ ಸ್ಯಾಂಡ್‌ ಬಜಾರ್‌ ಆ್ಯಪ್‌ ಮೂಲಕ ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಮರಳು ಲಭ್ಯವಾಗುತ್ತಿತ್ತು. ಅದೇ ಮಾದರಿಯಲ್ಲಿ ಕೆಂಪು ಕಲ್ಲು ಕೂಡ ಲಭ್ಯವಾಗುವಂತೆ ವ್ಯವಸ್ಥೆ ಮಾಡಲಾಗುವುದು. ಸರ್ಕಾರಿ ದರದಲ್ಲಿ ಕೆಂಪು ಕಲ್ಲನ್ನು ಅಗತ್ಯ ಇರುವವರ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ನೂತನ ಆ್ಯಪ್‌ ಮೂಲಕ ಮಾಡಲಾಗುವುದು ಎಂದು ಹೇಳಿದರು.

ಶೀಘ್ರ ಸಮಸ್ಯೆ ಪರಿಹಾರ:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಸಮಸ್ಯೆ ಪರಿಹಾರ ಮಾಡುವ ಉದ್ದೇಶದಿಂದ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಬೆಂಗಳೂರಲ್ಲಿ 2ನೇ ಹಂತದ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಅಧಿಕಾರಿಗಳು ವಹಸಬೇಕಾದ ಕ್ರಮಗಳ ಕುರಿತು ಸೂಚಿಸಲಾಗಿದೆ. ಈ ಸಮಸ್ಯೆ ಶೀಘ್ರ ಬಗೆಹರಿಯಲಿದೆ ಎಂದು ಯು.ಟಿ. ಖಾದರ್‌ ತಿಳಿಸಿದರು.ಕಲ್ಲುಕ್ವಾರಿ ನಿಯಮ ಸರಳೀಕರಣ ಮಾಡುವ ಮೂಲಕ ಸರಿಯಾದ ಸಮಯಕ್ಕೆ ಕೆಂಪು ಕಲ್ಲು ದೊರೆಯಲು ಆದ್ಯತೆ ನೀಡಲಾಗಿದೆ. ಇದಕ್ಕಾಗಿ ಸಿಂಗಲ್‌ ವಿಂಡೋ ಸಿಸ್ಟಂ ಜಾರಿಗೊಳಿಸಲಾಗುತ್ತಿದೆ ಎಂದವರು ಸ್ಪಷ್ಟಪಡಿಸಿದರು.