ಸಾರಾಂಶ
ಕುದೂರು: ಗುಂಪೊಂದು ಮಾರಕಾಸ್ತ್ರಗಳೊಂದಿಗೆ ಮನೆಗೆ ನುಗ್ಗಿ ದಂಪತಿ ಮೇಲೆ ಹಲ್ಲೆ ನಡೆಸಿರುವ ಘಟನೆ ಸೋಲೂರು ಹೋಬಳಿ ಗಂಗೇನಪುರ ಗ್ರಾಮದಲ್ಲಿ ನಡೆದಿದೆ.
ಕುದೂರು: ಗುಂಪೊಂದು ಮಾರಕಾಸ್ತ್ರಗಳೊಂದಿಗೆ ಮನೆಗೆ ನುಗ್ಗಿ ದಂಪತಿ ಮೇಲೆ ಹಲ್ಲೆ ನಡೆಸಿರುವ ಘಟನೆ ಸೋಲೂರು ಹೋಬಳಿ ಗಂಗೇನಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹನುಮಯ್ಯ-ರಾಜಮ್ಮ ದಂಪತಿ ಹಲ್ಲೆಗೊಳಗಾದವರು. ಅದೇ ಗ್ರಾಮದ ಜಿ.ಎಸ್.ಬಸವರಾಜು ಅಲಿಯಾಸ್ ರಾಜಣ್ಣ, ಬಸವರಾಜು, ಪ್ರೇಮಕುಮಾರಿ ಕೃತ್ಯ ಎಸಗಿದವರು. ಈ ಮೂವರು ಆರೋಪಿಗಳು ಮನೆಗೆ ಅತಿಕ್ರಮ ಪ್ರವೇಶ ಮಾಡಿ ಹನಮಯ್ಯರ ಮೇಲೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಪತಿಯನ್ನು ರಕ್ಷಿಸಲು ಬಂದ ರಾಜಮ್ಮ ಅವರನ್ನು ಎಳೆದಾಡಿ ಹಲ್ಲೆ ಮಾಡಿದ್ದಾರೆ. ಸೋಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನಂತರ ನೆಲಮಂಗಲ ಮನಸ್ವಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಗಾಯಾಳು ಹನುಮಯ್ಯ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.